ಬಿವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಕಾಂಗ್ರೆಸ್ ನ ಹಿರಿಯ ನಾಯಕ
ಶಿವಮೊಗ್ಗ, ಜನವರಿ 26: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಜರ್ಜರಿ ತಯಾರಿ ನಡೆಸಿದೆ. ಆದರೆ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಲಿಂಗಾಯತ ನಾಯಕ ಶಾಮನೂರು ಶಿವಶಂಕರಪ್ಪ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಸದ ಗೆಲುವು ಸಾಧಿಸಲಿ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.
ಹೌದು, ಈ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿ, ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಗೆಲ್ಲಬೇಕು. ಅವರನ್ನು ಆಯ್ಕೆ ಮಾಡುವುದು ಜನರ ಕರ್ತವ್ಯ ಎಂದು ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಜನರು ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಆಗಿದೆ. ಜನರ ಅಭಿಲಾಷೆಯಂತೆ ರಾಘವೇಂದ್ರ ಅವರು ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮುಂದಿನ 2-3 ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಮುಂದೆಯೂ ರಾಘವೇಂದ್ರರನ್ನು ಆಯ್ಕೆ ಮಾಡಬೇಕಿರುವುದು ಜನರ ಕರ್ತವ್ಯ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹೇಳೀದ್ದಾರೆ.
ಲೋಕಸಭಾ ಚುನಾವಣೆಗೆ ಕಾರ್ಯತಂತ್ರ: ವಿಜಯೇಂದ್ರ
ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಭೆ ನಡೆಯಲಿದೆ. ರಾಜ್ಯದಲ್ಲಿರುವ ಬಡವರು, ರೈತರು ಮತ್ತು ದಲಿತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕು. ಬಡವರ ವಿರೋಧಿ ಸರಕಾರದ ಬಗ್ಗೆ ಜನರಿಗೆ ಸತ್ಯಾಂಶಗಳನ್ನು ತಲುಪಿಸಬೇಕು ಎಂದು ಯೋಜಿಸಿದ್ದೇವೆ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳಿಂದ ದೇಶಾದ್ಯಂತ ಜನತೆ ಮೋದಿಜೀ ಪರವಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಉದ್ದೇಶಿಸಲಾಗಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವನ್ನಾಗಿ ಪರಿವರ್ತಿಸಿ ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿ ಹೆಬ್ಬಾಗಿಲು ಎಂದು ಸಾಬೀತು ಪಡಿಸುತ್ತೇವೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ಎಲ್ಲ ವಿಷಯಗಳ ಸಮಾಲೋಚನೆ ಮಾಡಿ, ಮುಂದಿನ ಲೋಕಸಭಾ ಚುನಾವಣೆಗೆ ಬೇಕಾದ ಕಾರ್ಯತಂತ್ರವನ್ನು, ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ಎಂದು ಪ್ರಕಟಿಸಿದರು. ಕೇಂದ್ರ ಸಚಿವ ಭೂಪೇಂದ್ರ ಯಾದವ್‍ಜೀ ಅವರು ನಾಳೆ ಕಾರ್ಯಕಾರಿಣಿ ಉದ್ಘಾಟಿಸುತ್ತಾರೆ. ಪಕ್ಷದ ಎಲ್ಲ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ವೇದಿಕೆ ಮೇಲೆ ಇರುತ್ತಾರೆ. ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಸುವ ಕುರಿತು ಚರ್ಚಿಸುತ್ತೇವೆ ಎಂದು ತಿಳಿಸಿದರು.
28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇದೆ. ರಾಜ್ಯದಾದ್ಯಂತ ನರೇಂದ್ರ ಮೋದಿಜೀ ಅವರ ಪರವಾದ ಅಲೆ ಇದೆ. ಹಾಗಾಗಿ ಈ ವಿಚಾರದಲ್ಲಿ ನನಗೆ ವಿಶ್ವಾಸ ಇದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಮೋದಿಜೀ ಅವರ ನಾಯಕತ್ವ ಮತ್ತು ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಬರುವ ಯಾವುದೇ ನಾಯಕರನ್ನು ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಎಂದರು.
ಜಗದೀಶ್ ಶೆಟ್ಟರ್ ಅವರ ಮನಸ್ಸು ಬಿಜೆಪಿಯಲ್ಲೇ ಇತ್ತು. ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆಯೂ ಇತ್ತು. ಅಪೇಕ್ಷೆಗೆ ತಕ್ಕಂತೆ ಉತ್ತಮ ನಿರ್ಧಾರ ಮಾಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎಂಬ ಕುರಿತು ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ಅನುಗುಣವಾಗಿ ಈ ನಿರ್ಧಾರ ಇರಲಿದೆ ಎಂದು ತಿಳಿಸಿದರು.












Click it and Unblock the Notifications