Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು, ಜೂನ್‌ 06: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಹೈದರಾಬಾದ್‍ನಲ್ಲಿ 18ಕ್ಕೂ ಹೆಚ್ಚು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ ಇದು ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

BY Vijayendra A Request Has Been Made To Governor Demanding The Resignation Of Siddaramaiah

ಮುಖ್ಯಮಂತ್ರಿಗಳ ಗಮನಕ್ಕೆ ಬರದೇ ಈ ಹಗರಣ ನಡೆದಿರಲು ಸಾಧ್ಯವಿಲ್ಲ. ಕೇವಲ ಸಚಿವರ ರಾಜೀನಾಮೆ ಪಡೆದರೆ ಸಾಲದು ಎಂದು ಅವರು ನುಡಿದರು. ರಾಜ್ಯದ ಇತಿಹಾಸದಲ್ಲಿ ಇಂಥ ದೊಡ್ಡ ಹಗರಣ ನಡೆದಿರಲಿಲ್ಲ ಎಂದು ತಿಳಿಸಿದರು. ಹಗರಣ ನಡೆದು ಇಷ್ಟು ದಿನ ಆದರೂ ಸಚಿವರ ರಾಜೀನಾಮೆ ಪಡೆಯಲು ಸಿಎಂ ಹಿಂದೆ ಮುಂದೆ ನೋಡುತ್ತಿದ್ದಾರೆ. ಸಿಬಿಐ ತನಿಖೆಗೆ ಕೋರಿದ್ದು, ಅದಕ್ಕೂ ಮಣಿದಿಲ್ಲ ಎಂದು ಆಕ್ಷೇಪಿಸಿದರು.
ಈ ವಿಚಾರವನ್ನು ಇಲ್ಲಿಗೇ ಕೈಬಿಡುವುದಿಲ್ಲ. ವಿಪಕ್ಷವಾಗಿ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಮುಖ್ಯಮಂತ್ರಿಯವರು ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಆನೆ ನಡೆದಿದ್ದೇ ದಾರಿ ಎಂಬಂತೆ ಮುಖ್ಯಮಂತ್ರಿಯವರ ವರ್ತನೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.

ಈ ವಿಷಯದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡಲಿದ್ದೇವೆ ಎಂದು ಅವರು ಎಚ್ಚರಿಸಿದರು. 20 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಹೇಳಿದ್ದೀರಿ; ಈಗ ಸರಕಾರದ ಯೋಗ್ಯತೆ ಏನೆಂದು ಮತದಾರರು ತೋರಿಸಿಕೊಟ್ಟಿದ್ದಾರೆ. ಸಿದ್ದರಾಮಯ್ಯ ಸರಕಾರಕ್ಕೆ ಧಿಕ್ಕಾರ, ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗುತ್ತ. ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ದುರುಪಯೋಗದ ಹಗರಣಕ್ಕೆ ಸಂಬಂಧಿಸಿ ನಾಗೇಂದ್ರರ ರಾಜೀನಾಮೆ ಪಡೆಯದೆ ಇರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಲಾಯಿತು. ಕೂಡಲೇ ನಾಗೇಂದ್ರರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಲಾಯಿತು.

ಕೊಡಲೇಬೇಕು, ಕೊಡಲೇಬೇಕು ರಾಜೀನಾಮೆ ಕೊಡಲೇಬೇಕು, ದಲಿತರ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಿದ ಸರಕಾರಕ್ಕೆ ಧಿಕ್ಕಾರ, ಭ್ರಷ್ಟ ಸಿದ್ದರಾಮಯ್ಯ ಸರಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆಗಳನ್ನು ಮೊಳಗಿಸಲಾಯಿತು. ಸಚಿವರ ವಜಾಕ್ಕೆ ಆಗ್ರಹಿಸುವ ಫಲಕಗಳೊಂದಿಗೆ ಶಾಸಕರು, ಮುಖಂಡರು ಭಾಗವಹಿಸಿದ್ದರು.

ಪರಿಶಿಷ್ಟ ಸಮುದಾಯಕ್ಕೆ ಸೇರಿದ ಹಣವನ್ನು ಅಕ್ರಮವಾಗಿ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳಿಗೆ ಭಯ ಇದ್ದಂತಿದೆ ಎಂದು ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಪ್ರಕರಣವನ್ನು ರಾಜ್ಯ ಸರಕಾರವು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದೂ ಅವರು ಒತ್ತಾಯಿಸಿದರು.

ದಲಿತರ ಅಭಿವೃದ್ಧಿಗಾಗಿ ಬಳಸಬೇಕಿದ್ದ ಹಣವನ್ನು ಹೈದರಾಬಾದ್‍ನಲ್ಲಿ 18 ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ವರ್ಗಾಯಿಸಲಾಗಿದೆ ಎಂದೂ ಆಕ್ಷೇಪಿಸಿದರು. ಹಿಂದಿನಿಂದಲೂ ನಾವು ಸಚಿವರ ರಾಜೀನಾಮೆ ಪಡೆಯಲು ಆಗ್ರಹಿಸಿದ್ದೆವು. ಆದರೂ ಅವರು ಸ್ಪಂದಿಸಿಲ್ಲ ಎಂದು ಟೀಕಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+