ಕಾಂಗ್ರೆಸ್‌ ಈ ಕಾರಣಕ್ಕೆ ವಿ.ವಿಗಳನ್ನು ಮುಚ್ಚುತ್ತಿದೆ: ವಿಜಯೇಂದ್ರ ಗಂಭೀರ ಆರೋಪ

ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಿದೆ ಎಂಬ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಆ ಒಂದು ಕಾರಣಕ್ಕಾಗಿ ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಗಳಿಗೆ ಬೀಗ ಜಡಿಯಲು ತುದಿಗಾಲಲ್ಲಿ ನಿಂತಿದೆ ಎಂದು ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಜ್ಞಾನ ಗಂಗೆಯ ಆಲಯಗಳನ್ನು ಬರಿದು ಮಾಡಿ, ಅಕ್ಷರ ದೀವಿಗೆಯನ್ನು ನಂದಿಸಲು ಹೊರಟಿದೆ. ಹೀಗಾಗಿ ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟು, ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವಿವೇಕತನದ ಪರಮಾವಧಿ ಎಂದು ದೂಷಿಸಿದ್ದಾರೆ.

BY Vijayendra Accuses Congress Govt Of Planning University Closures For Guarantee Schemes

ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ ಸರಳವಾಗಿ, ಸುಲಭವಾಗಿ ದೊರೆಯಬೇಕು ಎಂಬ ಮಹತ್ವದ ಉದ್ದೇಶದಿಂದ 9 ವಿಶ್ವವಿದ್ಯಾನಿಲಯಗಳನ್ನು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದಿತ್ತು. ಇವುಗಳ ಅಭಿವೃದ್ಧಿಗಾಗಿ ಮೀಸಲಿರಿಸಬೇಕಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿಕೊಳ್ಳುವ ಕಾರಣಕ್ಕಾಗಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿದೆ ಎಂದು ಆರೋಪ ಮಾಡಿದ್ದಾರೆ. ಕರ್ನಾಟಕ ಸರ್ಕಾರದ ಈ ನಿರ್ಧಾರ ಶಿಕ್ಷಣ ಹಾಗೂ ಅಭಿವೃದ್ಧಿ ವಿರೋಧಿಯ ಧೋರಣೆಯನ್ನು ಸಾಕ್ಷೀಕರಿಸುತ್ತದೆ ಎಂದಿದ್ದಾರೆ.

ಇತಿಹಾಸದಿಂದಲೂ ದಕ್ಷಿಣ ಭಾರತದಲ್ಲಿ ಕರ್ನಾಟಕ ರಾಜ್ಯವು "ಶಿಕ್ಷಣ ಕಾಶಿ" ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದಕ್ಕೆ ಹಿನ್ನಡೆಯುಂಟು ಮಾಡುವ ನಿರ್ಧಾರಗಳನ್ನು ಈ ಹಿಂದಿನ ಯಾವ ಸರ್ಕಾರಗಳೂ ಕೈಗೊಂಡಿರಲಿಲ್ಲ. ಆದರೆ ಈ ಕಾಂಗ್ರೆಸ್ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

BY Vijayendra Accuses Congress Govt Of Planning University Closures For Guarantee Schemes

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪಡೆಯಲು ಸಂಕಷ್ಟ ಎದುರಿಸುತ್ತಿದ್ದ ವಿವಿಧ ಪ್ರದೇಶಗಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಂಡ್ಯ, ಮಹರಾಣಿ ಕ್ಲಸ್ಟರ್, ನೃಪತುಂಗ ಸೇರಿದಂತೆ ಇತರ ಹಿಂದುಳಿದ ಪ್ರದೇಶಗಳ ವಿಶ್ವವಿದ್ಯಾನಿಲಯಗಳನ್ನು ತೆರೆಯಲಾಗಿತ್ತು ಎಂದಿದ್ದಾರೆ.

ಈಗ ಇದನ್ನು ಮುಚ್ಚಿಸಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ಹಿಂದಿನ ಯೋಚನೆ ಶಿಕ್ಷಣ ವಿರೋಧಿ ನೀತಿಯ ವಿಕೃತ ನಡೆಯಾಗಿದೆ. ಈ ಕೂಡಲೇ ಸರ್ಕಾರ ತನ್ನ ಈ ನಿರ್ಧಾರವನ್ನು ಕೈ ಬಿಟ್ಟು, ಈ ಒಂಬತ್ತು ವಿಶ್ವವಿದ್ಯಾನಿಲಯಗಳ ಅಸ್ತಿತ್ವವನ್ನು ಉಳಿಸಿ, ಅಭಿವೃದ್ಧಿಗೆ ಸೂಕ್ತ ಅನುದಾನ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.

BY Vijayendra Accuses Congress Govt Of Planning University Closures For Guarantee Schemes

ಕಾಂಗ್ರೆಸ್‌ ಸರ್ಕಾರದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಗ್ರಹಣ ಎಂದು ಜೆಡಿಎಸ್‌ ಪಕ್ಷ ಕೂಡ ಟೀಕಿಸಿದೆ. ಸಿದ್ದರಾಮಯ್ಯ ಸರ್ಕಾರ ಅನುದಾನ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಕಲ್ಲು ಹಾಕುತ್ತಿದೆ. ರಾಜ್ಯದ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳಿಗೆ ಬೀಗ ಹಾಕಲು ತೀರ್ಮಾನಿಸಿದೆ. ಬೆಂಗಳೂರಿನ ಮಹಾರಾಣಿ ಕ್ಲಸ್ಟರ್, ಬೆಂಗಳೂರಿನ ನೃಪತುಂಗ, ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಂಡ್ಯ ವಿವಿಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ ಎಂದಿದೆ. ಬೊಕ್ಕಸವನ್ನು ಖಾಲಿ ಮಾಡಿ ಎಲ್ಲ ಕ್ಷೇತ್ರಗಳನ್ನು ಕಡೆಗಣಿಸುತ್ತಾ, ಜನವಿರೋಧಿ ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದು ಕಾಂಗ್ರೆಸ್‌ ಸರ್ಕಾರದ ಅದಕ್ಷ ಆಡಳಿತಕ್ಕೆ ಹಿಡಿದಿರುವ ಕೈಗನ್ನಡಿ ಎಂದು ಹರಿಹಾಯ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+