ಹೆಚ್‌ ಡಿ ದೇವೇಗೌಡರನ್ನ ಭೇಟಿ ಮಾಡಿದ ವಿಜಯೇಂದ್ರ, ಪ್ರಜ್ವಲ್‌ ರೇವಣ್ಣ!

ಬೆಂಗಳೂರು, ನವೆಂಬರ್‌ 13: 2024 ರ ಲೋಕಸಭಾ ಚುನಾವನೆ ಹಿನ್ನಲೆ ಕರ್ನಾಟಕ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಸಮುದಾಯದ ಹಿರಿಯ ನಾಯಕ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಬಿ ವೈ ವಿಜಯೇಂದ್ರ ಅವರು ಫುಲ್‌ ಆಕ್ಟಿವ್‌ ಆಗಿದ್ದಾರೆ.

ಹೌದು, ಸೋಮವಾರ ಜೆಡಿಎಸ್‌ ವರಿಷ್ಠರು ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರನ್ನ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ಮಾಡಿದ್ದು, ದೇವೇಗೌಡರನ್ನ ಸನ್ಮಾನಿಸಿದ್ದಾರೆ. ಅಲ್ಲದೇ ಈ ವೇಳೆ ಹಾಸನ ಸಂಸದರಾದ ಪ್ರಜ್ವಲ್‌ ರೇವಣ್ಣ ಅವರು ಉಪಸ್ಥಿತರಿದ್ದರು. ಮಾಜಿ ಪ್ರಧಾನಿ ದೇವೇಗೌಡ ಅವರ ಜೊತೆಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ರಾಜಕೀಯ ಹಾಗೂ ಲೋಕಸಭಾ ಚುನಾವಣೆಯ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

BY Vijayendra And Prajwal Revanna Meets HD Deve Gowda

ಇನ್ನೂ ಆರ್‌ ಟಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ವಿಜಯೇಂದ್ರ ಅವರು ಭೇಟಿ ಮಾಡಿದ್ದು, ಬಸವರಾಜ ಬೊಮ್ಮಾಯಿ ಅವರ ಆರೋಗ್ಯವನ್ನ ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆಗೆ ವಿಜಯೇಂದ್ರ ಮಾತನಾಡಿ, ನಿಕಟಪೂರ್ವ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ. ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ. ಅವರು ಬಹಳ ಸಂತೋಷ ಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನ ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಬೊಮ್ಮಾಯಿಯವರು ಹೇಳಿದ್ದಾಗಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾಗಿ ವಿವರಿಸಿದರು. ನಾನಷ್ಟೇ ಅಲ್ಲ, ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ; ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಮಾತನಾಡಿದ್ದಾರೆ. ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ತಿಳಿಸಿದ್ದಾರೆ ಎಂದು ಹೇಳಿದರು.

ಇದೇ 15ರಂದು ಬುಧವಾರ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದ ಮಾಡಬೇಕೆಂದು ಕೋರಿದ್ದೇನೆ. ಬರಲೆತ್ನಿಸುವುದಾಗಿ ತಿಳಿಸಿದ್ದಾರೆ ಎಂದು ನುಡಿದರು. ಬಿ.ವೈ.ವಿಜಯೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿ ಶುಭ ಹಾರೈಸಿದರು. ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+