BY Vijayendra: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ!

ಬೆಂಗಳೂರು, ನವೆಂಬರ್‌ 10: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನೂತನ ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್‌ ಬಿ ವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್‌ ನೀಡಿದೆ.

by-vijayendra-appointed-as-president

ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್‌ ಕುಮಾರ್‌ ಕಟೀಲ್‌ ಅವರ ವಿರುದ್ಧ ಬಿಜೆಪಿ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಕೇಳಿ ಬಂದಿತ್ತು.

ಅಲ್ಲದೇ 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವುದು ಬಿಜೆಪಿ ಅನಿವಾರ್ಯವಾಗಿದ್ದು, ಬಿ ಎಸ್‌ ಯಡಿಯೂರಪ್ಪ ಅವರ ಅನಿವಾರ್ಯತೆ ಬಿಜೆಪಿ ಬಹುಮುಖ್ಯವಾಗಿದೆ. ಹೀಗಾಗಿ ಯಡಿಯೂರಪ್ಪ ಅವರನ್ನ ಪಕ್ಷದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಹೈಕಮಾಂಡ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನ ನೀಡಿದೆ.

2023 ರ ವಿಧಾನಸಭಾ ಚುನಾವಣೆ ಮುನ್ನ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್‌ ಯಡಿಯೂರಪ್ಪ ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದ ಕಾರಣಕ್ಕೆ ಪಕ್ಷಕ್ಕೆ ಹಿನ್ನಡೆಯಾಗಿದೇ ಎಂದು ಬಿಜೆಪಿ ಬಹುತೇಕ ನಾಯಕರು ಬಹಿರಂಗವಾಗಿ ಅಸಮಾಧಾನ ಹೊರಹಾಕಿತ್ತು. ಅಲ್ಲದೇ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೂ ಸಹ ಯಡಿಯೂರಪ್ಪ ಅವರನ್ನ ಸಹ ಪಕ್ಷದ ಕಾರ್ಯಕ್ರಮದಿಂದ ಕಡೆಗಣಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಇನ್ನೂ ಇದೆ ರೀತಿಯ ಸನ್ನಿವೇಶ ಲೋಕಸಭಾ ಚುನಾವಣೆಯಲ್ಲೂ ಸೃಷ್ಟಿಯಾಗಬಹುದು ಎಂದು ಬಿಜೆಪಿ ಹೈಕಮಾಂಡ್‌ ನಾಯಕ ಲೆಕ್ಕಚಾರವಾಗಿದ್ದು, ಯಡಿಯೂರಪ್ಪ ಅವರ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕೆಲವು ಲಿಂಗಾಯತ ನಾಯಕರಿಗೆ ಟಿಕೆಟ್‌ ಕೈ ತಪ್ಪಿದ ಕಾರಣ ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಲ್ಲಿ ಲಿಂಗಾಯತರನ್ನ ಕಡೆಗಣಿಸಲಾಗಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದರಿಂದಾಗಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದೇ ರೀತಿಯ ಸನ್ನಿವೇಶ ಮತ್ತೆ ಮರುಕಳಿಸಬಾರದು ಎಂದು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದ್ದು, ಲಿಂಗಾಯತ ಸಮುದಾಯವನ್ನು ಸೆಳೆದುಕೊಳ್ಳುವ ಪ್ರಯತ್ನದ ಭಾಗವಾಗಿ ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.

ಯುವ ನಾಯಕತ್ವದ ಬಗ್ಗೆ ಹೈಕಮಾಂಡ್ ಒಲವು ವ್ಯಕ್ತಪಡಿಸಿದ್ದು, ವಿಜಯೇಂದ್ರ ಅವರಿಗೆ ಮಣೆ ಹಾಕಿದೆ. ಅಲ್ಲದೇ ಬಿಜೆಪಿ ಯುವ ಮೋರ್ಚಾದಲ್ಲಿ ಇರುವ ವಿಜಯೇಂದ್ರಗೆ ಇರುವ ನೆಟ್​​ವರ್ಕ್ ಬಳಸಿಕೊಳ್ಳುವುದರ ಜತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಪ್ರಯತ್ನದ ಭಾಗವಾಗಿಯೂ ವಿಜಯೇಂದ್ರ ಅವರಿಗೆ ಈ ಪಟ್ಟವನ್ನ ನೀಡಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+