BY Vijayendra: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಮುಂದುವರಿಕೆ..!
ಬೆಂಗಳೂರು, ಫೆಬ್ರವರಿ 03: ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ವಿರೋಧಿ ಬಣ ಬಹಿರಂಗವಾಗಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದ್ದು, ಸದ್ಯ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗಳಿಗೆ ನಡುವೆ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರಕ್ಕೆ ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಎನ್ನುವ ಚರ್ಚೆ ಕಮಲ ಪಾಳಯದಲ್ಲಿ ನಡೆಯುತ್ತಿದೆ. ಆದರೆ, ಭಿನ್ನಮತೀಯರ ವಿರೋಧವನ್ನು ಲೆಕ್ಕಿಸದೆ, ಕರ್ನಾಟಕದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ಒಲವು ತೋರದ ಕೇಂದ್ರದ ಬಿಜೆಪಿ ವರಿಷ್ಠರು, ಹಾಲಿ ಅಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಲು ಮುಂದಾಗಿದ್ದಾರೆ.

ಬಿಜೆಪಿಯ ಇತಿಹಾಸದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಣಾಹಣಿ ನಡೆದ ಉದಾಹರಣೆ ಇಲ್ಲ. ಹೀಗಾಗಿ ಈ ಸಂಪ್ರದಾಯವನ್ನು ಮುರಿಯದೆ ಇರಲು ಬಿಜೆಪಿ ಹೈಕಮಾಂಡ್ ತಿರ್ಮಾನ ಮಾಡಿದೆ ಎಂದು ಹೇಳಲಾಗಿದೆ. ಬಿಜೆಪಿಯ ಉನ್ನತ ನಾಯಕರು ಮತಪತ್ರದ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಒತ್ತಾಯಿಸಿದ್ದಾರೆ.
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರೋಧದ ನಡುವೆ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ್ಥ ನಾಯಕತ್ವ ಅಭ್ಯರ್ಥಿ ಕಣಕ್ಕಿಳಿಸಲು ಬಿಜೆಪಿಯಲ್ಲಿ ಚರ್ಚಿಸಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರಿರುವ ಬಣದಲ್ಲಿ ಮಹತ್ವದ ಸಭೆಗಳು ನಡೆದಿವೆ. ಹೀಗಾಗಿ ಕರ್ನಾಟಕದಲ್ಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆಗಳು ದಿನದಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಹಾಲಿ ಅಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನೇ ಮುಂದುವರೆಸಲು ಕೇಂದ್ರ ವರಿಷ್ಟರು ಸಮತಿಸಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಅಧ್ಯಕ್ಷರ ಬದಲಾವಣೆ ಕೂಗಿಗೆ ವರಿಷ್ಠರು ತಡೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಚುನಾವಣೆ ಇಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ನಡೆಯುವುದು ಬಹುತೇಕ ಖಾತ್ರಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನೇ ಮುಂದುವರಿಸುವ ಸಾಧ್ಯತೆ ಬಲವಾಗಿದೆ. ಈಗ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ವರಿಷ್ಠರು ಒಲವು ತೋರದೇ ಇರುವುದರಿಂದ ಯಾರು ರಾಜ್ಯಾಧ್ಯಕ್ಷ ಎಂಬ ಪ್ರಶ್ನೆ ಉದ್ಭವವಾಗಿತ್ತು. ಇದೀಗ ಬಿಜೆಪಿಯ ಆಂತರಿಕ ಮೂಲಗಳ ಪ್ರಕಾರ ವಿಜಯೇಂದ್ರ ಅವರೇ ಈ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಅಧಿಕವಾಗಿದೆ ಎಂದು ತಿಳಿದು ಬಂದಿದೆ.
ಇದೇ ತಿಂಗಳ ಅಂತ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಇದರ ಭಾಗವಾಗಿ ಶೇ. 50ರಷ್ಟು ರಾಜ್ಯಗಳಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣವಾಗಬೇಕು. ಹಲವು ರಾಜ್ಯಗಳಲ್ಲಿ ಜಿಲ್ಲಾ ಹಾಗೂ ರಾಜ್ಯಾಧ್ಯಕ್ಷರ ಪಟ್ಟಿ ಪ್ರಕಟವಾಗಲಿದೆ. ಅಲ್ಲದೇ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಇದು ಅಧಿಕೃತವಾಗಿ ಪ್ರಕಟವಾಗಲಿದ್ದು, ವಿಜಯೇಂದ್ರ ಅವರನ್ನು ಬದಲಾವಣೆಗೆ ಪಟ್ಡು ಹಿಡಿದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ತಂಡಕ್ಕೆ ಭಾರೀ ಹಿನ್ನಡೆಯಾಗುವ ಸಾಧ್ಯತೆ ಇದೆ.
ಮೊದಲ ಬಾರಿಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ಗೆದ್ದು ಬೀಗಿದ್ದ ಶಾಸಕ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಜವಾಬ್ದಾರಿ ಕಬ್ಬಿಣದ ಕಡಲೆಯಂತಾಯಿತು. ಈಗಾಗಲೇ ಕಮಲ ಪಾಳಯದಲ್ಲಿ ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದಲ್ಲಿ ಬಿಜೆಪಿಯ ಸಾಂಸ್ಥಿಕ ಚುನಾವಣೆಗಳ ಉಸ್ತುವಾರಿಯಾಗಿ ಕೇಂದ್ರ ವರಿಷ್ಠರು ನಿಯೋಜಿಸಿದ್ದಾರೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರ ತಾವೇ ಮುಂದುವರೆಯುವ, ಅಧಿಕಾರದಲ್ಲಿ ಉಳಿಯುವ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ ಚುನಾವಣೆಗೆ ಬ್ರೇಕ್ ಹಾಕಲು ವರಿಷ್ಠರು ಮುಂದಾಗಿದ್ದಾರೆ ಎನ್ನಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications