ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ; ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಏನಂದ್ರು?
ಬೆಂಗಳೂರು, ಜೂನ್. 01: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸಿಐಡಿ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಇದಕ್ಕೆ ರಾಜ್ಯ ಬಿಜೆಪಿ ಆಕ್ರೋಶ ಹೊರಹಾಕಿದೆ.
ಶಿವಮೊಗ್ಗ ಜಿಲ್ಲೆ ವಿನೋಬನಗರ ಪೊಲೀಸ್ ಠಾಣೆ ಮತ್ತು ಬೆಂಗಳೂರು ನಗರ ಹೈಗೌಂಡ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸಿದ್ದರಾಮಯ್ಯ ಕೂಡ ಹೇಳಿಕೆ ಹಂಚಿಕೊಂಡಿದ್ದಾರೆ.

ಪ್ರಕರಣವನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಎಸ್ಐಟಿ ರಚನೆ
"ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ದಿಕ್ಕು ತಪ್ಪಿಸಿ ಭ್ರಷ್ಟರನ್ನು ರಕ್ಷಿಸುವ ಉದ್ದೇಶದಿಂದ ಎಸ್ಐಟಿ ರಚನೆ ಮಾಡುವ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆರೋಪಿತರನ್ನು ರಕ್ಷಿಸಲು ಹೊರಟಿದೆ. ಎಸ್.ಐ.ಟಿ ರಚನೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು ಇದನ್ನು ಭಾರತೀಯ ಜನತಾ ಪಾರ್ಟಿಯು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
"ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಅವರು ಸಾವಿಗೂ ಮುನ್ನ ಬರೆದ ಡೆತ್ ನೋಟ್ ನಲ್ಲಿ ಈಗಾಗಲೇ ಉಲ್ಲೇಖವಾಗಿರುವಂತೆ ಸ್ವತಃ ಸಚಿವ ಬಿ ನಾಗೇಂದ್ರ ಹೆಸರಿರುವುದು ಬಹಿರಂಗವಾಗಿದೆ. ಈ ನಿಟ್ಟಿನಲ್ಲಿ ಅವರನ್ನು ಈಗಾಗಲೇ ಸಂಪುಟದಿಂದ ಮುಖ್ಯಮಂತ್ರಿಗಳು ವಜಾಗೊಳಿಸಬೇಕಿತ್ತು. ಆದರೆ ಈವರೆಗೂ ಆರೋಪ ಹೊತ್ತವರನ್ನು ಅವ್ಯವಹಾರದ ಜಾಲದಿಂದ ರಕ್ಷಿಸುವ ಪ್ರಯತ್ನ ನಡೆಯುತ್ತಿದೆ" ಎಂದಿದ್ದಾರೆ.
"ಪರಿಶಿಷ್ಟ ಪಂಗಡದ ಹಿತಾಸಕ್ತಿಗೆ ದ್ರೋಹ ಬಗೆದು ಹಣ ದುರುಪಯೋಗ ಮಾಡಿಕೊಂಡಿರುವುದರ ವಿರುದ್ಧ ಹಾಗೂ ಅಮೂಲ್ಯ ಜೀವವೊಂದು ಆತ್ಮಹತ್ಯೆಗೆ ಈಡಾಗಿರುವುದರ ಕುರಿತು ಈ ಸರ್ಕಾರ ಎಳ್ಳಷ್ಟೂ ತಲೆ ಕೆಡಿಸಿಕೊಳ್ಳದೆ, ಯೂನಿಯನ್ ಬ್ಯಾಂಕ್ ಮೇಲೆ ಗೂಬೆ ಕೂರಿಸಲು ಹೊರಟಿದೆ. ಸದ್ಯ 'ಅಂಗೈ ಹುಣ್ಣಿಗೆ ಕನ್ನಡಿ ಬೇಕೆ' ಎಂಬ ಪರಿಸ್ಥಿತಿ ನಿರ್ಮಾಣವಾಗಿರುವುದರ ಹಿನ್ನೆಲೆಯಲ್ಲಿ ಗತ್ಯಂತರವಿಲ್ಲದೇ ಎಸ್ಐಟಿ ರಚಿಸಿ ಜನರ ಕಣ್ಣಿಗೆ ಮಣ್ಣೆರಚಲು ಹೊರಟಿದೆ" ಎಂದು ಆಕ್ರೋಶ ಹೊರಹಾಕಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ದಿಕ್ಕು ತಪ್ಪಿಸಿ ಭ್ರಷ್ಟರನ್ನು ರಕ್ಷಿಸುವ ಉದ್ದೇಶದಿಂದ ಎಸ್ಐಟಿ ರಚನೆ ಮಾಡುವ ಮೂಲಕ @INCKarnataka ಸರ್ಕಾರ ಆರೋಪಿತರನ್ನು ರಕ್ಷಿಸಲು ಹೊರಟಿದೆ. ಎಸ್.ಐ.ಟಿ ರಚನೆ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು ಇದನ್ನು ಭಾರತೀಯ ಜನತಾ ಪಾರ್ಟಿಯು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ.… pic.twitter.com/cEPCUyfPXU
— Vijayendra Yediyurappa (Modi Ka Parivar) (@BYVijayendra) May 31, 2024
"ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಂತರಾಜ್ಯ ವ್ಯಾಪ್ತಿಯಲ್ಲಿ ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಸರ್ಕಾರದ ಬಹುದೊಡ್ಡ ಹಗರಣವಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ಹೊರತುಪಡಿಸಿ ಇನ್ಯಾವ ಬಗೆಯ ತನಿಖೆಯನ್ನು ಕರ್ನಾಟಕ ಬಿಜೆಪಿ ಒಪ್ಪುವುದಿಲ್ಲ, ಸಿಬಿಐ ತನಿಖೆಯ ಬೇಡಿಕೆಗೆ ಸರ್ಕಾರ ಒಪ್ಪುವವರೆಗೂ, ಆರೋಪಿತ ಸಚಿವ ಬಿ.ನಾಗೇಂದ್ರ ಸ್ಥಾನ ತೆರವಾಗಿ ಅವರಿಗೆ ತಕ್ಕ ಶಿಕ್ಷೆಯಾಗುವವರೆಗೂ ತಾರ್ಕಿಕ ಅಂತ್ಯಕ್ಕೆ ನಾವು ಹೋರಾಟವನ್ನು ಕೊಂಡೊಯ್ಯಲಿದ್ದೇವೆ" ಎಂದು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಪ್ರಕರಣ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅನುದಾನ ಹಣವು ದುರುಪಯೋಗವಾಗಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು ಚಂದ್ರಶೇಖರ್ ಪಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಮುಖ್ಯ ನಿಬಂಧಕರಾದ ಎ. ರಾಜಶೇಖರ್ ರವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ನಗರದ ಹೈಗೌಂಡ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ಎರಡು ಪ್ರಕರಣಗಳನ್ನು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಸರ್ಕಾರವು ಪರಿಗಣಿಸಿ ಈ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳಲು ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ ಸರ್ಕಾರವು ಆದೇಶಿಸಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications