ದಾವಣೆಗೆರೆಯಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದ ಮರಿ ರಾಜಾಹುಲಿ ಹೇಳಿದ್ದೇನು?
ದಾವಣಗೆರೆ, ಜನವರಿ 01: ರಾಜ್ಯದಲ್ಲಿ ಈ ವರ್ಷ ವಾಡಿಕೆಯಂತೆ ಮಳೆಯಾಗದ ಹಿನ್ನಲೆ ರೈತ ಕಂಗಾಲಾಗಿದ್ದಾನೆ. ಇತ್ತ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನ ನಡೆಸುತ್ತಿರುವ ಬಿಜೆಪಿ ನಾಯಕರು ರಾಜ್ಯಾದ್ಯಂತ ಬರಗಾಲ ವೀಕ್ಷಣೆಗೆ ಮುಂದಾಗಿದ್ದಾರೆ.
ದಾವಣಗೆರೆ ತಾಲ್ಲೂಕಿನ ಆನಗೋಡು ಮತ್ತು ಅಣಜಿ ಮಧ್ಯದಲ್ಲಿರುವ ಜಮಾಪುರ ಗ್ರಾಮದಲ್ಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣಾ ರಾಜಕಾರಣವನ್ನು ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಬೇಕು. ತಕ್ಷಣ ಪರಿಹಾರ ಘೋಷಿಸಿ, ರೈತರಿಗೆ ನೀಡಬೇಕು ಎಂದು ಆಗ್ರಹಿಸಿದರು.

ಮರುಳಸಿದ್ದಪ್ಪ ಅವರು ಬೆಳೆದ ಮೆಕ್ಕೆ ಜೋಳ ಸಂಪೂರ್ಣವಾಗಿ ನಾಶವಾಗಿದೆ. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿದ್ದಾರೆ. ಮರುಳಸಿದ್ದಪ್ಪ ಮಾತ್ರವಲ್ಲದೆ, ಅವರ ಕುಟುಂಬಸ್ಥರಾದ ಸಿದ್ದಮ್ಮನ ಕಣ್ಣಲ್ಲೂ ನೀರನ್ನು ನೋಡಿದ್ದೀರಿ. ರೈತರ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಸರಕಾರ ಎಚ್ಚತ್ತುಕೊಂಡು ರೈತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ಬರಗಾಲ ಪರಿಹಾರ ಮೊತ್ತವನ್ನು ಘೋಷಣೆ ಮಾಡಿದರೆ ಸಾಲದು. ಅದು ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳಂತೆ ಡಿಬಿಟಿ (ನೇರ ಸೌಲಭ್ಯ ವರ್ಗಾವಣೆ) ಮೂಲಕ ತಕ್ಷಣವೇ ರೈತರನ್ನು ತಲುಪುವಂತಾಗಬೇಕು ಎಂದು ತಿಳಿಸಿದರು.
ಮೋದಿಜೀ ಅವರು ಕಿಸಾನ್ ಸಮ್ಮಾನ್ ಯೋಜನೆಯಡಿ ಡಿಬಿಟಿ ಮೂಲಕ ಕೋಟ್ಯಂತರ ರೈತರಿಗೆ 6 ಸಾವಿರ ರೂಪಾಯಿ ಜಮಾ ಮಾಡುತ್ತಾರೆ. ಯಡಿಯೂರಪ್ಪ ಅವರು 4 ಸಾವಿರ ಕೊಡುತ್ತಿದ್ದರು. ಆದರೆ, ಅದನ್ನು ಸಿದ್ದರಾಮಯ್ಯ ಸರಕಾರ ಬಂದ್ ಮಾಡಿದೆ. ಕೇಂದ್ರ ಸರಕಾರದ ಯೋಜನೆಗಳು ಮಧ್ಯವರ್ತಿಗಳಿಲ್ಲದೆ ನೇರವಾಗಿ ಬಡವರ ಖಾತೆಗೆ ತಲುಪುತ್ತಿದೆ. ರಾಜ್ಯ ಸರಕಾರ ಜಾಹೀರಾತು ಕೊಟ್ಟು ಪ್ರಚಾರ ಪಡೆಯುವ ಬದಲಾಗಿ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷ ಹತಾಶ ಮನೋಭಾವದಲ್ಲಿದೆ. ಇವತ್ತು ಪ್ರತಾಪ್ ಸಿಂಹ ಅವರ ತಮ್ಮನ ವಿಚಾರದಲ್ಲಿ ಇದೊಂದು ರಾಜಕೀಯ ಪ್ರೇರಿತ ಕ್ರಮವೆಂದು ಎಂಥ ಅನಕ್ಷರಸ್ಥರೂ ಹೇಳುತ್ತಾರೆ. ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ. 5 ರಾಜ್ಯಗಳ ಚುನಾವಣಾ ಫಲಿತಾಂಶವನ್ನು ನೀವೆಲ್ಲ ಗಮನಿಸಿದ್ದೀರಿ. ಕಾಂಗ್ರೆಸ್ ಸರಕಾರವು ಹತಾಶೆಯಿಂದ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಅವರು ವಿಕ್ರಂ ಸಿಂಹ ಅವರ ಬಂಧನ ಕುರಿತ ಪ್ರಶ್ನೆಗೆ ಉತ್ತರಿಸಿದರು. ಪ್ರತಾಪ್ ಸಿಂಹ ಅಥವಾ ಅವರ ಸಹೋದರ ಇದಕ್ಕೆ ಹೆದರುವ ಪ್ರಶ್ನೆ ಇಲ್ಲ. ಅವರು ಇದೆಲ್ಲವನ್ನೂ ಎದುರಿಸುತ್ತಾರೆ ಎಂದರು.
ಹೊಸ ವರ್ಷದಲ್ಲಿ ನಮ್ಮೆಲ್ಲ ಮುಖಂಡರ ಜೊತೆ ಬೂಟಾಟಿಕೆ ಮಾಡಲು ಬರಗಾಲ ವೀಕ್ಷಣೆಗೆ ಬಂದಿಲ್ಲ. ಇವತ್ತಿನ ಭೇಟಿ ಮೂಲಕ ರಾಜ್ಯ ಸರಕಾರವನ್ನು ಎಚ್ಚರಿಸಬೇಕು. ರಾಜ್ಯದಲ್ಲಿ ಭೀಕರ ಬರಗಾಲದ ಪರಿಣಾಮ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಪಸಂಖ್ಯಾತರ ಬಗ್ಗೆ ಮಾತನಾಡುವುದೇ ಮುಖ್ಯಮಂತ್ರಿಗಳ ಆದ್ಯತೆಯಾಗಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.
ರೈತಾಪಿ ವರ್ಗದಲ್ಲಿ ಎಲ್ಲ ಸಮಾಜ, ಎಲ್ಲ ವರ್ಗ, ಎಲ್ಲ ಧರ್ಮದವರೂ ಇರುತ್ತಾರೆ. ರೈತರೆಂದರೆ ಕೇವಲ ಹಿಂದೂಗಳು, ಲಿಂಗಾಯತರಲ್ಲ. ಇವತ್ತು ದಲಿತ ರೈತ ಕುಟುಂಬದವರನ್ನು ಭೇಟಿ ಮಾಡಿದ್ದೇವೆ. ರಾಜ್ಯವು ಹೊಸ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ರಾಜ್ಯದ ರೈತರೇ ತಮ್ಮ ಆದ್ಯತೆ ಆಗಿರಲಿ ಎಂದು ಆಗ್ರಹಿಸಿದರು.
ರೈತರಿಗೆ ಸ್ಪಂದಿಸಿ. ನೀವು ಅಲ್ಪಸಂಖ್ಯಾತರಿಗೆ ಸಾವಿರ ಕೋಟಿ, 10 ಸಾವಿರ ಕೋಟಿ ಘೋಷಿಸುವಾಗ ಕೇಂದ್ರವನ್ನು ಕೇಳುತ್ತಿಲ್ಲ. ರೈತರ ವಿಷಯ ಬಂದಾಗ ನರೇಂದ್ರ ಮೋದಿಜೀ, ಕೇಂದ್ರ ಸರಕಾರದ ಕಡೆ ಬೊಟ್ಟು ಮಾಡಿ ತೋರಿಸುತ್ತೀರಿ ಎಂದು ಮುಖ್ಯಮಂತ್ರಿಯವರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.











Click it and Unblock the Notifications