ಕರ್ನಾಟಕ ಸರ್ಕಾರದ 2 ವರ್ಷಗಳ ಸಾಧನೆ ಪಟ್ಟಿ ಕೊಟ್ಟ ಬಿವೈ ವಿಜಯೇಂದ್ರ
ಬೆಂಗಳೂರು, ಮೇ 20: 'ಬ್ರ್ಯಾಂಡ್ ಬೆಂಗಳೂರು' ಕನಸು ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಪಂಚ ಗ್ಯಾರೆಂಟಿಗಳು ಯಶಸ್ವಿಯಾಗಿ, ಇದು ಐತಿಹಾಸಿಕ ನ್ಯಾಯ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರಕ್ಕೆ ಎರಡರ ಹರೆಯ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷವಾಗಿದೆ. ಜನರ ಲೂಟಿ ಹೊಡೆದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬೆಂಗಳೂರು ಸಮಸ್ಯೆ ಮುಂದುವರಿದಿದೆ ಎಂದು ಬಿಜೆಪಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹರಿಹಾಯ್ದಿದ್ದಾರೆ. ಎರಡು ವರ್ಷಗಳ ಸಾಧನೆಯ ಇದೇ ಎಂದು ಪಟ್ಟಿ ನೀಡಿದ್ದಾರೆ. ಅದರ ವಿವರ ಇಲ್ಲಿದೆ.
ಅಧಿಕಾರಕ್ಕಾಗಿ ಬೇಕಾಬಿಟ್ಟಿಯಾಗಿ ಅಪೂರ್ಣ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದು ಜನರನ್ನು ಲೂಟಿ ಹೊಡೆದಿದ್ದೇ ಕಾಂಗ್ರೆಸ್ ಸರ್ಕಾರದ ದ ಎರಡು ವರ್ಷ ಸಾಧನೆಯಾಗಿದೆ. ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನತೆಯ ವಿಶ್ವಾಸ ಗಳಿಸುವುದು ಬಿಡಿ, ತಮ್ಮ ಆಪ್ತ ಸಲಹೆಗಾರರ ವಿಶ್ವಾಸವನ್ನು ಪಡೆಯಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ದೂರಿದೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ಷರತ್ತುಗಳನ್ನು ಹಾಕುತ್ತಾ, ಕುಂಟುತ್ತಾ ಸಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿಲ್ಲ ಎಂದು ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ರಾಜ್ಯ ಸರ್ಕಾರದ ಖಜಾನೆ ಸಹ ಖಾಲಿಯಾಗಿ ಗ್ಯಾರಂಟಿ ಯೋಜನೆಗಳ ಹಣ ಸಹ ಸಮಯಕ್ಕೆ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಮೀಸಲಾದ ಹಣವನ್ನು ಸಹ ಗ್ಯಾರಂಟಿ ಯೋಜನೆಗೆ ದುರ್ಬಳಕೆ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಸರ್ಕಾರದ 2 ವರ್ಷದ ಸಾಧನೆ ಕೇವಲ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಹಗರಣಗಳು ಮಾತ್ರ. ರಾಜ್ಯದ ಮುಖ್ಯಮಂತ್ರಿಗಳ ರಾಜೀನಾಮೆಗೆ ಈಗ ಮತ ಕೊಟ್ಟ ಮತದಾರರೇ ಕಾಯುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.
Zero Achievements, Endless Advertisements!
— Vijayendra Yediyurappa (@BYVijayendra) May 20, 2025
Beyond the glossy headlines & front-page ads, government stands exposed -
❌️Rampant Corruption
❌️Relentless Price Hikes
❌️Soaring Farmer Suicides
❌️Alarming Maternal Deaths
❌️Escalating Crimes Against Women
❌️Hindu Lives… https://t.co/DYs2gfdB5Y
ದುಬಾರಿ ಜೀವನ -ಅಭಿವೃದ್ಧಿ ಶೂನ್ಯ ಆಡಳಿತ
ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ ಅವರು, ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ. ದುಬಾರಿ ಜೀವನ -ಅಭಿವೃದ್ಧಿ ಶೂನ್ಯ ಆಡಳಿತ, ಇದುವೇ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ 2 ವರ್ಷಗಳ ಲೂಟಿ ಸಾಧನೆಗಳು ಎಂದು ಅವರು ಟೀಕಿಸಿದರು.
ಎರಡು ವರ್ಷ ಪೂರೈಸಿದ ಹಿನ್ನೆಲೆ ರಾಜ್ಯ ಸರ್ಕಾರ ವಿಜಯನಗರದಲ್ಲಿ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಈ ವೇಳೆ ವಿಜಯೇಂದ್ರ ಅವರು ಎರಡು ವರ್ಷಗಳ ಸಾಧನೆ ಪಟ್ಟಿ ನೀಡಿದ್ದಾರೆ. ಅವುಗಳು ಮುಂದಿವೆ.
* ಮಿತಿಮೀರಿದ ಭ್ರಷ್ಟಾಚಾರ
* ನಿರಂತರ ಬೆಲೆ ಏರಿಕೆ
* ಏರುತ್ತಿರುವ ರೈತರ ಆತ್ಮಹತ್ಯೆಗಳು
* ಸರಣೀ ಬಾಣಂತಿಯರ ಸಾವುಗಳು
* ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು
* ನಿರಂತರ ಬೆದರಿಕೆಯಲ್ಲಿರುವ ಹಿಂದೂಗಳ ಜೀವನ
* ಮೂಲಸೌಕರ್ಯಭಿವೃದ್ಧಿ ಮೂಲೆಗುಂಪು
* ಓಲೈಕೆ ರಾಜಕಾರಣಕ್ಕಾಗಿ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಬೆಂಬಲ
* ರಾಜ್ಯದಲ್ಲಿ ನಿರುದ್ಯೋಗದ ತಾಂಡವ
* ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳು ಮತ್ತು ಆಶ್ವಾಸನೆಗಳು ಸಂಪೂರ್ಣ ವಿಫಲ.
* ಸ್ಥಗಿತಗೊಂಡ ಅಭಿವೃದ್ಧಿ
* ಪ್ರಧಾನ ಮಂತ್ರಿ-ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ ಮತ್ತು ಇತರ ರೈತ ಕಲ್ಯಾಣ ಯೋಜನೆಗಳ ರದ್ದು.
* ಬ್ರ್ಯಾಂಡ್ ಬೆಂಗಳೂರು ಬ್ಯಾಡ್ ಬೆಂಗಳೂರಾಯಿತು.
* ಗ್ರೇಟರ್ ಬೆಂಗಳೂರು ವಾಟರ್ ಬೆಂಗಳೂರು.
* ವಾರಂಟಿಯಿಲ್ಲದ ಗ್ಯಾರಂಟಿಗಳು.
* 2.5 ಲಕ್ಷ ಕೋಟಿ ರೂ ಸಾಲವೇ ಸಾಧನೆ.
ಹೆಜ್ಜೆ ಇಡದ ಎರಡು ವರ್ಷ, ಬೆಲೆ ಏರಿಕೆ-ಭ್ರಷ್ಟತೆಯ ಕರಾಳ ಸ್ಪರ್ಶ ನೀಡಲಾಗಿದೆ ಎಂದು ಅವರು ಕಾಂಗ್ರೆಸ್ ಆಡಳಿತವನ್ನು ಟೀಕಿಸಿದ್ದಾರೆ.












Click it and Unblock the Notifications