Get Updates
Get notified of breaking news, exclusive insights, and must-see stories!

Bus Strike: ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು, ಆಗಸ್ಟ್‌ 05: ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಇಂದು(ಮಂಗಳವಾರ) ಮಾಧ್ಯಮಗಳ ಜೊತೆಗೆ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ . ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರು ಆಕ್ಷೇಪಿಸಿದರು.

BY Vijayendra Immediate Compensation Should Be Provided For Strike Of Govt Transport Employees

ಕೆಎಸ್‍ಆರ್‍ಟಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ಅವರ ಸಮಸ್ಯೆಗೆ ಪರಿಹಾರ ನೀಡಬೇಕು. ಜನಸಾಮಾನ್ಯರಿಗೆ ತೊಂದರೆ ಆಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು. ಇದು ಮುಖ್ಯಮಂತ್ರಿಗಳ ಕರ್ತವ್ಯ. ಸಾರಿಗೆ ಸಚಿವರೂ ಕುಳಿತು ಸಮಸ್ಯೆಗೆ ಪರಿಹಾರ ನೀಡಬೇಕೆಂದು ಆಗ್ರಹವನ್ನು ಮುಂದಿಟ್ಟರು. ರಾಹುಲ್ ಗಾಂಧಿಯವರ ಬೆಂಗಳೂರು ಭೇಟಿ ಕಾರಣಕ್ಕಾಗಿ ಮುಖ್ಯಮಂತ್ರಿಗಳು ನಿನ್ನೆ ಸಾರಿಗೆ ನೌಕರರ ಸಭೆ ಕರೆದಿದ್ದರು ಎಂದೂ ಅವರು ಆರೋಪಿಸಿದರು.

ಏನು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ? ನಿನ್ನೆ ಸುತ್ತೋಲೆಯನ್ನೂ ಹೊರಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಬಸ್‍ಗಳೂ ಬೇಕೆಂದು ನಿನ್ನೆ ಪತ್ರ ಬರೆದಿದ್ದಾರೆ. ಮೊದಲೇ ವ್ಯವಸ್ಥೆ ಹಾಳು ಮಾಡಲು ಹೊರಟಿದ್ದಾರೆ. ಈಗ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಸಮಸ್ಯೆ ಹುಟ್ಟಿಸಲು ಹೊರಟಿದ್ದೀರಿ ಎಂದು ಉತ್ತರ ನೀಡಿದರು. ಗಡ್ಡಕ್ಕೆ ಬೆಂಕಿ ಹತ್ತಿಕೊಂಡಾಗ ಸಮಸ್ಯೆ ಪರಿಹರಿಸಲು ಹೊರಟಿದ್ದಾರೆ. ಈಗಲೂ ಕಾಲ ಮಿಂಚಿಲ್ಲ. ಮುಷ್ಕರ ಈಗಾಗಲೇ ಪ್ರಾರಂಭವಾಗಿದೆ. ಸಂಬಂಧಿತರನ್ನು ಕರೆದು ಸಮಸ್ಯೆ ಪರಿಹರಿಸಬೇಕು ಎಂದು ಅವರು ತಿಳಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾತನಾಡಿ, ಸರಕಾರಿ ಸಾರಿಗೆ ನೌಕರರ ಮುಷ್ಕರದ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ಸಿನವರು ಮಾತು ಕೊಟ್ಟಂತೆ ನಡೆದಿಲ್ಲ. ಅಧಿಕಾರಕ್ಕೆ ಬಂದ ದಿನವೇ ಸಾರಿಗೆ ನೌಕರರ ಬಗ್ಗೆ ಆಡಿದ್ದನ್ನು ಮರೆತಿದ್ದಾರೆ. ಸಾರಿಗೆ ನೌಕರರ ವಿಚಾರದಲ್ಲಿ ನಾನೂ ಸದನದಲ್ಲಿ ಪ್ರಸ್ತಾಪಿಸಿ ಗಮನ ಸೆಳೆದಿದ್ದೆ. ನೌಕರರ ಸಮಸ್ಯೆ ಪರಿಹರಿಸುವುದಾಗಿ ಸರಕಾರವೂ ತಿಳಿಸಿತ್ತು ಎಂದು ಹೇಳಿದರು.

ನೌಕರರ ಹಿಂಬಾಕಿಯನ್ನೂ ಕೊಡುತ್ತಿಲ್ಲ. ನಿವೃತ್ತರಿಗೂ ಗ್ರಾಚ್ಯುಟಿ ಮತ್ತಿತರ ಸೌಲಭ್ಯ ಕೊಟ್ಟಿಲ್ಲ. ಬಾಕಿ ಹಣ ಕೊಡುವಲ್ಲಿ ಸರಕಾರ ವಿಫಲವಾಗಿದೆ. ಶಕ್ತಿ ಯೋಜನೆ ಅನುಷ್ಠಾನವಾಗಿದೆ. ಬಸ್‍ಗಳು ತುಂಬಿ ತುಳುಕುತ್ತಿವೆ. ಟಿಕೆಟ್ ಹಣವನ್ನು ಪಾವತಿ ಮಾಡಿಲ್ಲವೇ ಎಂದು ಕೇಳಿದರು. ಇದು ಕಿವುಡ, ಕುರುಡ, ಮೂಕರ ಸರಕಾರ ಎಂದು ಟೀಕಿಸಿದ ಅವರು, ಖಜಾನೆ ತುಂಬಿ ತುಳುಕುತ್ತಿದೆ ಎನ್ನುತ್ತಾರೆ. ಹಾಗಿದ್ದರೆ ಸಮಸ್ಯೆ ಪರಿಹಾರ ಮಾಡಿಲ್ಲವೇಕೆ? ಎಂದರು. ತಲಾದಾಯದಲ್ಲೂ ನಂಬರ್ 1 ಆಗಿದ್ದೇವೆ. ಆದರೂ, ಯಾಕೆ ನ್ಯಾಯ ಕೊಡಲು ಆಗುತ್ತಿಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಬಿಜೆಪಿ ಈ ನೌಕರರ ಪರವಾಗಿ ಧ್ವನಿಯಾಗಿ ನಿಲ್ಲಲಿದೆ. ಸದನದಲ್ಲೂ ಈ ವಿಷಯ ಪ್ರಸ್ತಾಪಿಸುತ್ತೇವೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+