ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮೋದಿ ಭೇಟಿ ಮಾಡಿದ ವಿಜಯೇಂದ್ರ ಹೇಳಿದ್ದೇನು?

ನವದೆಹಲಿ, ಡಿಸೆಂಬರ್‌ 21: ಪಂಚರಾಜ್ಯಗಳ ಚುನಾವಣಾ ಬಳಿಕ 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್‌ ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಠಕ್ಕರ್‌ ಕೊಡಲು ಮೈತ್ರಿಯಾಗಿದ್ದು, ಗುರುವಾರ ಪ್ರಧಾನಿ ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಹೌದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕರಾದ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಹ ಮೋದಿಯವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

 BY Vijayendra Meets First Time Narendra Modi After Karnataka BJP President

ಇನ್ನು ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಮೋದಿ ಅವರನ್ನ ಭೇಟಿಯಾಗಿರುವುದು ವಿಶೇಷವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿರುವ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು.

ರಾಷ್ಟ್ರ ಭಕ್ತಿ, ಸಂಘ ನಿಷ್ಠೆ, ಸಮರ್ಪಣೆ, ಶಿಸ್ತು, ಬದ್ಧತೆ, ಕ್ರಿಯಾಶೀಲತೆ, ಸಾಧಿಸುವ ಛಲದ ಗುರಿ ಇವೆಲ್ಲಕ್ಕೂ ಭಾರತದ ಇತಿಹಾಸದಲ್ಲಿ ಉದಾಹರಿಸಬಲ್ಲ ಏಕೈಕ ವ್ಯಕ್ತಿತ್ವ ಮಾನ್ಯ ಮೋದಿ ಜೀ ಅವರದು, ಅವರ ಸ್ವಾವಲಂಬಿ ಹಾಗೂ ಬಲಿಷ್ಠ ಭಾರತ ಕಟ್ಟುವ ಮಹಾನ್ ಸಂಕಲ್ಪ ಪರಿಪೂರ್ಣವಾಗಿ ಈಡೇರಿದರೆ ವಿಶ್ವಮಟ್ಟದಲ್ಲಿ ನಮ್ಮಭವ್ಯ ಭಾರತ ಅಗ್ರಸ್ಥಾನದಲ್ಲಿ ನಿಲ್ಲಲಿದೆ. ಈ ನಿಟ್ಟಿನಲ್ಲಿ ಅವರೊಂದಿಗೆ ಹೆಗಲು ಕೊಡುವ ಪುಣ್ಯದ ಕಾರ್ಯದಲ್ಲಿ ಸಮರ್ಪಿಸಿಕೊಳ್ಳಲು 'ಬಿಜೆಪಿ-ಕರ್ನಾಟಕ'ದ ರಥ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯ ಎಂಬುದು ನನ್ನ ವಿನಮ್ರ ಭಾವವಾಗಿದೆ.

2024 ರ ಮಹಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಮೋದಿ ಜೀ ಅವರ ಮಡಿಲಿಗೆ ಸಮರ್ಪಿಸಬೇಕೆಂಬ ನನ್ನ ಹೆಗ್ಗುರಿಯ ಹೆಜ್ಜೆಗೆ ಇಂದಿನ ಭೇಟಿಯ ಅವರ ಪ್ರೇರಣೆಯ ಮಾತುಗಳು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸ ಮೂಡಿಸಿದೆ.

ಅಮಿತ್ ಶಾ ಭೇಟಿ ಮಾಡಿದ ಬಿ ವೈ ವಿಜಯೇಂದ್ರ!

ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನ ಬಿ ವೈ ವಿಜಯೇಂದ್ರ ಅವರು ಭೇಟಿ ಮಾಡಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ವಿಜಯೇಂದ್ರ, ಅಮಿತ್ ಶಾ ಜೀ, "ರಾಷ್ಟ್ರಭಕ್ತಿ-ಪಕ್ಷನಿಷ್ಠೆ ನಿಮ್ಮ ಧ್ಯೇಯ, ಬದ್ಧತೆ, ಆತ್ಮ ವಿಶ್ವಾಸ, ಗುರಿ ಮುಟ್ಟುವ ಛಲ, ಗೆಲುವಿನ ರಣತಂತ್ರ ನಿಮ್ಮ ಶಕ್ತಿ ಇದು ನಮ್ಮಂಥ ಯವಕರಿಗೆ ನಿತ್ಯ ಸ್ಫೂರ್ತಿ" ಎಂದು ಹೇಳಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಮಾನ್ಯ ಅಮಿತ್‌ ಶಾ ಜೀ ಅವರನ್ನು ಭೇಟಿಯಾಗಿ ಪಂಚರಾಜ್ಯ ಚುನಾವಣೆಯ ಬಿಜೆಪಿ ಗೆಲುವಿನ ಸಾಧನೆಗಾಗಿ ಆತ್ಮೀಯ ಅಭಿನಂದನೆ ಸಲ್ಲಿಸಿ ಆಶೀರ್ವಾದ ಪಡೆಯಲಾಯಿತು.

ಪಕ್ಷ ಸಂಘಟನೆಯ ಅವಕಾಶಗಳನ್ನು ಕಲ್ಪಿಸಿ ಆರಂಭದಿಂದಲೂ ನನಗೆ ಮಾರ್ಗದರ್ಶನ ನೀಡುತ್ತಿರುವ ಅಮಿತ್ ಶಾ ಜೀ ಅವರು ನನ್ನ ಸಾಮರ್ಥ್ಯದ ಮೇಲೆ ಅಪರಿಮಿತ ನಂಬಿಕೆಯನ್ನಿರಿಸಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸುವ ಮಹತ್ವದ ನಿರ್ಣಯದಲ್ಲಿ ಭಾಗಿಯಾಗಿದ್ದು, ನನ್ನ ಜೀವನದಲ್ಲಿ ಎಂದೂ ಮರೆಯಲಾಗದ ಮಹತ್ವದ ಘಟ್ಟ. ಈ ನಿಟ್ಟಿನಲ್ಲಿ ಅವರ ಇಂದಿನ ಉತ್ತೇಜನ ಪೂರ್ಣ ಮಾತುಗಳು ನನ್ನಲ್ಲಿ ಹನುಮನ ಶಕ್ತಿ - ಭೀಮನ ಛಲ ನೆನಪಿಸುವ ಸಂಕಲ್ಪ ತೊಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ಧಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+