ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಸ್ಪರ್ಧೆ ಕುರಿತು ಮಹತ್ವದ ಹೇಳಿಕೆ ನೀಡಿದ ವಿಜಯೇಂದ್ರ
ಬೆಂಗಳೂರು, ಜನವರಿ 08: 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಹಲವು ಮಾಜಿ ಸಚಿವರು,ಇದೀಗ ರಾಜಕೀಯ ಭವಿಷ್ಯಕ್ಕಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಹಲವು ಮಂದಿ ರಾಜಕೀಯ ನಾಯಕರು ಮುಂದಾಗಿದ್ದಾರೆ.
ಹೌದು, ಹೊಸಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶರತ್ ಕುಮಾರ್ ಬಚ್ಚೇಗೌಡ ಗೆಲುವು ಸಾಧಿಸಿದ್ದರು.ಆದರೆ, ಭಾರತೀಯ ಜನತಾ ಪಾರ್ಟಿಯ ಎಂ.ಟಿ.ಬಿ.ನಾಗರಾಜ್ 5075 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಇದೀಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಚ್ಚೇಗೌಡರು ರಾಜಕೀಯ ನಿವೃತ್ತಿ ಘೋಷಿಸಿದ್ದು, ಈ ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತು ಬಿಜೆಪಿ ಇಬ್ಬರು ನಾಯಕರು ಟಿಕೆಟ್ ಗೆ ಲಾಬಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕಾಗಿ ಎಂಎಲ್ಸಿ ಎಂಟಿಬಿ ನಾಗರಾಜ್ ಹಾಗೂ ಮಾಜಿ ಸಚಿವರಾದ ಡಾ. ಕೆ ಸುಧಾಕರ್ ಅವರು ಚುನಾವಣೆಗೆ ಸಿದ್ದತೆಯನ್ನ ನಡೆಸಿದ್ದಾರೆ. ಇತ್ತ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಬಿ ವೈ ವಿಜಯೇಂದ್ರ ಅವರು ಬಿಜೆಪಿಯ ಹಲವು ಅಸಮಾಧಾನಿತ ನಾಯಕರನ್ನ ಭೇಟಿ ಮಾಡುವ ಮೂಲಕ ಲೋಕಸಭಾ ಚುನಾವಣೆಗೆ ಒಗ್ಗೂಡಿಸುತ್ತಿದ್ದಾರೆ.
ಭಾನುವಾರ ಬೆಂಗಳೂರು ನಗರದ ಗರುಡಾಚಾರಪಾಳ್ಯದಲ್ಲಿರುವ ನಿವಾಸದಲ್ಲಿ ಎಂಎಲ್ಸಿ ಎಂಟಿಬಿ ನಾಗರಾಜ್ ಅವರನ್ನು ಭೇಟಿದ ಬಿ ವೈ ವಿಜಯೇಂದ್ರ ಅವರು ಲೋಕಸಭಾ ಚುನಾವಣೆ ಕುರಿತು ಚರ್ಚಿಸಿದ್ದಾರೆ. ಈ ವೇಳೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಎಂ ಟಿ ಬಿ ನಾಗರಾಜ್ ಅವರು ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.
ಎಂಟಿಬಿ ನಾಗರಾಜ್ ಭೇಟಿ ಬಳಿಕ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಎಲ್ಸಿ ಎಂಟಿಬಿ ನಾಗರಾಜ್ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂದು ಮುಂದೆ ಚರ್ಚೆ ಆಗುತ್ತದೆ.
ಪಕ್ಷದ ಹಿರಿಯರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಒಂದೇ ಮಾತಲ್ಲಿ ಹೇಳಬೇಕು ಅಂದರೆ ಎಂಟಿಬಿ ನಾಗರಾಜ್ ವ್ಯಕ್ತಿಯಲ್ಲ. ಶಕ್ತಿ. ಇಡೀ ರಾಜ್ಯದಲ್ಲಿ ಅವರದೇ ಆದಂತಹ ಜನ ಬೆಂಬಲವನ್ನ ಗಳಿಸಿಕೊಂಡಿರುವ ಎಂಟಿಬಿ ನಾಗರಾಜ್ ಅವರು ಬಿಜೆಪಿಯ ಶಕ್ತಿಯಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲು ಗೆಲುವು ಸಾಧಿಸುಲು ಶ್ರಮಿಸಲು ಮೂಲಕ ನಿಮ್ಮೊಟ್ಟಿಗೆ ನಿಲ್ಲುತ್ತೇವೆ ಎಂದು ಎಂಟಿಬಿ ನಾಗರಾಜ್ ಅವರು ಭರವಸೆ ನೀಡಿದ್ದಾರೆ. ಅವರನ್ನು ಭೇಟಿ ಮಾಡಿ ತುಂಬಾ ಸಂತೋಷ ಆಗಿದೆ. ಅವರ ಮಾರ್ಗದರ್ಶನವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಚಿಕ್ಕಬಳ್ಳಾಪುರ ಕ್ಷೇತ್ರ ಗೆಲ್ಲಲು. ತಯಾರಿ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಇನ್ನೂ ಈ ವೇಳೆ ಎಂಟಿಬಿ ನಾಗರಾಜ್ ಮಾತನಾಡಿ, ರಾಜ್ಯಾಧ್ಯಕ್ಷರಾದ ಮೇಲೆ ವಿಜಯೇಂದ್ರ ಅವರು ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿಯಾಗಿ ಮಾಡಲು ಸಂಕಲ್ಪ ಮಾಡಿದ್ದಾರೆ. ಅದರ ಭಾಗವಾಗಿ ಸೌಹಾರ್ದಯುತವಾಗಿ ಭೇಟಿಯಾಗಿದ್ದಾರೆ.
ನಾನು ಕೂಡ ಅವರಿಗೆ ಆಶಿರ್ವಾದ ಮಾಡಿದ್ದೇನೆ.ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೆ ವಿಜಯೇಂದ್ರ ಪ್ರವಾಸ ಮಾಡಲಿ. ಮುಂದಿನ ಸಂಸತ್ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿ. ಭೇಟಿ ವೇಳೆ ಜವಾಬ್ದಾರಿ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಹೇಳಿದ ಅವರು, ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡುವ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ ಎಂದು ಹೇಳಿದರು.












Click it and Unblock the Notifications