ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಒಂದು ಸಮುದಾಯದಿಂದ ಸಿಗುವ ಅಲ್ಪ ಮತಗಳಿಗಾಗಿ ಉಗ್ರನನ್ನೇ ಉಗ್ರನಲ್ಲ ಎಂದು ಸರ್ಟಿಫಿಕೇಟ್ ನೀಡುವ ಹಂತದಲ್ಲಿ ಕಾಂಗ್ರೆಸ್ ಇದೆ. ಹೀಗಾಗಿ ಕಾಂಗ್ರೆಸ್ನವರಿಗೆ ಮತ್ತೊಮ್ಮೆ ದೇಶದಲ್ಲಿ ಅಧಿಕಾರ ಕೊಟ್ಟರೆ ಉಗ್ರರ ಹಿತರಕ್ಷಣೆಗಾಗಿ ಹಲವು ಗ್ಯಾರಂಟಿ ಭಾಗ್ಯಗಳನ್ನು ನೀಡಿದರೂ ಅಚ್ಚರಿಯಿಲ್ಲ! ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.
ಕರ್ನಾಟಕದ ಕರಾವಳಿಯ ಪ್ರಮುಖ ನಗರವಾದ ಮಂಗಳೂರಿನಲ್ಲಿ ನಾಲ್ಕು ವರ್ಷದ ಹಿಂದೆ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದ್ದ ಶಾರಿಕ್ನನ್ನು ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಎನ್ಐಎ ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.

ಆರೋಪಿ ಮೊಹಮ್ಮದ್ ಶಾರಿಕ್ ವಿಚಾರಣೆ ವೇಳೆ ಬಾಂಬ್ ಬ್ಲಾಸ್ಟ್ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ರಾಜ್ಯದ ಪ್ರಮುಖ ದೇವಾಲಯ ಬ್ಲಾಸ್ಟ್ ಮಾಡುವ ಪ್ಲಾನ್ ಇರುವುದಾಗಿ ಬಾಯಿಬಿಟ್ಟಿದ್ದಾನೆ. ಇದೇ ವಿಚಾರವಾಗಿ ಎಕ್ಸ್ ಪೋಸ್ಟ್ ಮಾಡಿರುವ ವಿಜಯೇಂದ್ರ ಅವರು, ಮಂಗಳೂರಿನಲ್ಲಿ ಬ್ಲಾಸ್ಟ್ ಆದಾಗ ಇಂದಿನ ಡಿಸಿಎಂ ಡಿಕೆ ಶಿವಕುಮಾರ್ ಮೃಧು ಧೋರಣೆ ತೋರಿ ಮಾತನಾಡಿದ್ದರು. ಅದನ್ನೀಗ ವಿಜಯೇಂದ್ರ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ನಾಲ್ಕು ವರ್ಷದ ಹಿಂದೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಆರೋಪಿಯನ್ನು 'ಮೈ ಬ್ರದರ್ಸ್' ಎಂದು ಡಿಕೆ ಶಿವಕುಮಾರ್ ಅವರು ಹೇಳಿದ್ದರು. ಇಂದು ವಿಚಾರಣೆ ವೇಳೆ ಸ್ವತಃ ಆರೋಪಿಯೇ ತಪ್ಪೊಪ್ಪಿಕೊಂಡಿದ್ದಾನೆ. ಇತಿಹಾಸ ಪ್ರಸಿದ್ಧ ಕದ್ರಿಯ ಮಂಜುನಾಥ ದೇವಸ್ಥಾನವನ್ನು ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ಹೇಳಿದ್ದಾನೆ.
ಭಯೋತ್ಪಾದಕನನ್ನು ಭಯೋತ್ಪಾದಕ ಎನ್ನಲು ಇವರೇನು ಕಷ್ಟ!
ಒಂದು ಸಮುದಾಯದಿಂದ ಸಿಗುವ ಕನಿಷ್ಠ ಮತಗಳಿಗಾಗಿ ಉಗ್ರನನ್ನೇ ಉಗ್ರನಲ್ಲ ಎಂದು ಸರ್ಟಿಫಿಕೇಟ್ ನೀಡುವ ಹಂತದಲ್ಲಿ ಕಾಂಗ್ರೆಸ್ ಇದೆ ಎಂದರೆ, ಇಂಥವರಿಗೆ ಅಧಿಕಾರ ಕೊಟ್ಟರೆ ಉಗ್ರರ ಹಿತರಕ್ಷಣೆಗಾಗಿ ಹಲವು ಗ್ಯಾರಂಟಿ ಭಾಗ್ಯಗಳನ್ನು ನೀಡಿದರೂ ಆಶ್ಚರ್ಯವೇನಿಲ್ಲ ಎಂದು ಪುನರುಚ್ಚರಿಸಿದ್ದಾರೆ.
ಭಯೋತ್ಪಾದಕನನ್ನು ಭಯೋತ್ಪಾದಕ ಎಂದು ಕರೆಯಲು ಕಾಂಗ್ರೇಸಿಗೇಕೆ ಭಯ? ಉಗ್ರರ ಪರ ವಕಾಲತ್ತು ವಹಿಸುವ ರಾಜ್ಯ ಕಾಂಗ್ರೆಸ್ ನಾಯಕರು ಅಂತಹ ಸಂಘಟನೆಯ ವಕ್ತಾರರಾಗಿ ನೇಮಕವಾಗಿದ್ದಾರೆಯೇ? ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ
ನಾಲ್ಕು ವರ್ಷಗಳ ಹಿಂದೆ ಕುಕ್ಕರ್ ಬಾಂಬ್ ಅನ್ನು ಆರೋಪಿ ಶಾರಿಕ್ ಮಂಗಳೂರಿನಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ. ಈ ವೇಳೆ ಕುಕ್ಕರ್ ಬಾಂಬ್ ಆತನ ಮಡಿಲಲ್ಲೇ ಬ್ಲಾಸ್ಟ್ ಆಗಿತ್ತು. ಈ ಘಟನೆ 2022ರ ನವೆಂಬರ್ ತಿಂಗಳ 19ರಂದು ನಡೆದಿತ್ತು. ಆತನಿಗೆ ಗಾಯವಾಗಿ ಆಸ್ಪತ್ರೆ ಸೇರಿದ್ದ, ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿತ್ತು. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಶಾರಿಕ್ ಬಾಂಬ್ ಬ್ಲಾಸ್ಟ್ ಪ್ಲ್ಯಾನ್ಗಳ, ಯೋಜನೆ ಬಗ್ಗೆ ಬಾಯಿಬಿಟ್ಟಿದ್ದಾನೆ.
ಅಂದು ಪ್ರಕರಣ ನಡೆದ ಸಂದರ್ಭದಲ್ಲಿ ಆರೋಪಿ ಮುಸ್ಲಿಂ ಧರ್ಮದವನಾಗಿದ್ದರಿಂದ ಕಾಂಗ್ರೆಸ್ ನಾಯಕರು ಮೃಧು ಧೋರಣೆ ತಾಳಿದ್ದರು. ಅವರು ನಮ್ಮ ಬ್ರದರ್ಸ್ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಅವರ ಈ ಹೇಳಿಕೆ ಇದೀಗ ಅವರಿಗೇ ಮುಳ್ಳಾಗಿದೆ. ವಿಪಕ್ಷ ನಾಯಕರು, ಸಾರ್ವಜನಿಕರು ಡಿಸಿಎಂ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಕರ್ನಾಟಕದ ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿರುವ ಪ್ರಾಮಾಣಿಕ ಲೆಕ್ಕಪತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ













Click it and Unblock the Notifications