ಸಿದ್ದರಾಮಯ್ಯ ಬಳಿಕ ಸಿಎಂ ಯಾರು? ಕಾಂಗ್ರೆಸ್‌ನಲ್ಲಿ ಕುರ್ಚಿ ಕಚ್ಚಾಟ ಜೋರಾಗಿದೆ: ಬಿ.ವೈ ವಿಜಯೇಂದ್ರ
ಹೊಸಪೇಟೆ: ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಯಾರು ಸಿಎಂ ಆಗುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ಒಳಜಗಳವೇ ಆಡಳಿತದ ಮೇಲೆ ದುಷ್ಪರಿಣಾಮ ಬೀರಿದೆ ಎಂದು ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು. ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿರುವ ಸರ್ಕಾರ ರೈತರು, ಬಡವರು ಮತ್ತು ಯುವಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದರು.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಈ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುವಲ್ಲಿ ತೊಡಗಿತ್ತೇ ಹೊರತು ರೈತರ, ಬಡವರ, ಯುವಕರ ಸಮಸ್ಯೆಗಳನ್ನು ಆಲಿಸಲಿಲ್ಲ. ಮುಖ್ಯಮಂತ್ರಿ ಕುರ್ಚಿಯ ಕಚ್ಚಾಟವೇ ದೊಡ್ಡದಾಗಿದೆ. ಅಧಿಕಾರಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಆಡಳಿತದ ಮೇಲೆ ಪರಿಣಾಮ ಬೀರಿದೆ. ಈ ಸರ್ಕಾರದ ಮೇಲೆ ಯುವಕರು ಅಸಮಾಧಾನಗೊಂಡಿದ್ದಾರೆ. ರಾಜ್ಯ ಡ್ರಗ್ಸ್ ರಾಜಧಾನಿಯಾಗುವತ್ತ ಸಾಗಿದೆ ಎಂದು ಆಕ್ಷೇಪಿಸಿದರು.
ಸಿದ್ದರಾಮಯ್ಯರ ರಾಜೀನಾಮೆ ನೀಡಿದ ನಂತರ ಡಾ. ಜಿ.ಪರಮೇಶ್ವರ್ ಸಿಎಂ ಆಗಬೇಕು, ಡಿ.ಕೆ.ಶಿವಕುಮಾರ್ ಆಗಬೇಕು, ಮಲ್ಲಿಕಾರ್ಜುನ ಖರ್ಗೆ ಆಗಬೇಕು ಎಂಬ ಕಚ್ಚಾಟ ಆರಂಭವಾಗಿದೆ. ಇಲ್ಲಿನ ಆರ್ಥಿಕ ಸ್ಥಿತಿ ಸುಧಾರಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆ, ಯಾರೇ ಮುಖ್ಯಮಂತ್ರಿಯಾದರೂ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುವುದು ಕಷ್ಟ ಎಂದು ಟೀಕಿಸಿದರು.
ಕಾಂಗ್ರೆಸ್ ಹೈಕಮಾಂಡ್‌ಗೆ ಸಿಎಂ ಸ್ಥಾನದ ಗುದ್ದಾಟಕ್ಕೆ ಅಷ್ಟು ಬೇಗ ಉತ್ತರ ಕಂಡುಕೊಳ್ಳುವ ಶಕ್ತಿ ಇಲ್ಲ. ರಾಜ್ಯದಲ್ಲಿ ಒಂದು ರೀತಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಭ್ರಷ್ಟಾಚಾರದಿಂದ ಸಾಮಾನ್ಯ ಜನ ಬೇಸತ್ತಿದ್ದಾರೆ. ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುವ ಷಡ್ಯಂತ್ರ ನಡೆದಿದೆ. ಉಸ್ತುವಾರಿ ಸಚಿವರು ಹಾಗೂ ಶಾಸಕರು ರೈತರ ಸಮಸ್ಯೆ ಕೇಳುತ್ತಿಲ್ಲ. ಅವರೆಲ್ಲ ಅಧಿಕಾರಕ್ಕಾಗಿ ದೆಹಲಿಯಲ್ಲಿ ಬೀಡು ಬಿಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಹೈಕಮಾಂಡ್‌ಗೆ ಸಿಎಂ ಗುದ್ದಾಟಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳುವ ಶಕ್ತಿ ಇಲ್ಲ ಎಂದು ಹೇಳಿದ ಅವರು, ರಾಜ್ಯದಲ್ಲಿ ಅರಾಜಕತೆ ವಾತಾವರಣ ನಿರ್ಮಾಣವಾಗಿದೆ ಎಂದರು. ಭ್ರಷ್ಟಾಚಾರ, ರಸಗೊಬ್ಬರದ ಕೃತಕ ಅಭಾವ ಮತ್ತು ರೈತರ ಸಮಸ್ಯೆಗಳ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಪೂರ್ಣ ಬಹುಮತವಿರುವುದರಿಂದ ಬಿಜೆಪಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ವಿರೋಧ ಪಕ್ಷವಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇವೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.














Click it and Unblock the Notifications