Get Updates
Get notified of breaking news, exclusive insights, and must-see stories!

ಮುಸ್ಲಿಂ ಮತ ಓಲೈಕೆ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ!

ಬೆಂಗಳೂರು, ಮೇ. 25: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಆರೋಪಿ ಸಾವು ಪ್ರಕರಣ ರಾಜ್ಯದಲ್ಲೆಡೆ ಸಾಕಷ್ಟು ಸುದ್ದಿಯಾಗಿದೆ. ಇದರ ಜೊತೆಗೆ ಆದಿಲ್ ಸಾವು ಸಹಜವಲ್ಲ ಎಂದು ಕುಟುಂಬಸ್ಥರು ಆರೋಪಿಸಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದಾರೆ.

ಠಾಣೆಯ ಮುಂದಿದ್ದ ಧ್ವಜದ ಕಟ್ಟೆ ಸೇರಿದಂತೆ ಠಾಣೆಯ ಪೀಠೋಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ಉದ್ರಿಕ್ತರು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಹನ್ನೊಂದು ಮಂದಿ ಪೊಲೀಸರಿಗೆ ಗಾಯಗಳಾಗಿವೆ. ಕಳೆದ ದಿನ ರಾತ್ರಿ ನಡೆದ ಘಟನೆಯ ದೃಶ್ಯಗಳು ಠಾಣೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ.

BY Vijayendra slams congress govt over Channagiri Police Station case

ಉಗ್ರರು ರಾಜ್ಯವನ್ನು ಅಡಗುತಾಣವನ್ನಾಗಿ ಮಾಡಿಕೊಂಡಿದ್ದಾರೆ!

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. "ರಾಜ್ಯದಲ್ಲಿ ಪೋಲೀಸರು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ, ಪರಿಣಾಮವಾಗಿ ರಾಜ್ಯವನ್ನು ಉಗ್ರರು ಅಡಗುತಾಣವನ್ನಾಗಿ ಮಾಡಿಕೊಂಡಿದ್ದಾರೆ, ಮಾಫಿಯಾಗಳು, ರೌಡಿಗಳ ಅಟ್ಟಹಾಸ ಮೇರೆ ಮೀರಿದೆ" ಎಂದು ಹೇಳಿದ್ದಾರೆ.

"ಅಕ್ರಮ ರೇವ್ ಪಾರ್ಟಿಗಳು ಎಗ್ಗಿಲ್ಲದೆ ನಡೆಯುತ್ತಿವೆ. ಕ್ರಿಮಿನಲ್‌ಗಳನ್ನು ಬಂಧಿಸಲು ಹೊರಟರೆ ಮತೀಯ ಅಲ್ಪ ಸಂಖ್ಯಾತರ ಹೆಸರಿನಲ್ಲಿ ಪೋಲಿಸ್ ಠಾಣೆಗಳಿಗೆ ಬೆಂಕಿ ಹಾಕಲು ಈ ನೆಲದ ಕಾನೂನಿನ ಬಗ್ಗೆ ಕಿಂಚಿತ್ತು ಭಯವಿಲ್ಲದ ವಿಧ್ವಂಸಕ ಶಕ್ತಿಗಳು ಗುಂಪುಗೂಡಿ ಪೋಲಿಸ್ ಠಾಣೆಗಳಿಗೇ ದಾಳಿಮಾಡಿ ಬೆಂಕಿ ಹಚ್ಚಲು ಮುಂದಾಗುತ್ತಿವೆ. ಇದಕ್ಕೆಲ್ಲ ರಾಜ್ಯವಾಳುತ್ತಿರುವ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ, ಮುಸ್ಲಿಂ ಮತ ಓಲೈಕೆ ಈ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ" ಎಂದಿದ್ದಾರೆ.

"ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದಲ್ಲಿ ಬಂಧಿಯಾಗುತ್ತಿರುವ ಭಯೋತ್ಪಾದಕ ಶಕ್ತಿಗಳು ಈ ಘಟನೆಗಳ ಹಿಂದಿರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕಲ್ಪಿಸಬೇಕಾದ ಪೊಲೀಸರು ಹಾಗೂ ಪೊಲೀಸ್ ಠಾಣೆಗೇ ರಕ್ಷಣೆ ಇಲ್ಲದ ಪರಿಸ್ಥಿತಿ ಉದ್ಭವಿಸಿದೇ ಎಂದರೆ ಪರಿಸ್ಥಿತಿ ಯಾವ ಹಂತ ತಲುಪುತ್ತಿದೆ ಎಂದು ಅಂದಾಜಿಸಬಹುದಾಗಿದೆ" ಎಂದು ಕಿಡಿಕಾರಿದ್ದಾರೆ.

ಅಂದು ಡಿಜೆ ಹಳ್ಳಿ, ಮೊನ್ನೆ ಉಡುಪಿ, ಇಂದು ದಾವಣಗೆರೆ!

"ಅಂದು ಡಿಜೆ ಹಳ್ಳಿ, ಮೊನ್ನೆ ಉಡುಪಿ, ಇಂದು ದಾವಣಗೆರೆಯ ಚೆನ್ನಗಿರಿಯಲ್ಲಿ ಪೊಲೀಸ್ ಠಾಣೆಗಳಿಗೆ ನುಗ್ಗಿ ಧ್ವಂಸಗೊಳಿಸುವ ಮಟ್ಟಿಗೆ ದಾಳಿ ನಡೆಸುವಷ್ಟು ಮೂಲಭೂತವಾದ ಶಕ್ತಿಗಳು ಸಂಘಟಿತರಾಗಿದ್ದಾರೆ ಎಂದರೆ ನಾವು ಯಾವ ರಾಜ್ಯದಲ್ಲಿದ್ದೇವೆ..? ಯಾವ ಸಮಾಜದಲ್ಲಿ ಇದ್ದೇವೆ..? ಎನ್ನುವ ಆತಂಕ ಕಾಡುತ್ತಿದೆ" ಎಂದಿದ್ದಾರೆ.

BY Vijayendra slams congress govt over Channagiri Police Station case

"ಬಿಹಾರದಲ್ಲಿ ಲಲ್ಲುಪ್ರಸಾದ್ ಯಾದವ್ ಆಡಳಿತ ನಡೆಸಿದ ದಿನಗಳು ಕರ್ನಾಟಕದಲ್ಲಿ ಮತ್ತೆ ತಲೆ ಎತ್ತುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. 'ಸರ್ವ ಜನಾಂಗದ ಶಾಂತಿಯ ತೋಟ' ಎಂದು ಕರೆದ ಕುವೆಂಪು ಕಲ್ಪನೆಯನ್ನು ಕೊಲ್ಲಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಕರುನಾಡನ್ನು ಅಭದ್ರತೆಯ ಅಶಾಂತಿಯ ಕೊಂಪೆ ಮಾಡಲು ಹೊರಟಿದೆ. ಪೊಲೀಸರ ನೈತಿಕ ಶಕ್ತಿ ಸಂಪೂರ್ಣವಾಗಿ ಕುಗ್ಗಿಸುವ ವ್ಯವಸ್ಥೆಯ ಜಾಲ ಕೆಲಸ ಮಾಡುತ್ತಿದೆ" ಎಂದು ಆಕ್ರೋಶ ಹೊರಹಾಕಿದ್ದಾರೆ.

ಬೇಲಿಯೇ ಎದ್ದು ಹೊಲ ಮೇಯ್ದಂತೆ!

'ಪೊಲೀಸರು ಹಾಗೂ ಪೊಲೀಸ್ ಠಾಣೆಗಳೇ ರಕ್ಷಣೆಗೆ ಮೋರೆ ಇಡುವ ಪರಿಸ್ಥಿತಿ ಇರುವಾಗ ರಕ್ಷಣೆಗಾಗಿ ಜನರು ಯಾರ ಮೊರೆ ಹೋಗಬೇಕು ಎನ್ನುವುದು ತಿಳಿಯದಾಗಿದೆ. 'ಬೇಲಿಯೇ ಎದ್ದು ಹೊಲ ಮೇಯ್ದಂತೆ' ಪೊಲೀಸ್ ಬೇಲಿಯನ್ನೇ ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮೂಲಭೂತವಾದಿ ಅಲ್ಪಸಂಖ್ಯಾತರಿಗಾಗಿಯೇ ನಾವು ಆಡಳಿತ ನಡೆಸುವುದು, ಅವರ ಪರವಾಗಿ ನಿಲ್ಲುವುದು ಹಾಗೂ ಅವರ ಚಟುವಟಿಕೆಗಳಿಗೆ ಮುಕ್ತ ಸ್ವಾತಂತ್ರ್ಯ ಕಲ್ಪಿಸುವುದೇ ತಮ್ಮ ಧ್ಯೇಯ ಎಂದು ಘೋಷಿಸಿಬಿಡಲಿ. ಆಗ ಈ ಸರ್ಕಾರವನ್ನು ನೆಚ್ಚಿಕೊಳ್ಳದೇ ಜನ ಸ್ವಯಂ ರಕ್ಷಣೆ ಮಾಡಿಕೊಳ್ಳುತ್ತಾರೆ. ರಾಜ್ಯದ ಸದ್ಯದ ಬೆಳವಣಿಗೆಗಳು ಜನತೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ" ಎಂದು ತಿಳಿಸಿದ್ದಾರೆ.

"ಗೌರವಾನ್ವಿತ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ. ಅಂತೆಯೇ ಪೊಲೀಸ್ ಠಾಣೆಗಳಿಗೆ ದಾಳಿ ಮಾಡುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸರಿ ದಾರಿಗೆ ಬರಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಮನವಿ ಮಾಡುತ್ತೇನೆ" ಎಂದು ಆಗ್ರಹಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+