ಜಿಪಂ, ತಾಪಂ ಚುನಾವಣೆಗಳಿಗೆ ಬಿಜೆಪಿ ಸಜ್ಜು; ವಿಜಯೇಂದ್ರ ಮಹತ್ವದ ಸಂದೇಶ

ಕೋಲಾರ: ರಾಜ್ಯದಲ್ಲಿ ಮುಂದಿನ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಈ ಚುನಾವಣೆಗಳು ಕಾರ್ಯಕರ್ತರಿಗೆ ಪ್ರಮುಖವಾಗಿದ್ದು, ಪಕ್ಷ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಯಾತ್ರೆ ಹಾಗೂ ಕಾರ್ಯಕ್ರಮಗಳ ಮೂಲಕ ಕಾರ್ಯಕರ್ತರನ್ನು ಸಜ್ಜುಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಬರಲಿವೆ. ಅದು ಕಾರ್ಯಕರ್ತರ ಚುನಾವಣೆಯಾಗಿದ್ದು, ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸವೂ ಯಾತ್ರೆ ವೇಳೆ ನಡೆಯಲಿದೆ. ಭವಿಷ್ಯದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಅಧಿಕಾರಕ್ಕೆ ಬರಲು ಕೋಲಾರ ಜಿಲ್ಲೆಯಲ್ಲೂ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

BY Vijayendra Urges BJP Workers to Prepare for upcoming Zilla Panchayat and Taluk Panchayat Elections

ಕಾಂಗ್ರೆಸ್ಸಿನವರ ಕಪಟ ನಾಟಕ

ಹತಾಶರಾದ ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಮೇಲೂ ಅನುಮಾನ ಹುಟ್ಟು ಹಾಕುವ ದುಸ್ಸಾಹಸಕ್ಕೆ ಕೈಹಾಕುತ್ತಿದ್ದಾರೆ. ಕಾಂಗ್ರೆಸ್ಸಿನವರ ಕಪಟ ನಾಟಕವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಹತಾಶರಾದ ಕಾಂಗ್ರೆಸ್ ಪಕ್ಷ ಮತ್ತು ಆ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ನರೇಂದ್ರ ಮೋದಿಯವರ ಯೋಜನೆಗಳು, ದೇಶದ ಮುನ್ನಡೆಸುವಿಕೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ, ಮೋದಿಯವರ ಜನಪ್ರಿಯತೆಯನ್ನೂ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

BY Vijayendra: ಭಿಕ್ಷೆ ಕೊಟ್ಟಂತೆ ಪರಿಹಾರ ಕೊಟ್ಟಿದ್ದಾರೆ

ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂಥ ಭೀಕರ ಬರಗಾಲದ ಸಂದರ್ಭದಲ್ಲಿ ಹೆಕ್ಟೇರಿಗೆ 50 ಸಾವಿರ ಪರಿಹಾರಧನ ಕೊಡಿ ಎಂದು ನಾವು ಕೇಳಿದರೆ, ಅದನ್ನೂ ಕೊಡಲು ಸಾಧ್ಯವಾಗಿಲ್ಲ. ಕೇವಲ 2,500 ರೂ. ಭಿಕ್ಷೆ ಕೊಟ್ಟಂತೆ ಕೊಟ್ಟಿದ್ದಾರೆ ಎಂದು ಟೀಕಿಸಿದರು. ರಾಜ್ಯ ಸರಕಾರವು ರೈತರ ಪಾಲಿಗೆ ಬದುಕಿದ್ದೂ ಸತ್ತಂತಿದೆ ಎಂದು ದೂರಿದರು.

ಒನ್‍ವೇನಲ್ಲಿ ವಾಹನ ಹೋದರೆ 5 ಸಾವಿರ ದಂಡ ವಿಧಿಸುವುದಾಗಿ ಸಚಿವರು ಹೇಳಿದ್ದಾರೆ. ಕಾನೂನು ಉಲ್ಲಂಘಿಸುವರ ಮೇಲೆ ಕ್ರಮ ಕೈಗೊಳ್ಳಲಿ. ವಸೂಲಾತಿ, ಜನರ ಮೇಲೆ ಬರೆ ಎಳೆಯುವ ಕೆಲಸಕ್ಕೆ ಕಾಂಗ್ರೆಸ್ ಸರಕಾರ ಹೊರಟಿದೆ. ಸರಕಾರದ ವಿರುದ್ಧ ಜನರೇ ದಂಗೆ ಏಳುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಿಗೆ ರಿಯಲ್ ಎಸ್ಟೇಟ್ ಹೊರತುಪಡಿಸಿ ಬೇರೇನೂ ಆದ್ಯತೆ ಇಲ್ಲ ಎಂದು ಟೀಕಿಸಿದರು. ಕಳೆದ 3 ವರ್ಷದಲ್ಲಿ 55 ಸಾವಿರ ಕೋಟಿ ಎಸ್‍ಇಪಿ, ಟಿಎಸ್‍ಪಿ ಹಣವನ್ನು ಬೇರೆ ಬೇರೆ ಕಾರ್ಯಕ್ರಮಕ್ಕೆ ವರ್ಗಾವಣೆ ಮಾಡಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಟೀಕಿಸಿದರು.

ಜನರಿಂದಲೇ ಬುದ್ಧಿ ಕಲಿಸುವ ಕಾರ್ಯ..

ಈ ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಜನರು ಬುದ್ಧಿ ಕಲಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಜನರು ಆಶೀರ್ವಾದ ಮಾಡಲಿದ್ದಾರೆ. ಕರ್ನಾಟಕವು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಹೆಬ್ಬಾಗಿಲು. ಮುಂದಿನ ದಿನಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರಕಾರ ಇಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವರಿಗೆ ಶೇ 8 ಕಮಿಷನ್ ಕೊಡಬೇಕಾಗುತ್ತದೆ ಎಂಬ ಬಗ್ಗೆ ಕಾಂಗ್ರೆಸ್ ಶಾಸಕ ಅಶೋಕ್ ರೈ ಪತ್ರ ಬರೆದಿದ್ದಾರೆ. ಭ್ರಷ್ಟಾಚಾರ ಇಲ್ಲದೇ ಕಾಂಗ್ರೆಸ್ ಸರಕಾರದಲ್ಲಿ ಒಂದು ಹುಲ್ಲು ಕಡ್ಡಿಯೂ ಅಲ್ಲಾಡುವುದಿಲ್ಲ. ಗೃಹಲಕ್ಷ್ಮಿ 5 ಸಾವಿರ ಕೋಟಿ ಎಲ್ಲಿ ಹೋಗಿದೆ ಎಂಬುದಕ್ಕೆ ಇವತ್ತಿಗೂ ಉತ್ತರ ಸಿಕ್ಕಿಲ್ಲ ಎಂದು ಗಮನ ಸೆಳೆದರು. ಇದು ಭ್ರಷ್ಟರಿಂದ- ಭ್ರಷ್ಟರ ರಕ್ಷಣೆಗೆ ಇರುವ ಸರಕಾರ ಎಂದು ಟೀಕಿಸಿದರು. ಈ ಭ್ರಷ್ಟರ ಸರಕಾರವನ್ನು ಬುಡಸಮೇತ ಕಿತ್ತುಹಾಕುವ ಕೆಲಸವನ್ನು ಬಿಜೆಪಿ ಮಾಡಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+