ಬಿ ವೈ ವಿಜಯೇಂದ್ರ ಮುಂದಿನ ಸಿಎಂ ಎಂದ ಶಾಸಕ
ರಾಯಚೂರು, ಜನವರಿ 30: ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿ ಹೈಕಮಾಂಡ್ ನೇಮಕ ಮಾಡಿದ್ದಾರೆ. ಇತ್ತ ಲೋಕಸಭಾ ಚುನಾವಣೆದ ಹೊಣೆ ಹೊತ್ತ ಬಿ ವೈ ವಿಜಯೇಂದ್ರ ರಾಜ್ಯ ಪ್ರವಾಸ ಕೈ ಗೊಂಡಿದ್ದು, ವಿಜಯೇಂದ್ರ ಅವರ ಪರ ಸಾಕಷ್ಟು ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ.
ಹೌದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಯಚೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವಿಜಯೇಂದ್ರರವರಿಗೆ ಮುಂದಿನ ಸಿಎಂ ಎಂದು ಸ್ವಾಗತ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ನೀಡಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನ ಸ್ವಾಗತಿಸಿದ್ದಾರೆ.

ಇನ್ನೂ ಬಿವೈ ವಿಜಯೇಂದ್ರ ಮುಂದಿನ ಸಿಎಂ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಸಿಳ್ಳೆ,ಚಪ್ಪಾಳೆ ಹೊಡೆದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮತ್ತೊಮ್ಮೆ ಮೋದಿಜೀ ಜನಸಾಮಾನ್ಯರ ಸಂಕಲ್ಪ : ವಿಜಯೇಂದ್ರ
ಬೀದರ್ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್ಯಾಲಿ ಮೂಲಕ ತೆರಳಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಮತ್ತೊಮ್ಮೆ ನರೇಂದ್ರ ಮೋದಿಜೀ ಪ್ರಧಾನಿ ಎಂಬುದು ಜನಸಾಮಾನ್ಯರ ಸಂಕಲ್ಪ ಎಂದು ತಿಳಿಸಿದರು.
ಭಾರತ ಇಂದು ಬಲಿಷ್ಠವಾಗಿ ಬೆಳೆದು ನಿಲ್ಲಲು ಕಾರಣರಾಗಿರುವ ನಮ್ಮ ನೆಚ್ಚಿನ ಶ್ರಮಿಕ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನತೆ ಸಂಕಲ್ಪ ತೊಟ್ಟಿದ್ದಾರೆ. 2024 ರಾಮರಾಜ್ಯ ನಿರ್ಮಾಣದ ಚುನಾವಣೆಯಾಗಿದ್ದು, ಮೋದಿ ಜೀ ಅವರ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಹಗಲಿರುಳೆನ್ನದೇ ಶ್ರಮಿಸಬೇಕೆಂಬ ಕರೆ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರದ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ, ಶಾಸಕರಾದ ಪ್ರಭು ಚೌಹಾಣ್, ಶರಣು ಸಲಗಾರ್, ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ನೂತನ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ಅವರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.












Click it and Unblock the Notifications