ಸಿದ್ದು ವಿರುದ್ದ ವಿಜಯೇಂದ್ರ ಸ್ಪರ್ಧೆ ವಂದತಿಗೆ ತೆರೆ ಎಳೆದ ಬಿಎಸ್ವೈ
ಬೆಂಗಳೂರು, ಮಾರ್ಚ್31: ರಾಜ್ಯ ವಿಧಾನಸಭಾ ಚುನಾವಣೆ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುತ್ತಾರೆ ಎನ್ನುವ ಚರ್ಚೆ ಜೋರಾಗಿತ್ತು.
ಈ ಬಾರೀ ರಾಜಕೀಯ ಎದುರಾಳಿಯಾಗಿರುವ ಸಿದ್ದರಾಮಯ್ಯ ಅವರನ್ನ ಸೋಲಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನ ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂಬ ಊಹಪೋಹಗಳು ಕೇಳಿ ಬಂದಿದ್ದು, ಈ ಎಲ್ಲಾ ಗೊಂದಲಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದೀಯ ಮಂಡಳಿಯ ಸದಸ್ಯರಾದ ಬಿ.ಎಸ್ ಯಡಿಯೂರಪ್ಪ ಅವರು ತೆರೆ ಎಳೆದಿದ್ದಾರೆ.

ಹೌದು, ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರುಣಾದಿಂದ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡ್ತಾರೆ ಎಂದು ಹೇಳಿದ್ದಾರೆ.

ವರುಣಾ ಕ್ಷೇತ್ರದಿಂದ ನಿಲ್ಲುವಂತೆ ಒತ್ತಡ ಇದ್ದರೂ, ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂದು ಈ ಹಿಂದೆಯೇ ಹೇಳಿದ್ದೇನೆ. ಯಾವ ಕಾರಣಕ್ಕೂ ವಿಜಯೇಂದ್ರ ವರುಣಾ ಕ್ಷೇತ್ರಕ್ಕೆ ಹೋಗೊ ಪ್ರಶ್ನೆ ಇಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡ್ತಾರೆ. ಒತ್ತಡ ಇದ್ರು, ನಾನು ಹೇಳಿದ್ದೇನೆ ಅವರಿಗೆ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್‌ಗೂ ತಿಳಿಸುತ್ತೇನೆ. ವಿಜಯೇಂದ್ರಗೂ ತಿಳಿಸುತ್ತೇನೆ ಎಂದು ಹೇಳಿದರು.
ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಯಡಿಯೂರಪ್ಪ ಅವರ ತೀರ್ಮಾನ: ಸಿಎಂ
ವರುಣಾದಲ್ಲಿ ಖಂಡಿತವಾಗಿಯೂ ಪ್ರಬಲ ಪೈಪೋಟಿ ನೀಡಲಾಗುತ್ತದೆ. ಬಿ.ಎಸ್.ಯಡಿಯೂರಪ್ಪರ ಅನಿಸಿಕೆಯಂತೆ ವಿಜಯೇಂದ್ರ ಸ್ಪರ್ಧೆ ಅಲ್ಲಿನ ಜನರ ಬೇಡಿಕೆ ಆಗಿದೆ. ಈ ಬಗ್ಗೆ ಅಂತಿಮ ನಿರ್ಧಾರ ಬಿಎಸ್‌ವೈ ಮತ್ತು ಪಾರ್ಲಿಮೆಂಟ್ ಬೋರ್ಡ್ ತೆಗೆದುಕೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ವರುಣಾ ಕ್ಷೇತ್ರದ ಬಗ್ಗೆ ಯಡಿಯೂರಪ್ಪನವರು ಸಮೀಕ್ಷೆಗಳನ್ನು ನಡೆಸಿ, ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಉಳಿದಂತೆ ರಾಜ್ಯದಲ್ಲಿ ಇನ್ನಿತರೆ ಸಮೀಕ್ಷೆಗಳು ನಡೆಯುತ್ತಿರುತ್ತವೆ. ವಿಶೇಷವಾಗಿ ಕಾಂಗ್ರೆಸ್ ಗೆಲ್ಲಲಿದೆ ಎನ್ನುವ ಸಮೀಕ್ಷೆಗಳು ಬಹಳ ಹಿಂದೆ ನಡೆಸಿರುವುದು. ಚುನಾವಣೆಗೆ ಇನ್ನೂ ಒಂದೂವರೆ ತಿಂಗಳಿದ್ದು, ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಪಟ್ಟಿ ಮುಂದಿನ ವಾರ ಪ್ರಕಟಗೊಳ್ಳಲಿದ್ದು, ಎಲ್ಲಾ ಅಭ್ಯರ್ಥಿಗಳ ಬಗ್ಗೆ ತಳಮಟ್ಟದಿಂದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಸಿದ್ಧರಾಮಯ್ಯನವರು ಬಹಳ ಹತಾಶರಾಗಿದ್ದಾರೆ. 2013ರಲ್ಲಿ ಕೊನೆ ಚುನಾವಣೆಯೆಂದಿದ್ದರು. 2018ರಲ್ಲಿ ಮುಖ್ಯಮಂತ್ರಿಯಾಗುವ ಕನಸು ಕಂಡಿದ್ದರು. ಈಗ ಪುನಃ ಕನಸು ಕಾಣುತ್ತಿದ್ದಾರೆ. ಒಬ್ಬ ವ್ಯಕ್ತಿ ಮುಖ್ಯಮಂತ್ರಿಯಾಗುವುದು ಮುಖ್ಯವಲ್ಲ. ಆ ವ್ಯಕ್ತಿ ಮುಖ್ಯಮಂತ್ರಿಯಾಗಿದ್ದಾಗ ಏನು ಮಾಡಿದ್ದರು. ಏನು ಮಾಡಬಲ್ಲರು ಎನ್ನುವುದು ಜನರು ತೀರ್ಮಾನ ಮಾಡುತ್ತಾರೆ. ಸಿದ್ಧರಾಮಯ್ಯರನ್ನು 2018ರಲ್ಲಿ ತಿರಸ್ಕಾರ ಮಾಡಿದ್ದರು. ಈಗಲೂ ತಿರಸ್ಕರಿಸುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.












Click it and Unblock the Notifications