Bye-Election 2024: ಉಪ ಚುನಾವಣೆಗೆ ಕೆಲವೇ ಗಂಟೆ ಮುಂಚೆ "ಬಿಜೆಪಿಗೆ ಬಿಗ್‌ಶಾಕ್" ಕೊಟ್ಟ ಕಾಂಗ್ರೆಸ್!
ಕರ್ನಾಟಕದಲ್ಲಿ ಉಪ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಉಳಿದಿರುವಂತೆ ಬಿಜೆಪಿಗೆ ರಾಜ್ಯ ಸರ್ಕಾರವು ಡಬಲ್ ಶಾಕ್ ಕೊಟ್ಟಿದೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ಈಗಾಗಲೇ ಬಹಿರಂಗ ಚುನಾವಣೆ ಪ್ರಚಾರಕ್ಕೆ ತೆರೆಬಿದ್ದಿದೆ. ಇನ್ನೇನಿದ್ದರೂ ಮನೆ ಮನೆ ಪ್ರಚಾರ ಮಾತ್ರ ಈ ಸಂದರ್ಭದಲ್ಲಿ ಬಿಜೆಪಿಯನ್ನು ಕಟ್ಟಿಹಾಕುವುದಕ್ಕೆ ಕಾಂಗ್ರೆಸ್ ಮುಂದಾಗಿದೆ. ಈ ನಡುವೆ ಬಿಜೆಪಿಯ ಇಬ್ಬರು ಪ್ರಭಾವಿ ನಾಯಕರಿಗೆ ಕಾಂಗ್ರೆಸ್ ಶಾಕ್ ಕೊಟ್ಟಿದೆ.
ರಾಜ್ಯದ ಮೂರು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆಯಲ್ಲಿ ನವೆಂಬರ್ 13ಕ್ಕೆ ಉಪ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳು ಈಗಾಗಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇದೀಗ ಈ ಉಪ ಚುನಾವಣೆಗೆ ಮತದಾನ ತನ್ನ ಮತ ಯಾರಿಗೆ ಹಾಕಬೇಕು ಎಂದು ಅಂತಿಮ ಸಿದ್ಧತೆ ಮಾಡಿಕೊಳ್ಳುತ್ತಿರುವಾಗಲೇ ಕಾಂಗ್ರೆಸ್ ಸರ್ಕಾರ ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಿದೆ.

ಬಸವರಾಜ ಬೊಮ್ಮಾಯಿ, ಸಿ.ಟಿ ರವಿ ಮೇಲೆ ಎಫ್‌ಐಆರ್ ದಾಖಲು!
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹಾಗೂ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಶಾಕ್ ನೀಡಲಾಗಿದೆ.
ಎರಡು ಗುಂಪುಗಳ ಮಧ್ಯೆ ದ್ವೇಷ ಬಿತ್ತುವಂತೆ ಭಾಷಣ ಮಾಡಿರುವ ಆರೋಪದ ಮೇಲೆ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಮೂವರ ಮೇಲೆ ಇಲ್ಲಿನ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಶಿಗ್ಗಾಂವಿ ಉಪ ಚುನಾವಣೆಯ ತಲೆಬಿಸಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಇದ್ದಾರೆ. ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ ಅವರು ಮಗ ಭರತ್‌ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಭರತ್ ಬೊಮ್ಮಾಯಿ ಮೊದಲ ಬಾರಿ ಚುನಾವಣಾ ಅಖಾಡಕ್ಕೆ ಜಿಗಿದಿದ್ದು. ಈ ಬಾರಿ ಅದೃಷ್ಟ ಪರೀಕ್ಷೆಯನ್ನು ಮಾಡುತ್ತಿದ್ದಾರೆ.
ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಇದೇ ತಿಂಗಳು 4ರಂದು ಶಿಗ್ಗಾಂವಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಸರ್ಕಾರ ವಕ್ಫ್ ಆಸ್ತಿ ಕಬಳಿಸುತ್ತಿದೆ ಎನ್ನುವ ಘೋಷಾವಾಕ್ಯದ ಅಡಿಯಲ್ಲಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಬಸವರಾಜ ಬೊಮ್ಮಾಯಿಯ ಮೇಲೆ ಇದೆ.
ಈ ಪ್ರಕರಣದಲ್ಲಿ ಬಸವರಾಜ ಬೊಮ್ಮಾಯಿ ಮೇಲೆ ಮಾತ್ರವಲ್ಲ. ಬಿಜೆಪಿಯ ಮುಖಂಡರಾದ ಸಿ.ಟಿ ರವಿ ಹಾಗೂ ಪ್ರತಾಪ್ ಸಿಂಹ
ಮೇಲೂ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶಿಗ್ಗಾಂವಿಯಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ನೀತಿ ಸಂಹಿತೆ ಉಲ್ಲಂಘಟನೆ ಮಾಡಿರುವ ಆರೋಪ ಕೇಳಿ ಬಂದಿದೆ. ಎರಡು ಗುಂಪುಗಳ ನಡುವೆ ದ್ವೇಷ ಸೃಷ್ಟಿ ಮಾಡುವ ರೀತಿಯಲ್ಲಿ ಈ ನಾಯಕರು ಭಾಷಣ ಮಾಡಿದ್ದಾರೆ. ಹೀಗಾಗಿ, ಈ ಮೂವರ ಮೇಲೆ 2 ಪ್ರತ್ಯೇಕ ಪ್ರಕರಣವನ್ನು ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications