Get Updates
Get notified of breaking news, exclusive insights, and must-see stories!

ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ ಇದೆ ಎಂದು ಭೈರತಿ ಸುರೇಶ್: ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್‌ 21: ನಮ್ಮ ತಾಯಿಯವರ ಆಕಸ್ಮಿಕ ಸಾವಿನ ವಿಚಾರಗಳನ್ನು ಮುಂದೆ ತಂದು ಮಾತನಾಡುತ್ತಿರುವುದು ನಿಮ್ಮ ಅಸಭ್ಯ ಹಾಗೂ ಸಂಸ್ಕೃತಿ ಹೀನ ನಡವಳಿಕೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಮಿಸ್ಟರ್ ಬೈರತಿ ಸುರೇಶ್‌ ಅವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವುದು ಗಾದೆ ಮಾತು, ಆದರೆ ನೀವು ಹಾಗೂ ನಿಮ್ಮ ಮುಖ್ಯಮಂತ್ರಿಗಳ ಮೈಯೆಲ್ಲಾ ಭ್ರಷ್ಟತೆಯ ಹುಣ್ಣು ತುಂಬಿಕೊಂಡು ನಾರುತ್ತಿದೆ. ಒಂದರ ಮೇಲೊಂದು ತನಿಖೆಗಳು ನಡೆಯುತ್ತಲೇ ಇವೆ, ಕರ್ನಾಟಕದ ಇತಿಹಾಸದಲ್ಲಿ ಅನೈತಿಕತೆಯನ್ನು ಕತ್ತಿಗೆ ಕಟ್ಟಿಕೊಂಡು ಸರ್ಕಾರ ನಡೆಸುತ್ತಿರುವ ಇತಿಹಾಸ ನಿರ್ಮಿಸಿದ ದಾಖಲೆ ನಿಮಗೆ ಹಾಗೂ ನಿಮ್ಮ ಮುಖ್ಯಮಂತ್ರಿಗೇ ಸಲ್ಲುತ್ತದೆ.

Byrathi Suresh s statement against Shobha Karandlaje BY Vijayendra warn against file case

ನೀವು ನಡೆಸಿದ ಕಡು ಭ್ರಷ್ಟ ಹಗರಣಗಳಿಗೆ ಕನಸು ಮನಸ್ಸಿನಲ್ಲೂ ಎಣಿಸದ ರೀತಿಯಲ್ಲಿ ತನಿಖೆಗಳು ನಿಮ್ಮ ಕೊರಳು ಸುತ್ತಿ ಕೊಳ್ಳುತ್ತಿವೆ ಇದರಿಂದ ತೀವ್ರ ಹತಾಶಗೊಂಡಿರುವ ನೀವು ನಮ್ಮ ತಾಯಿಯವರ ಆಕಸ್ಮಿಕ ಸಾವಿನ ವಿಚಾರಗಳನ್ನು ಮುಂದೆ ತಂದು ಮಾತನಾಡುತ್ತಿರುವುದು ನಿಮ್ಮ ಅಸಭ್ಯ ಹಾಗೂ ಸಂಸ್ಕೃತಿ ಹೀನ ನಡವಳಿಕೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಸಚಿವ ಬೈರತಿ ಸುರೇಶ್‌ ವಿರುದ್ಧ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.

ಮಾನ್ಯ ಶೋಭಾ ಕರಂದ್ಲಾಜೆ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲಾಗದ ನೀವು ಹೇಡಿಯಂತೆ ಕಪೋಲ ಕಲ್ಪಿತ ಆರೋಪಗಳನ್ನು ಮಾಡಿ ವಿಷಯಾಂತರ ಮಾಡಲು ಹೊರಟಿರುವ ನಿಮ್ಮ ನಡೆ "ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಗುಣವ ಬಿಡು ನಾಲಿಗೆ" ಎಂಬ ದಾಸರ ಪದವನ್ನು ನಿಮಗೆ ನೆನಪಿಸಿ ಹೇಳಬೇಕಾಗಿದೆ. ಮಾಡಿದ್ದುಣ್ಣೋ ಮಹರಾಯ ಎಂಬ ಮಾತಿನಂತೆ ಅತೀ ಶೀಘ್ರದಲ್ಲೇ ನಿಮ್ಮ ಹಾದಿ ಕೃಷ್ಣನ ಜನ್ಮಸ್ಥಾನದತ್ತ ಸಾಗಲಿದೆ ಎಂದು ಹೇಳಿದರು.

ಬೈರತಿ ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ: ರೇಣುಕಾಚಾರ್ಯ

ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು ಎಚ್ಚರಿಸಿದ್ದಾರೆ.

ಸಚಿವ ಸ್ಥಾನದಲ್ಲಿರುವ ಬೈರತಿ ಸುರೇಶ್ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಯಡಿಯೂರಪ್ಪನವರು ನಮ್ಮ ಸಂಬಂಧ 35 ವರ್ಷಗಳಿಂದ ನೋಡಿಕೊಂಡು ಬರುತ್ತಿದ್ದೇನೆ ಅವಾಗ ನೀವು ಇನ್ನು ರಾಜಕೀಯದಲ್ಲಿ ಬಚ್ಚ ತಾವು ಸಚಿವರಾಗಿ ಇಂಥ ಕೇಳು ಮಟ್ಟ ಹೇಳಿಕೆಗಳನ್ನು ಕೊಡಬಾರದು ಯಡಿಯೂರಪ್ಪಜೀ ಮೈತ್ರಾದೇವಿ, ಶೋಭಾ ಕರಂದ್ಲಾಜೆ ಅವರ ಬಗ್ಗೆ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇನೆ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ. ತಮ್ಮ ಮೇಲೆ ಅಪವಾದ ಬಂದ ತಕ್ಷಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು ಇವರಿಗೆ ಅಭ್ಯಾಸವಾಗಿದೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವವರ ಗುಣನಡತೆ ಬಗ್ಗೆ ಮಾತನಾಡುವುದು ಅಕ್ಷಮ್ಯ. ಮೈತ್ರಾದೇವಿ ಅವರು ತಾಯಿ ಸಮಾನ. ಅವರು ಸಾವನ್ನಪ್ಪಿ ಹಲವಾರು ವರ್ಷಗಳು ಕಳೆದಿದ್ದು, ಈಗ ಅದರ ಕುರಿತು ಮಾತನಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಇಂಥ ಬೇಜವಾಬ್ದಾರಿ ಹೇಳಿಕೆಗಳನ್ನು ನಿಲ್ಲಿಸದಿದ್ದಲ್ಲಿ ತಾವು ನಗರಾಭಿವೃದ್ಧಿ ಸಚಿವರಾಗಿದ್ದೀರಿ ಉತ್ತಮವಾದ ಅಧಿಕಾರವನ್ನು ನಡೆಸಿಕೊಂಡು ಹೋಗಬೇಕು ಎಂದು ಎಚ್ಚರಿಸಿದ್ದಾರೆ ಅವರ ಮೂಡ ಹಗರಣದ ಮುಚ್ಚಾಕೊಳು ಈ ರೀತಿ ಹೇಳಿಕೆ ನೀಡಿ ವಿಷಾಂತರ ಮಾಡಲು ಹೊರಟಿದ್ದಾರೆ ಎಂದು ಎಂ ಪಿ ರೇಣುಕಾಚಾರ್ಯ ಅವರು ಕಿಡಿಕಾರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+