ಸಮೀಕ್ಷೆ: ಸಿದ್ದರಾಮಯ್ಯ ಅವರ ಕೈ ಹಿಡಿದ ಅನ್ನಭಾಗ್ಯ ಯೋಜನೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 21:ಸಿದ್ದರಾಮಯ್ಯ ಅವರ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿ ಫೋರ್ ಸಂಸ್ಥೆ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ ವರದಿ ನೀಡಿದೆ. ಇದರ ಜತೆಗೆ ಸರ್ಕಾರದ ಯೋಜನೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೂಡಾ ಅಭಿಪ್ರಾಯ ಸಂಗ್ರಹಿಸಲಾಗಿದೆ.

ಈ ವರದಿಯಂತೆ ಸರ್ಕಾರದ ಜನಪ್ರಿಯ ಯೋಜನೆಗಳ ಪೈಕಿ ಅನ್ನಭಾಗ್ಯಕ್ಕೆ ಜನತೆ ಹೆಚ್ಚಿನ ಅಂಕಗಳನ್ನು ನೀಡಿದ್ದಾರೆ.ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ಸಂದರ್ಶಿಸಿ ಈ ಸಮೀಕ್ಷೆಯ ವರದಿಯನ್ನು ತಯಾರಿಸಲಾಗಿದೆ.

ಸಮೀಕ್ಷೆ: ಕರ್ನಾಟಕದ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಯಾರು?

ಈ ಪೈಕಿ 340 ನಗರ ಹಾಗೂ 550 ಗ್ರಾಮೀಣ ಪ್ರದೇಶಗಳ ವಿವಿಧ ಧರ್ಮ, ಜಾತಿಯ ಜನರನ್ನು ಮಾತನಾಡಿಸಿ, ವಿವಿಧ ವಿಭಾಗಗಳಲ್ಲಿ ಜನರ ಬೇಡಿಕೆಗಳೇನು? ಸರ್ಕಾರದ ಸಾಧನೆಗಳೇನು? ಮುಂದಿನ ಮುಖ್ಯಮಂತ್ರಿ ಯಾರಾಗಬೇಕು? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲಾಗಿದೆ.

ಸಿ ಫೋರ್ ಸಮೀಕ್ಷೆ : ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಬಹುಮತ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಅನ್ನಭಾಗ್ಯ ಯೋಜನೆಗೆ 4 ಸಾವಿರ ಕೋಟಿ ರು ವೆಚ್ಚ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ದಾರ ಕುಟುಂಬದ ಒಬ್ಬರಿಗೆ 7 ಕೆ.ಜಿಯಂತೆ ಒಂದು ರುಪಾಯಿದರದಲ್ಲಿ ಪಡಿತರ ಅಕ್ಕಿ ವಿತರಿಸಲಾಗುತ್ತಿದೆ. ಇದರ ಜತೆಗೆ ಉಪ್ಪು, ತಾಳೆ ಎಣ್ಣೆ ಸಬ್ಸಿಡಿ ದರದಲ್ಲಿ ಲಭ್ಯದಲ್ಲಿ ಪೂರೈಸಲಾಗುತ್ತಿದೆ.

C fore Pre – Poll Survey Report Which schemes of the govt is the best?

ಶ್ರೇಯಾಂಕ ಪಟ್ಟಿ ಹೀಗಿದೆ:
ಅನ್ನಭಾಗ್ಯ : ಶೇ79
ಮಧ್ಯಾಹ್ನದ ಬಿಸಿಯೂಟ: ಶೇ38
ವಿದ್ಯಾಸಿರಿ: ಶೇ26
ಕ್ಷೀರಭಾಗ್ಯ: ಶೇ16
ಕೃಷಿಭಾಗ್ಯ: ಶೇ 11


ಇದೇ ರೀತಿ ಈ ಸರ್ಕಾರದ ಆಡಳಿತ ಅವಧಿಯಲ್ಲಿ ಸಾರ್ವಜನಿಕರು ಅನುಭವಿಸಿದ ಸಮಸ್ಯೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಿಂದ ಕೊನೆ ಸ್ಥಾನದವರೆಗಿನ ಪಟ್ಟಿ

ಸಿ ವೋಟರ್ ಸಮೀಕ್ಷೆ: ಬರೀ ಬೊಗಳೆ ಎಂದ ಓದುಗರು!

ಕುಡಿಯುವ ನೀರಿನ ಕೊರತೆ: ಶೇ 37
ಹದಗೆಟ್ಟ ರಸ್ತೆ: ಶೇ 26
ಕಸ ವಿಂಗಡಣೆ ಹಾಗೂ ಸಂಸ್ಕರಣೆ: ಶೇ 15
ನಿರುದ್ಯೋಗ : ಶೇ 11
ವಿದ್ಯುತ್ ವ್ಯತ್ಯಯ : ಶೇ 11
ನೀರಾವರಿ ಯೋಜನೆ ಕೊರತೆ : ಶೇ 11

ಮಿಕ್ಕಂತೆ ಭ್ರಷ್ಟಾಚಾರ, ಕಾನೂನು ಮತ್ತು ಸುವ್ಯವಸ್ಥೆ, ಬೆಲೆ ಏರಿಕೆ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜನತೆ ಉತ್ತರಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
C fore Pre – Poll Survey prediction: Which schemes of the govt is the best? . Which is the most important problem in your constituency? .C fore conducted the pre-poll survey in Karnataka between July 19 and August 10, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X