ಸ್ನೇಹಿತನಿಗೆ ಬನ್ನೇರುಘಟ್ಟದ ರೆಸಾರ್ಟ್ ಕೊಟ್ಟಿದ್ದ ಸಿಜೆ ರಾಯ್‌ಗೆ ಮೋಸ, ಇದೇ ಸಾವಿಗೆ ಕಾರಣವಾಯಿತಾ?

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿ. ಜೋಸೆಫ್ ರಾಯ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ (SIT), ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್‌ಗೆ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಈ ತನಿಖೆಯ ವೇಳೆ ರಾಯ್ ಅವರ ಆತ್ಮಹತ್ಯೆಗೆ ಪ್ರಮುಖವಾಗಿ ಎರಡು ಅಂಶಗಳು ಕಾರಣವಾಗಿದ್ದವು ಎಂಬುದು ಬೆಳಕಿಗೆ ಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಪೂರ್ಣಗೊಳಿಸಿದ್ದು, ಇನ್ನೆರಡು ದಿನಗಳಲ್ಲಿ ಮ್ಯಾಜಿಸ್ಟ್ರೇಟ್‌ಗೆ ಅಂತಿಮ ವರದಿ ಸಲ್ಲಿಸುವ ಸಾಧ್ಯತೆಯಿದೆ. ರಾಯ್ ಅವರ ಆತ್ಮಹತ್ಯೆಗೆ ಕಾರಣವಾದ ಅಂಶಗಳ ಕುರಿತು ತನಿಖಾ ವರದಿಯಲ್ಲಿ ವಿವರಿಸಲಾಗಿದೆ ಎನ್ನಲಾಗಿದೆ.

C J Roy Suicide Case SIT Finds Two Key Factors Behind Confident Group Chief s Death

ತನಿಖೆಯ ಪ್ರಕಾರ, ರಾಯ್ ಅವರಿಗೆ ಆಪ್ತ ವ್ಯಕ್ತಿಯಿಂದ ಉಂಟಾದ ವಿಶ್ವಾಸದ್ರೋಹ ಹಾಗೂ ಆದಾಯ ತೆರಿಗೆ ಇಲಾಖೆಗೆ ತಮ್ಮ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಲು ಎದುರಾದ ಸಮಸ್ಯೆಗಳಿಂದಾಗಿ ಮಾನಸಿಕ ಒತ್ತಡ ಹೆಚ್ಚಾಗಿತ್ತು ಎಂದು ಹೇಳಲಾಗಿದೆ.

ನಂಬಿಕಸ್ಥನಿಂದಲೇ ವಂಚನೆ?

ಬನ್ನೇರುಘಟ್ಟ ರಸ್ತೆಯಲ್ಲಿದ್ದ ರೆಸಾರ್ಟ್‌ವೊಂದನ್ನು ರಾಯ್ ಅವರು ತಮ್ಮ ನಂಬಿಕಸ್ಥ ವ್ಯಕ್ತಿಗೆ ವಹಿಸಿದ್ದರು ಎನ್ನಲಾಗಿದೆ. ಆದರೆ ಆ ವ್ಯಕ್ತಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಲ್ಲದೆ, ರಾಯ್ ವಿರುದ್ಧವೇ ದೂರು ನೀಡಿದ್ದ ಎನ್ನಲಾಗಿದೆ. ಈ ಬೆಳವಣಿಗೆ ಉದ್ಯಮಿಗೆ ತೀವ್ರ ನೋವುಂಟು ಮಾಡಿತ್ತು ಎಂದು ಎಸ್‌ಐಟಿ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

ಐಟಿ ವಿಚಾರವೂ ಒತ್ತಡ ಹೆಚ್ಚಿಸಿತ್ತೇ?

ಇದೇ ವೇಳೆ, ಆದಾಯ ತೆರಿಗೆ ಇಲಾಖೆಯ ದಾಳಿಗೂ ಮುನ್ನ ರಾಯ್ ಅವರ ಎರಡು ಲೆಕ್ಕಪರಿಶೋಧಕ ಸಂಸ್ಥೆಗಳು ತೊರೆದಿದ್ದವು ಎನ್ನಲಾಗಿದೆ. ಹೀಗಾಗಿ ತೆರಿಗೆ ಅಧಿಕಾರಿಗಳಿಗೆ ತಮ್ಮ ಆದಾಯದ ಮೂಲಗಳಿಗೆ ಸಂಬಂಧಿಸಿದ ನಿಖರ ದಾಖಲೆಗಳನ್ನು ಒದಗಿಸಲು ರಾಯ್ ಅವರಿಗೆ ಸಾಧ್ಯವಾಗಿರಲಿಲ್ಲ. ಇದರಿಂದಲೂ ಅವರ ಮೇಲೆ ಮಾನಸಿಕ ಒತ್ತಡ ಹೆಚ್ಚಾಗಿತ್ತು ಎಂದು ತನಿಖೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ನಿಮ್ಹಾನ್ಸ್ ತಜ್ಞರಿಂದಲೂ ಮಾಹಿತಿ ಸಂಗ್ರಹ

ರಾಯ್ ಅವರ ಆತ್ಮಹತ್ಯೆಗೂ ಮುನ್ನ ಅವರ ಮಾನಸಿಕ ಸ್ಥಿತಿ ಹೇಗಿತ್ತು ಎಂಬುದರ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸಿದೆ. ಈ ಸಂಬಂಧ ನಿಮ್ಹಾನ್ಸ್ ತಜ್ಞರಿಂದಲೂ ತಂಡ ಅಭಿಪ್ರಾಯ ಪಡೆದುಕೊಂಡಿದೆ ಎನ್ನಲಾಗಿದೆ. ಎಲ್ಲಾ ಆಯಾಮಗಳನ್ನು ಪರಿಶೀಲಿಸಿರುವ ಎಸ್‌ಐಟಿ ಇದೀಗ ಅಂತಿಮ ವರದಿ ಸಲ್ಲಿಸಲು ಮುಂದಾಗಿದೆ.

ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕೇರಳ ಮೂಲದ ಉದ್ಯಮಿ ಚಿರಿಯನ್ಕಂಡತ್ ಜೋಸೆಫ್ ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದರು. ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅವರು ಗುರುತಿಸಿಕೊಂಡಿದ್ದರು. 2026ರ ಜನವರಿ 30ರಂದು ಬೆಂಗಳೂರಿನ ರಿಚ್‌ಮಂಡ್ ಸರ್ಕಲ್ ಬಳಿಯ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ಪ್ರಕರಣ ದೇಶದ ಉದ್ಯಮ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+