ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೌಶಲ್ಯಾಭಿವೃದ್ಧಿ ಸಂಕಲ್ಪ ಹೆಲ್ಪ್‌ಲೈನ್‌ಗೆ ಚಾಲನೆ ನೀಡಿದ ಡಿಸಿಎಂ

|
Google Oneindia Kannada News

ಬೆಂಗಳೂರು, ಡಿ. 21: ದೇಶದಲ್ಲಿ ಇದೇ ಮೊದಲ ಬಾರಿಗೆ ಅನುಷ್ಠಾನಕ್ಕೆ ತಂದಿರುವ ಕೌಶಲ್ಯ ತರಬೇತಿ ಮಾಹಿತಿ ನೀಡುವ ʼಸಂಕಲ್ಪʼ ಸಹಾಯವಾಣಿಗೆ ಕೌಶಲ್ಯಾಭಿವೃದ್ಧಿ ಮತ್ತು ಗ್ರಾಮೀಣ ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್. ಅಶ್ವಥ್‌ ನಾರಾಯಣ ಅವರು ಸೋಮವಾರ ಚಾಲನೆ ನೀಡಿದರು.

ರಾಜ್ಯದ ಎಲ್ಲ ಯುವಜನರಿಗೆ ವರದಾನವಾಗಬಲ್ಲ, ಅವರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲೀಕರಣ ಮಾಡುವ ಉದ್ದೇಶದಿಂದ ಈ ಸಹಾಯವಾಣಿಯನ್ನು ರೂಪಿಸಲಾಗಿದೆ. ಸಚಿವ ಡಾ. ಅಶ್ವಥ್ ನಾರಾಯಣ್ ಅವರು ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಕೊಡಗು ಜಿಲ್ಲೆಯಲ್ಲಿನ ತರಬೇತಿ ಕೇಂದ್ರಗಳ ಬಗ್ಗೆ ಮಾಹಿತಿ ಪಡೆಯುವುದರ ಮೂಲಕ ಉದ್ಘಾಟಿಸಿದರು.

 C.N. Ashwath Narayana inaugurated sankalpa helpline for implement the skills training

ಬಳಿಕ ಮಾತನಾಡಿದ ಅವರು, ಗ್ರಾಮೀಣ ಯುವಜನರಿಗೆ ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದು ಮನವಿ ಮಾಡಿದ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಸಹಾವಾಣಿ ಸಂಖ್ಯೆ 080-24482558ಗೆ ಕರೆ ಮಾಡುವಂತೆ ತಿಳಿಸಿದರು.

English summary
Minister of Skills Development Dr. C.N. Ashwath Narayana was inaugurated the 'sankalpa' helpline for the first time in the country to implement the skills training. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X