ಕಾಂಗ್ರೆಸ್‌ ನಾಯಕರ ಸಂಪರ್ಕದಲ್ಲಿ ಸಿ ಪಿ ಯೋಗೇಶ್ವರ್;‌ ಡಿ ಕೆ ಶಿವಕುಮಾರ್‌ ಭೇಟಿಯ ಸತ್ಯ ಬಿಚ್ಚಿಟ್ಟ ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು, ಅಕ್ಟೋಬರ್‌ 21: ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯು ಸಂಪರ್ಕದಲ್ಲಿದ್ದಾರೆ ಎಂದು ಹೊರಗಡೆ ಚರ್ಚೆ ನಡೆಯುತ್ತಿದೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಸ್ಟೋಟಕ ಹೇಳಿಕೆಯನ್ನ ನೀಡಿದ್ದಾರೆ.

ಸಿ.ಪಿ.ಯೋಗೇಶ್ವರ್ ಅವರು ಮೇಲೆ ಇದ್ದಾರೆ. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ಅವರು ಮೇಲಿದ್ದಾರೆ, ದೊಡ್ಡವರು. ಅವರ ಬಗ್ಗೆ ನಾನೇನು ಚರ್ಚೆ ಮಾಡಲಿ? ಅವರು ಏನು ಮಾಡುತ್ತಾರೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

C P Yogeshwar is in contact with Congress has met with D K Shivakumar says H D Kumaraswam

ಎಲ್ಲವನ್ನೂ ಮಾಧ್ಯಮಗಳಲ್ಲಿ ಗಮನಿಸುತ್ತಿದ್ದೇನೆ. ಅವರು ಕಾಂಗ್ರೆಸ್ ನಾಯಕರ ಜತೆಯೂ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ಮುಖಂಡರ ಜತೆಯು ಸಂಪರ್ಕದಲ್ಲಿದ್ದಾರೆ ಎಂದು ಹೊರಗಡೆ ಚರ್ಚೆ ನಡೆಯುತ್ತಿದೆ. ಪಕ್ಕದ ಮದ್ದೂರು ಕ್ಷೇತ್ರದ ಶಾಸಕರ ಜೊತೆ ಸಂಪರ್ಕದಲ್ಲಿದ್ದಾರೆ ಅಂತ ಚರ್ಚೆ ನಡೆಯುತ್ತಿದೆ. ಎಲ್ಲವನ್ನೂ ಬಿಜೆಪಿ ವರಿಷ್ಠ ನಾಯಕರು ಗಮನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈಗ ಚನ್ನಪಟ್ಟಣ ವಿಚಾರವಾಗಿ ಅಭ್ಯರ್ಥಿ ಘೋಷಣೆ ಬಾಕಿ ಇದೆ. ಈಗಾಗಲೇ ಬಿಜೆಪಿ ವರಿಷ್ಠ ನಾಯಕರೇ ಹಲವು ಬಾರಿ ಹೇಳಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ಕ್ಷೇತ್ರದ ಬಗ್ಗೆ ನೀವೇ ಅಂತಿಮ ನಿರ್ಧಾರ ತೆಗೆದುಕೊಳ್ಳಿ ಎಂದಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಸ್ಪರ್ಧಿಸಿರುವ ಕ್ಷೇತ್ರ ಎನ್ನುವುದು ಅವರಿಗೆ ಗೊತ್ತಿದೆ. ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚನ್ನಪಟ್ಟಣದಲ್ಲಿ ನಾವು ಘೋಷಣೆ ಮಾಡುತ್ತೇವೆ. ಚನ್ನಪಟ್ಟಣ ವಿಚಾರದಲ್ಲಿ ಇನ್ನೂ ನಾವು ಯಾವುದೇ ನಿರ್ಧಾರ ಮಾಡಿಲ್ಲ ಎಂದರು ಅವರು.

ಕಾಂಗ್ರೆಸ್ ನಾಯಕರಲ್ಲಿ ಏನಾದರೂ ಮಾಡಿ ಕುಮಾರಸ್ವಾಮಿ ವರ್ಚಸ್ಸು ಕುಗ್ಗಿಸಬೇಕು ಅನ್ನುವುದು ಕೆಲವರ ಉದ್ದೇಶ. ನಾನು ಎಲ್ಲಾ ಬಿಜೆಪಿ ನಾಯಕರ ಬಗ್ಗೆ ಹೀಗೆ ಹೇಳುತ್ತಿಲ್ಲ. ಕೆಲವರಿಗೆ ಈ ಮೈತ್ರಿಯನ್ನು ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ಅವರು ದೂರಿದರು.

ಮೈತ್ರಿಯನ್ನು ಹಾಳು ಮಾಡಲು ಕೆಲವರು ಹೀಗೆ ಮಾಡುತ್ತಿರಬಹುದು. ನನ್ನ ಗಮನಕ್ಕೂ ಹಲವಾರು ವಿಚಾರಗಳು ಬರುತ್ತಿವೆ. ಯೋಗೇಶ್ವರ್ ಅವರು ಉಪ ಮುಖ್ಯಮಂತ್ರಿಯನ್ನು ಈಗಾಗಲೇ ಎರಡು ಬಾರಿ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ. ಅವರು ಏತಕ್ಕೆ ಭೇಟಿ ಮಾಡಿದ್ದರು ಎಂಬುದು ನನಗೆ ಬೇಕಿಲ್ಲ ಎಂಬ ಮಾಹಿತಿಯನ್ನು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಬಿಚ್ಚಿಟ್ಟರು.

ಬಿಜೆಪಿಯಲ್ಲಿ ಇರುವಂತಹ ಕೆಲವೇ ಕೆಲವರು ಕುಮಾರಸ್ವಾಮಿಗೆ ದೆಹಲಿ ಮಟ್ಟದಲ್ಲಿ ಉತ್ತಮ ಬಾಂಧವ್ಯ ಇದೆ. ಹೀಗಾಗಿ ಅವರಿಗೆ ಏನಾದರೂ ಸಮಸ್ಯೆ ಉದ್ಭವ ಮಾಡಬೇಕು ಎನ್ನುವ ಕಾರಣಕ್ಕೆ ಇಂತಹ ಪ್ರಕರಣಗಳನ್ನು ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ ಅಂತ ಕೆಲವರು ಮಾತಾಡಿಕೊಳ್ಳುತ್ತಿದ್ದಾರೆ. ಅದು ನನ್ನ ಕಿವಿಗೂ ಬಿದ್ದಿದೆ. ಬಿಜೆಪಿ - ಜೆಡಿಎಸ್ ಮೈತ್ರಿಗೆ ಹುಳಿ ಹಿಂಡುವವರು ಬಹಳಷ್ಟು ಜನ ಇದ್ದಾರೆ. ಒಟ್ಟಾರೆ ಕುಮಾರಸ್ವಾಮಿಯನ್ನು ಹಾಳು ಮಾಡಲು ಹೊರಟಿದ್ದಾರೆ. ಅವರ ಪ್ರಯತ್ನ ಫಲ ಕೊಡುವುದಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಹುಳಿ ಹಿಂಡುವವರು ನಮ್ಮ ಪಕ್ಷದಲ್ಲಿ ಇಲ್ಲ. ಆದರೆ ಅಲ್ಲಿನ ಹುಳಿ ಹಿಂಡುವವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡಿದ್ದಾರೆ. ಅದು ನನಗೆ ಗೊತ್ತಿದೆ. ಪ್ರಧಾನ ಮಂತ್ರಿ ಅವರನ್ನು ಅಸ್ಥಿರಗೊಳಿಸಲು ಅವರು ಕಾಂಗ್ರೆಸ್ ನಾಯಕರ ಜತೆ ಸೇರಿಕೊಂಡು ಮಸಲತ್ತು ಮಾಡುತ್ತಿರಬಹುದು. ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ಆಗಬಾರದು. ಇದೆಲ್ಲವನ್ನು ಗಮನಿಸುತ್ತಿದ್ದೇನೆ. ಇದಕ್ಕೆ ನಾನು ಅವಕಾಶ ಕೊಡಬೇಕಾ? ಎಂದು ಅವರು ಪ್ರಶ್ನಿಸಿದರು.

ಇಂತ ಕುತಂತ್ರಕ್ಕೆ ನಾನು ಯಾಕೆ ಬಲಿಯಾಗಬೇಕು? ನೋಡೋಣ, ಮುಂದೆ ಅಭ್ಯರ್ಥಿ ತೀರ್ಮಾನ‌ ಮಾಡುತ್ತೇವೆ. ನನಗೆ ಬೇಕಿರುವುದು ಪ್ರಧಾನಮಂತ್ರಿಯವರಿಗೆ ಶಕ್ತಿ ತುಂಬುವುದಷ್ಟೇ. ಆ ನಿಟ್ಟಿನಲ್ಲಿ ನಾನು ತೀರ್ಮಾನ ಮಾಡುತ್ತೇನೆ. ಆ ನಿಟ್ಟಿನಲ್ಲಿ ಚನ್ನಪಟ್ಟಣ ಸೀಟು ಗೆಲ್ಲಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಹುನ್ನಾರಕ್ಕೆ ಬಲಿ ಆಗುವುದಿಲ್ಲ.

ನಿಮ್ಮ ಕುಟುಂಬದಿಂದಲೇ ಯಾರಾದರೂ ಸ್ಪರ್ಧೆ ಮಾಡುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ಇಲ್ಲಿವರೆಗೂ ಎಲ್ಲೂ ನಮ್ಮ ಕುಟುಂಬದವರು ಸ್ಪರ್ಧೆ ಮಾಡುತ್ತಾರೆ ಎಂದು ನಾನು ಹೇಳಿಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ನಿಖಿಲ್ ಕುಮಾರಸ್ವಾಮಿ ನೂರು ಬಾರಿ ಹೇಳಿದ್ದಾರೆ. ಚುನಾವಣೆಯಲ್ಲಿ ನಿಲ್ಲಲ್ಲ.. ಇನ್ನು ಮೂರು ವರ್ಷ ಕಾಯುತ್ತೇನೆ ಎಂದು ಅವರು ಹೇಳಿದ್ದಾರೆ. ನಾನೇನಾದರೂ ಹೇಳಿದ್ದೀನಾ? ನಿಖಿಲ್ ಕುಮಾರಸ್ವಾಮಿ ನಿಲ್ಲುತ್ತಾರೆ ಎಂದು. ನಾನು ಹೇಳಿರುವುದು ಎನ್‌ಡಿಎ ಅಭ್ಯರ್ಥಿ ನಿಲ್ಲುತ್ತಾರೆ ಎಂದು. ಅದು ಬಿಜೆಪಿಯಿಂದ ಅಥವಾ ಜೆಡಿಎಸ್ ನಿಂದ ಆದರೂ ಆಗಬಹುದು ಅಂತ ಅಷ್ಟೇ ಎಂದರು.

ಅಭ್ಯರ್ಥಿ ನಿಲ್ಲಿಸಲೇಬೇಕಲ್ವಾ? ಪಲಾಯನ ಮಾಡೋಕಾಗುತ್ತಾ?ಯಾವುದೇ ಕಾರಣಕ್ಕೂ ಕಾಂಗ್ರೆಸ್ ಇಲ್ಲಿ ಲಾಭ ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಬಲಯುತವಾಗಿಲ್ಲ. ಆ ಪಕ್ಷಕ್ಕೆ ಅಲ್ಲಿ ಕಾರ್ಯಕರ್ತರ ಪಡೆಯೇ ಇಲ್ಲ. ಹಣದ ಮುಖಾಂತರ ಅಧಿಕಾರದ ದುರುಪಯೋಗದ ಮೂಲಕ ರಾಜಕಾರಣ ಮಾಡಬೇಕು ಅಷ್ಟೆ. ಕಳೆದ 25 ವರ್ಷಗಳಿಂದ ಚನ್ನಪಟ್ಟಣದಲ್ಲಿ ಕಾಂಗ್ರೆಸ್ 3ನೇ ಸ್ಥಾನದಲ್ಲಿದೆ. ಈಗ ಕಾಂಗ್ರೆಸ್ಸಿನ ಕುತಂತ್ರಕ್ಕೆ ಕೆಲವರು ಬಲಿಯಾಗಲು ಹೊರಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+