ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

25 ಲಕ್ಷ ಹಣ ಪತ್ತೆ : ಸಿದ್ದರಾಮಯ್ಯ ಭೇಟಿಯಾದ ಪುಟ್ಟರಂಗ ಶೆಟ್ಟಿ

|
Google Oneindia Kannada News

ಬೆಂಗಳೂರು, ಜನವರಿ 06 : ವಿಧಾನಸೌಧದಲ್ಲಿ 25 ಲಕ್ಷ ರೂ. ಹಣ ಪತ್ತೆ ಪ್ರಕರಣದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಸಚಿವ ಪುಟ್ಟರಂಗ ಶೆಟ್ಟಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಶನಿವಾರ ರಾತ್ರಿ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡಿದರು.

ಅಕ್ರಮ ಹಣ ಪತ್ತೆ ಪ್ರಕರಣ: ಸಚಿವರ ರಕ್ಷಣೆಗೆ ನಿಂತರಾ ಕೈ ಮುಖಂಡರು?ಅಕ್ರಮ ಹಣ ಪತ್ತೆ ಪ್ರಕರಣ: ಸಚಿವರ ರಕ್ಷಣೆಗೆ ನಿಂತರಾ ಕೈ ಮುಖಂಡರು?

ಒಂದು ಗಂಟೆಗಳ ಕಾಲ ಸಿದ್ದರಾಮಯ್ಯ ಅವರ ಜೊತೆ ಪುಟ್ಟರಂಗ ಶೆಟ್ಟಿ ಅವರು ಮಾತುಕತೆ ನಡೆಸಿದ್ದು, 'ಈ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ನನ್ನ ವಿರುದ್ಧ ಪಿತೂರಿ ನಡೆದಿದೆ' ಎಂದು ಹೇಳಿದರು.

ವಿಧಾನಸೌಧದಲ್ಲಿ 25.76ಲಕ್ಷ ಹಣ ಪತ್ತೆ, ವ್ಯಕ್ತಿ ವಶಕ್ಕೆವಿಧಾನಸೌಧದಲ್ಲಿ 25.76ಲಕ್ಷ ಹಣ ಪತ್ತೆ, ವ್ಯಕ್ತಿ ವಶಕ್ಕೆ

C Puttarangashetty meets Former CM Siddaramaiah

ಸಿದ್ದರಾಮಯ್ಯ ಸೂಚನೆಯಂತೆ ಪುಟ್ಟರಂಗ ಶೆಟ್ಟಿ ಅವರು ಭೇಟಿ ಮಾಡಿದ್ದರು. ಆಗ ಪುಟ್ಟರಂಗ ಶೆಟ್ಟಿ ಅವರ ವಿರುದ್ಧ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರು. ಇದರಿಂದಾಗಿ ಭೇಟಿ ಬಳಿಕ ಅವರು ಸಪ್ಪೆ ಮುಖ ಮಾಡಿಕೊಂಡು ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡದೆ ಅಲ್ಲಿಂದ ತೆರಳಿದರು.

ಶುಕ್ರವಾರ ಸಂಜೆ ಪುಟ್ಟರಂಗ ಶೆಟ್ಟಿ ಅವರ ಕಚೇರಿಯ ಟೈಪಿಸ್ಟ್ ಮೋಹನ್ ದಾಖಲೆ ಇಲ್ಲದ 25 ಲಕ್ಷ ಹಣವನ್ನು ತೆಗೆದುಕೊಂಡು ಹೋಗುವಾಗ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣವನ್ನು ಎಸಿಬಿಗೆ ವರ್ಗಾವಣೆ ಮಾಡಲಾಗಿದೆ.

ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಚಿವ ಪುಟ್ಟರಂಗ ಶೆಟ್ಟಿ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯ ಮಾಡುತ್ತಿದೆ. ಸಿದ್ದರಾಮಯ್ಯ ಅವರ ಆಪ್ತರಾದ ಪುಟ್ಟರಂಗ ಶೆಟ್ಟಿ ಅವರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲು ಬಿಜೆಪಿ ತೀರ್ಮಾನಿಸಿದೆ.

English summary
Karnataka minister for backward classes welfare C.Puttarangashetty met the Former Chief Minister Siddaramaiah after the alleged seizure of a large amount of cash from a clerk who worked in minister office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X