Government Employees: ಸರ್ಕಾರಿ ನೌಕರರ ವೇತನದ ಆದಾಯ ಪರಿಗಣಿಸಬೇಡಿ: ಸರ್ಕಾರಕ್ಕೆ ಸಿ.ಎಸ್ .ಷಡಾಕ್ಷರಿ ಪತ್ರ
ಬೆಂಗಳೂರು, ಡಿಸೆಂಬರ್ 13: ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧ ಕೆನೆಪದರ ವಾರ್ಷಿಕ ಆದಾಯ ಮಿತಿಯನ್ನು ರೂ. 8.00 ಲಕ್ಷಗಳಿಂದ ರೂ. 15.00 ಲಕ್ಷಗಳಿಗೆ ಹೆಚ್ಚಿಸುವುದು ಹಾಗೂ ಸರ್ಕಾರಿ ನೌಕರರ ಮಕ್ಕಳ ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಓ.ಬಿ.ಸಿ. ಮೀಸಲಾತಿ ಪ್ರಮಾಣ ಪತ್ರ ನೀಡುವಾಗ ವೇತನದ ಆದಾಯವನ್ನು ಪರಿಗಣಿಸದಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ .ಷಡಾಕ್ಷರಿ ಅವರು ಪತ್ರ ಬರೆದಿದ್ದಾರೆ.
ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿಗೆ ಸರ್ಕಾರಿ ನೌಕರರ ಒಟ್ಟು ವಾರ್ಷಿಕ ಆದಾಯದ ಲೆಕ್ಕಾಚಾರದಲ್ಲಿ ವೇತನದ ಆದಾಯವನ್ನು ಪರಿಗಣಿಸುತ್ತಿರುವುದರಿಂದ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಧಿಕಾರಿ, ನೌಕರರ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಒಬಿಸಿ ಆದಾಯ ಕೆನೆಪದರ ಮಿತಿಯನ್ನು 8 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಿಸಬೇಕು ಎಂದು ಸರ್ಕಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ .ಷಡಾಕ್ಷರಿ ಕೋರಿದ್ದಾರೆ.

ಸಾಮಾಜಿಕವಾಗಿ ಮುಂದುವರಿದ ವ್ಯಕ್ತಿಗಳು ಹಾಗೂ ವರ್ಗಗಳನ್ನು (ಕೆನೆಪದರ) ಹಿಂದುಳಿದ ವರ್ಗಗಳ ಮೀಸಲಾತಿಯಿಂದ ಹೊರತುಪಡಿಸಲು ಸರ್ಕಾರದ ಆದೇಶದನ್ವಯ ಕೆನೆಪದರ ನೀತಿಯ ವಾರ್ಷಿಕ ಆದಾಯದ ಮಿತಿಯನ್ನು 8 ಲಕ್ಷ ರೂ. ನಿಗದಿಪಡಿಸಿದೆ.
ರಾಜ್ಯ 7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದಿಂದಾಗಿ ಸರ್ಕಾರಿ ನೌಕರರ ವಾರ್ಷಿಕ ಆದಾಯ ಮಿತಿ ಹೆಚ್ಚಾಗಿರುವುದರಿಂದ, ರಾಜ್ಯ ಸರ್ಕಾರಿ ನೌಕರರು ತಮ್ಮ ಮಕ್ಕಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೆನೆಪದರ ನೀತಿಗೆ ಅನುಗುಣವಾಗಿ ಮೀಸಲಾತಿಯನ್ನು ಪಡೆಯಲು ಅನರ್ಹರಾಗುತ್ತಿರುವುದರಿಂದ ಕೆನೆಪದರ ಮಿತಿಯನ್ನು ಪರಿಷ್ಕರಿಸಿ ವಾರ್ಷಿಕ ಆದಾಯ ಮಿತಿಯನ್ನು 8 ಲಕ್ಷದಿಂದ 15 ಲಕ್ಷ ರೂ.ಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು.
ಭಾರತ ಸರ್ಕಾರವು ಹಿಂದುಳಿದ ವರ್ಗಗಳಿಗೆ ಕೆನೆಪದರ ನೀತಿಯನ್ನು ಅಳವಡಿಸುವ ಸಂಬಂಧ ಮಾರ್ಗಸೂಚಿ ಹೊರಡಿಸಿದ್ದು, ಆ ಮಾರ್ಗಸೂಚಿಯಂತೆ ರಾಷ್ಟ್ರದ ಬಹುತೇಕೆ ಎಲ್ಲಾ ರಾಜ್ಯಗಳು ಈಗಾಗಲೇ ಕೇಂದ್ರದ ಮಾರ್ಗಸೂಚಿಯಲ್ಲಿನ ನಿಯಮಗಳಿಗೆ ಯಾವುದೇ ಬದಲಾವಣೆ ಮಾಡಿಕೊಳ್ಳದೇ, ಯಥಾಸ್ಥಿತಿಯನ್ನು ಕಾಯ್ದುಕೊಂಡು ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಹಾಗೂ ಆಯಾ ರಾಜ್ಯಗಳ ಅಧೀನ ಇಲಾಖೆಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸರ್ಕಾರಿ ನೌಕರರ ವೇತನವನ್ನು ಕುಟುಂಬ ಆದಾಯಕ್ಕೆ ಪರಿಗಣಿಸದೆ ಮೀಸಲಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿವೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವು ತನ್ನ ಅಧೀನ ಸಂಸ್ಥೆಗಳಲ್ಲಿ ಶೈಕ್ಷಣಿಕ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಕೆನೆಪದರ ಮೀಸಲಾತಿಗೆ ಸಂಬಂಧಿಸಿದಂತೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡುವಾಗ ಸರ್ಕಾರಿ ನೌಕರರ ವೇತನ ಆದಾಯವನ್ನು ಪರಿಗಣಿಸಿ, ಕುಟುಂಬದ ಒಟ್ಟು ವಾರ್ಷಿಕ ಆದಾಯಕ್ಕೆ ಸೇರಿಸಿ ಸಂಪತ್ತಿನ ಲೆಕ್ಕಚಾರ ಮಾಡಿ ರೂ. 8 ಲಕ್ಷಕ್ಕೂ ಹೆಚ್ಚಿನ ಆದಾಯವಿರುವವರಿಗೆ ಮೀಸಲಾತಿ ನಮೂನೆ-ಎಫ್ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನ ಇಲಾಖೆಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಕೆಲವು ತಾಲ್ಲೂಕು ಕಚೇರಿಯಿಂದ ನಮೂನೆ-ಎಫ್ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತಿದೆ.
ಕರ್ನಾಟಕ ರಾಜ್ಯ ಸರ್ಕಾರದ ಅಧೀನ ಇಲಾಖೆಗಳಿಗೆ ಉದ್ಯೋಗ ಮತ್ತು ಶಿಕ್ಷಣಕ್ಕೆ ನೌಕರರು ಒಟ್ಟು ವಾರ್ಷಿಕ ಆದಾಯದ ಲೆಕ್ಕಾಚಾರದಲ್ಲಿ ಮಾತ್ರ ವೇತನದ ಆದಾಯವನ್ನು ಪರಿಗಣಿಸುತ್ತಿರುವುದರಿಂದ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಧಿಕಾರಿ, ನೌಕರರ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರು, ಕುಟುಂಬ ವರ್ಗದವರು ಮತ್ತು ಮಕ್ಕಳು ಶೈಕ್ಷಣಿಕ ಹಾಗೂ ಉದ್ಯೋಗ ಮತ್ತಿತರ ಮೀಸಲಾತಿ ಅವಕಾಶಗಳಿಂದ ವಂಚಿತರಾಗುತ್ತಿರುವುದಾಗಿ ರಾಜ್ಯ ಸರ್ಕಾರಿ ನೌಕರರು ಮತ್ತು ವಿವಿಧ ವೃಂದ ಸಂಘಗಳಿಂದ ರಾಜ್ಯ ಸಂಘಕ್ಕೆ ಮನವಿಗಳು ಸಲ್ಲಿಕೆಯಾಗಿರುತ್ತವೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications