C-Voter's Pre-Poll Survey: ಕರ್ನಾಟಕದಲ್ಲಿ ಮೈತ್ರಿ ಬಿಜೆಪಿ-ಜೆಡಿಎಸ್‌ಗೆ ಒಲಿದ ಅದೃಷ್ಟ? ಹಾಗಾದ್ರೆ ಕಾಂಗ್ರೆಸ್ ಎಷ್ಟು ಸ್ಥಾನ?
ಬೆಂಗಳೂರು, ಏಪ್ರಿಲ್ 16: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಸಮರ ಜೋರಾಗಿದೆ. ತೀವ್ರ ಪೈಪೋಟಿ ಕೊಡಲು ರಾಜಕೀಯ ಪಕ್ಷಗಳು ಸಜ್ಜಾಗಿವೆ. ಇತ್ತ ಚುನಾವಣೆ ಪೂರ್ವ ಸಿ-ವೋಟರ್ಸ್ ಸಮೀಕ್ಷೆ ಹೊರ ಬಿದ್ದಿದೆ. ಹಾಗಾದರೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಎಷ್ಟು ಸ್ಥಾನಗಳು ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ಗೆ ಎಷ್ಟು ಸ್ಥಾನಗಳು ಸಿಗಲಿವೆ? ಎಂಬ ಮಾಹಿತಿ ಇಲ್ಲಿದೆ.
ಸಿ-ವೋಟರ್ಸ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಾರ, ಈ ಭಾರಿ ಮತ್ತೊಮ್ಮೆ ಕಮಲ ಪಡೆಗೆ ಅದೃಷ್ಟ ಒಲಿದಿದೆ. ವಿಧಾನಸಭೆ ಚುನಾವನೆಯಲ್ಲಿ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಒಂದೆರಡು ಸ್ಥಾನಗಳು ಹೆಚ್ಚು ಸಿಗುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಜೆಡಿಎಸ್ ಕಡಿಮೆ ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಸಿ-ವೋಟರ್ಸ್ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 21 ಸ್ಥಾನಗಳು ಬಂದರೆ, ಮೈತ್ರಿಕೂಟದ ಪಾಲುದಾರ ಪಕ್ಷ ಜೆಡಿಎಸ್‌ಗೆ 2 ಹಾಗೂ ಆಡಳಿತ ಪಕ್ಷ ಕಾಂಗ್ರೆಸ್‌ಗೆ 5 ಸ್ಥಾನಗಳು ಬರಲಿವೆ ಎಂದು ಭವಿಷ್ಯ ನುಡಿದಿದೆ.
ಕರ್ನಾಟಕದಲ್ಲಿ ಮೋದಿ ಅಲೆ ಸಾಬೀತು
ಸದರಿ ಈ ಸಮಿಕ್ಷೆಯನ್ನು ಕರ್ನಾಟಕ ಬಿಜೆಪಿ ನಾಯಕರು ಸ್ವಾಗಿತಸಿದ್ದರೆ, ಕಾಂಗ್ರೆಸ್ ನಾಯಕರು ಈ ಸಮೀಕ್ಷೆಯನ್ನು ಒಪ್ಪದೇ ತಿರಸ್ಕರಿಸಿದ್ದಾರೆ. ಈ ಸಮೀಕ್ಷೆ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ ಎಂಬುದನ್ನು ಈ ಸಮೀಕ್ಷೆ ಸಾಬೀತುಪಡಿಸಿದೆ.
ಈ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿಯು ಕರ್ನಾಟಕದಲ್ಲಿ ನಮ್ಮ ಬಲವನ್ನು ಹೆಚ್ಚಿಸಿದೆ. ಈ ಮೂಲಕ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಅತ್ಯಧಿಕ ಸ್ಥಾನ ಮೈತ್ರಿ ಪಕ್ಷಗಳು ಗಳಿಸಲಿವೆ ಎಂದು ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಹಿರಿಯ ನಾಯಕರು ಬಿ.ಕೆ.ಹರಿಪ್ರಸಾದ್ ಅವರು, ಚುನಾವಣೆ ಪೂರ್ವ ಸಮೀಕ್ಷೆಗಳ ಬಗ್ಗೆ ನಾವು ಜಾಗರೂಕರಾಗಿರಬೇಕು. ಅನೇಕ ಸಂದರ್ಭಗಳಲ್ಲಿ ಅವರು ತಮ್ಮನ್ನು ನೇಮಿಸಿಕೊಳ್ಳುವ ಏಜೆನ್ಸಿಗೆ ಒಲವು ತೋರುತ್ತಾರೆ ಎಂದು ಮಾರ್ಮಿಕವಾಗಿ ಸಮೀಕ್ಷೆಗೆ ಪ್ರತಿಕ್ರಿಯಿಸಿದ್ದಾರೆ.
ಸಮೀಕ್ಷೆ ವಿಶ್ಲೇಷಿಸಿ ಸಲೀಂ ಅಹಮದ್?
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಈ ಸಮೀಕ್ಷೆಯನ್ನು ನಾವು ನಂಬುವುದಿಲ್ಲ. ಕಳೆದ 2023ರಲ್ಲಿ ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಸಿವೋಟರ್ ಸಮೀಕ್ಷೆಯ ಪ್ರಕಾರ ಬಿಜೆಪಿಗೆ 83-95 ಸ್ಥಾನ ಸಿಲಿವೆ ಎಂದು ಹೇಳಿತ್ತು. ಆದರೆ ಬಿಜೆಪಿಗೆ ಸಮೀಕ್ಷೆಯಂತೆ ಅಷ್ಟು ಸ್ಥಾನ ಬರಲಿಲ್ಲ. ಬಂದದ್ದು ಕೇವಲ 66 ಸ್ಥಾನಗಳು ಎಂದು ತಿಳಿಸಿದರು.
ಇದೇ ಸಿವೋಟರ್ ಸಮೀಕ್ಷೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 110-112 ಸೀಟುಗಳು ಬರಬಹುದು ಎಂದು ಹೇಳಲಾಗಿತ್ತು. ಆದರೆ ಅದನ್ನು ಮೀರಿ ನಾವು 135 ಸ್ಥಾನ ಪಡೆದುಕೊಂಡೆವು. ಹೀಗಾಗಿ ಈ ಭವಿಷ್ಯ ಕಳೆದ ಬಾರಿ ನಿಜವಾಗಿಲ್ಲ. ಈ ಬಾರಿಯು ಹೇಗೆ ನಂಬುವುದು? ಈ ಬಾರಿ ಈ ಭವಿಷ್ಯ ಸುಳ್ಳಾಗಲಿದೆ ಎಂದ ಅವರು, ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ ಅತ್ಯಧಿಕ 20 ಸ್ಥಾನ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications