ಎಸ್‌ಸಿ ಒಳಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ: ಯಾರಿಗೆ ಎಷ್ಟು ಮೀಸಲಾತಿ ಇಲ್ಲಿದೆ ವಿವರಗಳು
ಬೆಂಗಳೂರು, ಮಾರ್ಚ್. 25: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವು ಶುಕ್ರವಾರ 101 ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ನೀಡಲು ನಿರ್ಧರಿಸಿದೆ. ಈ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಬಿಜೆಪಿ ಸರ್ಕಾರವು ಎಲ್ಲಾ ಸಮುದಾಯಗಳನ್ನು ಸಮಾಧಾನ ಪಡಿಸಲು ಯತ್ನಿಸುತ್ತಿದೆ.
ಚುನಾವಣೆ ಸಮಯದಲ್ಲಿಯೇ ವಿವಾದಾತ್ಮಕ ವಿಷಯವಾದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಗೆ ಒಪ್ಪಿಗೆ ನೀಡಿದ್ದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಹೊಸ ಮೀಸಲಾತಿ ಸೂತ್ರದ ಪ್ರಕಾರ, ಮಾದಿಗ ಸಂಬಂಧಿತ ಜಾತಿಗಳಿಗೆ ಶೇ. 6, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.5.5, ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಶೇ. 4.5, ಇತರೆ ಅಲೆಮಾರಿ ಸಮುದಾಯಗಳಿಗೆ ಶೇ. 1 ಮೀಸಲಾತಿಯನ್ನು ಹಂಚಿಕೆ ಮಾಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.

ಒಳಮೀಸಲಾತಿ ಶಿಫಾರಸುಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ಎಲ್ಲಾ ಪರಿಶಿಷ್ಟ ಜಾತಿಗಳಿಗೆ ಅವರ ಜನಸಂಖ್ಯೆಯ ಆಧಾರದ ಮೇಲೆ ನ್ಯಾಯ ಒದಗಿಸಲು ಒಳ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಸಂವಿಧಾನದ 341 (2) ನೇ ವಿಧಿಯ ಅಡಿಯಲ್ಲಿ ವರ್ಗಗಳನ್ನು ಮಾಡಲಾಗಿದೆ ಎಂದಿದ್ದಾರೆ.
ಸರ್ಕಾರವು ಈಗಾಗಲೇ ಎಸ್‌ಸಿ ಕೋಟಾವನ್ನು 15% ರಿಂದ 17% ಕ್ಕೆ ಮತ್ತು ಎಸ್‌ಟಿ 3% ರಿಂದ 7% ಕ್ಕೆ ಹೆಚ್ಚಿಸಿದೆ. ಅದನ್ನು ಸಂವಿಧಾನದ 9 ನೇ ವಿಧಿಯಲ್ಲಿ ಸೇರಿಸಲು ಕೇಂದ್ರಕ್ಕೆ ಉಲ್ಲೇಖಿಸಲಾಗಿದೆ. ಜೊತೆಗೆ, ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಧ್ಯಯನ ಮಾಡಿದ್ದ ಸಚಿವ ಸಂಪುಟ ಉಪಸಮಿತಿ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತು ಮಾಡಿರುವ ಶಿಫಾರಸುಗಳನ್ನು ಅಂಗೀಕರಿಸಲು ಸಂಪುಟ ಸಭೆ ನಿರ್ಧರಿಸಿದೆ.

ಒಳಮೀಸಲಾತಿ ಕೋರಿ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. 101 ಎಸ್‌ಸಿ ಜಾತಿಗಳಲ್ಲಿ, ಬಂಜಾರ, ಕುರುಮ ಮತ್ತು ಭೋವಿಯಂತಹ ಕೆಲವು ಸಮುದಾಯಗಳನ್ನು ಎಸ್‌ಸಿ ಪಟ್ಟಿಯಿಂದ ತೆಗೆದುಹಾಕುವ ಆತಂಕವಿದೆ. ಆದರೆ ಅವರನ್ನು ಎಸ್‌ಸಿ ಕೋಟಾದಲ್ಲಿ ಮುಂದುವರಿಸಲಾಗುವುದು. ಮತ್ತೊಂದು ಕಾಡು ಕುರುಬರು, ಜೇನು ಕುರುಬರು ಮತ್ತು ಗೊಂಡ ಕುರುಬ ಜನಾಂಗದವರನ್ನು ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆಗೆ ಸಂಪುಟ ಒಪ್ಪಿಗೆ ನೀಡಿದೆ. ನಾವು ಮೈಸೂರು ವಿಶ್ವವಿದ್ಯಾನಿಲಯದಿಂದ ಈ ಸಮುದಾಯಗಳ ಕುರಿತು ಮಾನವಶಾಸ್ತ್ರೀಯ ಅಧ್ಯಯನ್ ವರದಿ ಕೇಳಿದ್ದೇವೆ ಎಂದು ಹೇಳಿದ್ದಾರೆ.
"ಎಲ್ಲಾ ವಿವರಗಳನ್ನು ನೀಡುವ ಮೂಲಕ ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಿನ ಕ್ರಮ ಕೈಗೊಳ್ಳಲು ನಾವು ಕಾನೂನು ಇಲಾಖೆಗೆ ಸಲಹೆ ನೀಡಿದ್ದೇವೆ. ಪರಿಶಿಷ್ಟ ಪಂಗಡದ ಅಡಿಯಲ್ಲಿ ಸೇರಿಸಲು ಕಾಡು ಗೊಲ್ಲರು ಮತ್ತು ಕೋಲಿ ಸಮಾಜದ ಹೆಚ್ಚಿನ ವಿವರಗಳನ್ನು ಕೇಂದ್ರ ಸರ್ಕಾರವೂ ಕೋರಿದೆ. ವಿವರಗಳನ್ನು ನೀಡಲು ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇನ್ನು, ಈ ಒಳಮೀಸಲಾತಿಯನ್ನು ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿ ಆಧರಿಸಿ ಜಾರಿ ಮಾಡಲಾಗುತ್ತಿದೆ. ಆದರೆ, ಎ.ಜೆ.ಸದಾಶಿವ ಆಯೋಗದ ವರದಿ ಸಾರ್ವಜನಿಕವಾಗಿ ಲಭ್ಯವಾಗಿಲ್ಲ, ಚರ್ಚೆಗೂ ಒಳಪಟ್ಟಿಲ್ಲ. ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ ಈ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿನ 101 ಸಮುದಾಯಗಳನ್ನು 4 ಗುಂಪುಗಳಾಗಿ ವರ್ಗೀಕರಿಸಲಾಗಿದೆ.
ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ.33.4ರಷ್ಟಿರುವ ಎಡಗೈ (ಮಾದಿಗ) ಸಮುದಾಯಕ್ಕೆ ಶೇ.6ರಷ್ಟು, ಶೇ.32 ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ.5 ರಷ್ಟು, ಶೇ.23.64ರ ಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ.3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ.1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ಸದ್ಯ ಸಂಪುಟ ಒಪ್ಪಿಗೆ ನೀಡಿರುವ ಪಟ್ಟಿಯೂ ಹೆಚ್ಚು ಕಡಿಮೆ ಇದೇ ರೀತಿಯಲ್ಲಿದೆ.
ಇನ್ನು, ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿಯಲ್ಲಿದ್ದ ಮುಸ್ಲಿಮರ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ಕರ್ನಾಟಕ ಸಂಪುಟ ಶುಕ್ರವಾರ ನಿರ್ಧರಿಸಿದೆ. ಈ 4 ಪ್ರತಿಶತ ಕೋಟಾವನ್ನು ಈಗ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತ ಸಮುದಾಯಗಳ ಪಾಲಾಗಲಿದೆ. ಚುನಾವಣೆಯಲ್ಲಿ ಈ ಎರಡು ಸಮುದಾಯಗಳು ಪ್ರಭಾವ ಬೀರಲಿವೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications