PDO : ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆಗೆ ಸಚಿವ ಸಂಪುಟದ ಒಪ್ಪಿಗೆ

ಬೆಂಗಳೂರು, ಜುಲೈ 04: ಗ್ರಾಮೀಣಾಭಿವೃದ್ಧಿ ಇಲಾಖೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷದಿಂದ ವರ್ಗಾವಣೆಗಳಿಗೆ ಅನ್ವಯಿಸುವಂತೆ ಕೌನ್ಸಿಲಿಂಗ್‌ ಪದ್ಧತಿಯನ್ನು ಜಾರಿಗೊಳಿಸಲಾಗುವುದು ಎಂದು 2024-25 ಆಯವ್ಯಯದಲ್ಲಿ ಘೋಷಿಸಲಾಗಿತ್ತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

Cabinet Approval For Transfer Of PDO Through Counselling

ಅದರಂತೆ, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಈ ವರ್ಷದಿಂದ ಕೌನ್ಸಿಲಿಂಗ್‌ ಮೂಲಕ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಸಂಬಂಧ ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆತಿಳಿಸಿದ್ದಾರೆ.

ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಬೆಂಬಲಿಸುವ ದೃಷ್ಟಿಯಿಂದ ಮುಖ್ಯಮಂತ್ರಿಯವರು ನಿರ್ದೇಶಿಸಿರುವಂತೆ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 27 ರನ್ವಯ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಗ್ರಾಮದ ಸ.ನಂ. 59/1 ರಲ್ಲಿ 0.14 ಎಕರೆ (14 ಸೆಂಟ್) ಜಮೀನನ್ನು ಕರ್ನಾಟಕ ಭೂ ಮಂಜೂರಾತಿ ನಿಯಮಗಳು 1969 ನಿಯಮ 22ಎ(1)(1)(4) ರಂತೆ ಪ್ರಸ್ತಾಪಿತ ಜಮೀನಿನ ಕೃಷಿಯೇತರ ಮಾರ್ಗಸೂಚಿ ಮೌಲ್ಯ ಹಾಗೂ ಇನ್ನಿತರ ಶಾಸನಬದ್ಧ ಶುಲ್ಕವನ್ನು ವಿಧಿಸಿ, ಬ್ರಹ್ಮಶ್ರೀ ಗುರುನಾರಾಯನ ಸ್ವಾಮಿ ಸೇವಾ ಸಂಘಕ್ಕೆ ಮಂಜೂರು ಮಾಡಲು; ಮತ್ತು ಮಾರ್ಗದರ್ಶಿ ಮೌಲ್ಯದ ಶೇ.10 ರಷ್ಟು ವಾರ್ಷಿಕ ಮೌಲ್ಯ ಆಕರಿಸಲು ನಿರ್ಧರಿಸಿದೆ.

ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ, ಬೆಂಗಳೂರು ಇವರಿಗೆ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿ ನೀಡಿರುವ 120*150 ಅಡಿ ನಿವೇಶನದ ಗುತ್ತಿಗೆ ಅವಧಿಯನ್ನು 30 ವರ್ಷಗಳ ಗುತ್ತಿಗೆ ಅವಧಿಯನ್ನು ದಿನಾಂಕ: 30.07.2023 ರಿಂದ ಪೂರ್ವಾನ್ವಯವಾಗುವಂತೆ ಮುಂದಿನ 30 ವರ್ಷಗಳಿಗೆ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, 1969ರ ನಿಯಮ 22ರ (1)(1)(6) ರನ್ವಯ ಸದರಿ ಜಮೀನಿನ ಕೃಷಿಯೇತರ ಮಾರ್ಗಸೂಚಿ ಮೌಲ್ಯದ ಶೇ.2.50 ರಷ್ಟು ವಾರ್ಷಿಕ ಗುತ್ತಿಗೆ ಮೊತ್ತ ಮತ್ತು ಇನ್ನಿತರೆ ಶಾಸನಬದ್ಧ ಶುಲ್ಕವನ್ನು ವಿಧಿಸಿ, ಈ ಗುತ್ತಿಗೆ ಮೊತ್ತವನ್ನು ಎರಡು ವರ್ಷಗಳಿಗೊಮ್ಮೆ ಶೇ.10 ರಷ್ಟು ಹೆಚ್ಚಿಸುವ ಷರತ್ತಿಗೊಳಪಟ್ಟು ಮುಂದುವರೆಸಲು ಹಾಗೂ ವಾರ್ಷಿಕ ರೂ.10,000/- ಗಳಂತೆ ಗುತ್ತಿಗೆ ಬಾಡಿಗೆಯನ್ನು ಹೆಚ್ಚಿಸಲು ಸಚಿವ ಸಂಪುಟ ಒಪ್ಪಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿಗಳು ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು, 2024 ಕರಡು ನಿಯಮಗಳನ್ನು ಪ್ರಕಟಿಸಿ ಬಾಧಿತರಾಗುವವರಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲು; ಹಾಗೂ ಕೌನ್ಸಲಿಂಗ್ ಮೂಲಕ ವರ್ಗಾವಣೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಬಿ.ಎಸ್-6 ಡೀಸೆಲ್ ಬಸ್ಸುಗಳನ್ನು ಒಟ್ಟು ರೂ.363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಸರಬರಾಜಾಗಿರುವ 20 ಬಸ್ಸುಗಳಿಗೆ ಪ್ರತಿ ಬಸ್‍ಗೆ ರೂ.41.72 ಲಕ್ಷಗಳಂತೆ ಒಟ್ಟು ರೂ.835.00 ಲಕ್ಷಗಳ ಪರಿಷ್ಕøತ ವೆಚ್ಚವನ್ನು ಭರಿಸಲು; 820 ಬಸ್ಸುಗಳನ್ನು ಪ್ರತಿ ಬಸ್‍ಗೆ ರೂ.43.35 ಲಕ್ಷಗಳಂತೆ ಒಟ್ಟು ರೂ.355.47 ಕೋಟಿಗಳ ವೆಚ್ಚದಲ್ಲಿ ಖರೀದಿಸಲು; ಸಚಿವ ಸಂಪುಟ ನಿರ್ಣಯಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+