ರಾಜ್ಯದ ಜನತೆಗೆ ಮತ್ತೊಂದು ಶಾಕ್ : ರಾಜ್ಯದ ಎಲ್ಲ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ಸರ್ಕಾರ ನಿರ್ಧಾರ.!

ಬೆಂಗಳೂರು, ಜುಲೈ 24: ರಾಜ್ಯದ ಎಲ್ಲಾ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. , ಅಗ್ನಿಶಾಮಕ ದಳದ ಕಾಯ್ದೆ ಅನ್ವಯವಾಗುವ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ನಿರ್ಧರಿಸಲಾಗಿದೆ. ರಾಜ್ಯದ ವಾಣಿಜ್ಯ ಕಟ್ಟಡ, ಆಸ್ಪತ್ರೆ, ಕಾಲೇಜು ಸೇರಿದಂತೆ ಎಲ್ಲಾ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಅವರು ಮಾತನಾಡಿ, ಔಷಧ ಖರೀದಿಗೆ ಅನುಮೋದನೆ: "2025-26ನೇ ಸಾಲಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಬೇಡಿಕೆಗಳಿಗನುಸಾರವಾಗಿ 890 ಔಷಧಗಳು, ಉಪಭೋಗ್ಯ ವಸ್ತುಗಳು ಹಾಗೂ ರಾಸಾಯನಿಕಗಳನ್ನು ರೂ.880.68 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೆಟಿಪಿಪಿ ಕಾಯ್ದೆ 1999 ಹಾಗೂ ಕೆಟಿಪಿಪಿ ನಿಯಮ 2000 ಗಳನ್ನು ಅನುಸರಿಸಿ ಟೆಂಡರ್ ಮೂಲಕ ಸಂಗ್ರಹಿಸಿ ಸರಬರಾಜು ಮಾಡಲು ಹಾಗೂ ಅಗತ್ಯ ವಿರುವ ಅನುದಾನವನ್ನು ಒದಗಿಸಲು ಸಚಿವ ಸಂಪುಟ ನಿರ್ಧರಿಸಿದೆ.

Cabinet Approves 1 Percent Cess On All Multi Storey High Rise Buildings In The Karnataka

ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ನಮೂದಿಸಿರುವ 46 ಜೀವಾವಧಿ ಶಿಕ್ಷಾ ಬಂದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಳಿಸಲು ಹಾಗೂ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 03 ಶಿಕ್ಷಾ ಬಂದಿಗಳನ್ನು ಕೇಂದ್ರ ಗೃಹ ಮಂತ್ರಾಲಯದ ಸಹಮತಿ ದೊರಕಿದ ನಂತರ ಭಾರತ ಸಂವಿಧಾನದ ಅನುಚ್ಛೇದ-161ರ ಪ್ರಕಾರ ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಳಿಸಲು; ಸಚಿವ ಸಂಪುಟ ನಿರ್ಣಯಿಸಿದೆ.

ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮೊದಲು Karnataka Fire Force Act, 1964ರ ಕಲಂ 15ಕ್ಕೆ ತಿದ್ದುಪಡಿ ತಂದು ನಂತರ ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1ರ ದರದಲ್ಲಿ Fire Cess ಅನ್ನು ವಿಧಿಸಲು ಕ್ರಮವಹಿಸಲು ಪ್ರಸ್ತಾಪಿಸಲಾಗಿದೆ. ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿಧೇಯಕ-2025 (Earlier Ordinance Dated: 30.05.2025) ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು; ಸಚಿವ ಸಂಪುಟವು ನಿರ್ಣಯಿಸಿದೆ.

ಮೆ|| ಸಂಕೇತ್ ಟ್ರಸ್ಟ್ ರವರ ಪರವಾಗಿ "Establishing Theatre for performing Arts" ಉದ್ದೇಶಕ್ಕಾಗಿ ಹಂಚಿಕೆ ಮಾಡಿರುವ ಜೆ.ಪಿ ನಗರ 2ನೇ ಹಂತದ ಬಡಾವಣೆಯಲ್ಲಿನ 1354.50 ಚ.ಮೀ ವಿಸ್ತೀರ್ಣದ ನಾಗರೀಕ ಸೌಲಭ್ಯ ನಿವೇಶನ ಸಂಖ್ಯೆ: 36/2ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸಿರುವ ಒಟ್ಟಾರೆ ಗುತ್ತಿಗೆ ಮೌಲ್ಯ / ವರ್ಷಾಸನದ ಶೇ.25 ರಷ್ಟು ಮೊತ್ತವನ್ನು ಮತ್ತು ಅದಕ್ಕೆ ಅನ್ವಯಿಸುವ ಜಿ.ಎಸ್.ಟಿ ಅನ್ನು ಗುತ್ತಿಗೆ ಮೌಲ್ಯವಾಗಿ ಪಾವತಿಸಿಕೊಂಡು ಗುತ್ತಿಗೆ ನವೀಕರಿಸಲು ಅನುಮತಿ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-3, 4, 9, 349, 350, 351 ಮತ್ತು 355 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಲ್ಲೀಪುರ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸಿ 'ಅಲ್ಲೀಪುರ ಪಟ್ಟಣ ಪಂಚಾಯಿತಿ' ಪ್ರದೇಶವೆಂದು ಉದ್ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೂಳೆಕೆರೆಯ ಜೀರ್ಣೋದ್ಧಾರ ಕಾಮಗಾರಿಯನ್ನು ರೂ.34.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕು ಮದಗ-ಮಾಸೂರು ಕೆರೆಯ ಎಡದಂಡೆ ಹಾಗೂ ಬಲದಂಡೆ ಮುಖ್ಯ ನಾಲೆಗಳ ಆಧುನೀಕರಣ ಕಾಮಗಾರಿಯನ್ನು ರೂ.52.20 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ. ಮೈಸೂರು ಜಿಲ್ಲೆ, ಟಿ.ನರಸೀಪುರ ತಾಲ್ಲೂಕಿನ ನಂಜಾಪುರ ಏತ ನೀರಾವರಿ ಯೋಜನೆಯ ಆಧುನೀಕರಣ ಕಾಮಗಾರಿಗಳ ರೂ.20.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೂಳೆಕೆರೆಯ ಉತ್ತರ ನಾಲೆಗಳ ಅಭಿವೃದ್ಧಿ ಕಾಮಗಾರಿಯನ್ನು ರೂ.47.75 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ. ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025"ಕ್ಕೆ ಅನುಮೋದನೆ; ಮತ್ತು ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ನಿರ್ಧರಿಸಿದೆ .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+