ಮೆಟ್ರೋ ವಿಸ್ತರಣೆ, ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು; ಜಮೀನು ಖರೀದಿಸಲು ರೂ.65.00 ಕೋಟಿ

ಬೆಂಗಳೂರು, ಸೆಪ್ಟೆಂಬರ್‌05: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮೆಟ್ರೋ ವಿಸ್ತರಣೆ ವಿಮಾ ಯೋಜನೆಗಳ ಲಾಭಾಂಶ ಘೋಷಣೆಯಿಂದ ಹಿಡಿದು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಮತ್ತು ಚುನಾವಣಾ ಸುಧಾರಣೆಗಳವರೆಗೆ ಹಲವು ವಿಷಯಗಳಿಗೆ ನಿರ್ಣಯ ಕೈಗೊಳ್ಳಲಾಯಿತು.

ಈ ಕುರಿತು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಅವರು ಮಾತನಾಡಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಮೊದಲನೇ ಹಂತದಲ್ಲಿ ಕರ್ನಾಟಕ ಗೃಹ ಮಂಡಳಿಯಿAದ ರೂ.65.00 ಕೋಟಿಗಳ ವೆಚ್ಚದಲ್ಲಿ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

Cabinet approves construction of new medical college in Kanakapura

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ತರಗತಿ 1 ರಿಂದ 10 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್, ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ ಈ ಸಂಸ್ಥೆಯ ವತಿಯಿಂದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿರುವ ಕಾರ್ಯಕ್ರಮವನ್ನು ವಾರದ ಮೂರು ದಿನಗಳ ಬದಲಾಗಿ ಐದು ದಿನಗಳಿಗೆ ವಿಸ್ತರಿಸಿ, ಸದರಿ ಯೋಜನೆಯ ಶೇಕಡಾ 25 ರಷ್ಟು ವೆಚ್ಚವನ್ನು ಅಂದರೆ ರೂ.27.02 ಕೋಟಿಗಳನ್ನು (ಸಾಗಾಣಿಕಾ ವೆಚ್ಚ ರೂ.6.49 ಕೋಟಿಗಳು ಸೇರಿ) ರಾಜ್ಯ ಸರ್ಕಾರದಿಂದ ಭರಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ಹೊಸದಾಗಿ 06 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ಮಾಣ ಕಾಮಗಾರಿ ಹಾಗೂ 07 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯ ರೂ.956.67 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕೆಂಗೇರಿಯ 60 ಎಂ.ಎಲ್.ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು 80 ಎಂ.ಎಲ್.ಡಿ ಸಾಮರ್ಥ್ಯಕ್ಕೆ ಉನ್ನತೀಕರಿಸಲು ಎಲೆಕ್ಟೊçÃಮೆಕಾನಿಕಲ್ ಉಪಕರಣಗಳನ್ನು ರೂ.28.88 ಕೋಟಿಗಳ ಅಂದಾಜು ಮೊತ್ತದಲ್ಲಿ ಅಳವಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಳಗೊಂಡನಹಳ್ಳಿ, ಕುರುಬರಹಳ್ಳಿ, ಅಣ್ಣಿಗೆರೆ ಮತ್ತು ವೈ.ಮಲ್ಲಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಕಾಮಗಾರಿಗಳಿಗೆ ಅಗತ್ಯವಿರುವ ಸುಮಾರು 221 ಎಕರೆ 01.12 ಗುಂಟೆ ಜಮೀನನ್ನು ರೂ.77.35 ಕೋಟಿಗಳ ಮೊತ್ತದಲ್ಲಿ ನೇರ ಖರೀದಿಯ ಮೂಲಕ ಸ್ವಾಧೀನಪಡಿಸಿಕೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ.

ನಗರಾಭಿವೃದ್ಧಿ ಇಲಾಖೆ (ಬಿಬಿಎಂಪಿ)ಯಡಿ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರ ಜೆ.ಪಿ ನಗರ 4ನೇ ಹಂತದಿAದ ಹೆಬ್ಬಾಳದವರೆಗೆ (ಓಆರ್ಆರ್ ಪಶ್ಚಿಮ) ಹಾಗೂ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ ಎರಡು ಕಾರಿಡಾರ್ಗಳಲ್ಲಿ 37.121 ಕಿ.ಮೀ.ಗಳ ಉದ್ದದ ಡಬಲ್ ಡೆಕ್ಕರ್ ನಿರ್ಮಾಣದಲ್ಲಿ, ಮೆಟ್ರೋ ವಯಾಡಕ್ಟ್ ಜೊತೆಗೆ ಎಲಿವೇಟೆಡ್ ರಸ್ತೆಯನ್ನು ರೂ.9700.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರವು 2025-26 ನೇ ಸಾಲಿನ ಬಜೆಟ್ನಲ್ಲಿ ಒದಗಿಸಲಾದ ರೂ. 4000.00 ಕೋಟಿಗಳ ಬಜೆಟ್ ಅನುದಾನದ ಮೂಲಕ ಯೋಜನೆಯ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಮತ್ತು ಭವಿಷ್ಯದಲ್ಲಿ ಇದೇ ರೀತಿಯ ಅನುದಾನಗಳನ್ನು ನಿರೀಕ್ಷಿಸಲಾಗುತ್ತದೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ 107 ಕೆರೆಗಳಿಗೆ ಬೇಡ್ತಿ ನದಿಯಿಂದ ನೀರನ್ನು ಎತ್ತಿ ತುಂಬಿಸುವ ಯೋಜನೆಯನ್ನು ರೂ.179.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ. ವಿಜಯಪುರ ಜಿಲ್ಲೆಯ ಸಿಂಧಗಿ ಪುರಸಭೆಯಿಂದ ನಗರಸಭೆಯನ್ನು ರಚಿಸಿ "ಸಿಂಧಗಿ ನಗರಸಭೆ" ಪ್ರದೇಶವೆಂದು ಉದ್ಘೋಷಿಸಲು" ಸಚಿವ ಸಂಪುಟ ನಿರ್ಣಯಿಸಿದೆ. ಬೆಳಗಾವಿ ಜಿಲ್ಲೆಯ ಹಾಲಿ ಸವದತ್ತಿ ಯಲ್ಲಮ್ಮಾ ಪುರಸಭೆಯಿಂದ ನಗರಸಭೆಯನ್ನು ರಚಿಸಿ "ಸವದತ್ತಿ ಯಲ್ಲಮ್ಮ ನಗರಸಭೆ" ಪ್ರದೇಶವೆಂದು ಉದ್ಘೋಷಿಸಲು" ಸಚಿವ ಸಂಪುಟ ನಿರ್ಣಯಿಸಿದೆ. ಬೀದರ್ ಜಿಲ್ಲೆಯ ಹಾಲಿ ಹುಮನಾಬಾದ್ ಪುರಸಭೆಯಿಂದ ನಗರಸಭೆಯನ್ನು ರಚಿಸಿ "ಹುಮನಾಬಾದ್ ನಗರಸಭೆ" ಪ್ರದೇಶವೆಂದು ಉದ್ಘೋಷಿಸಲು" ಸಚಿವ ಸಂಪುಟ ನಿರ್ಣಯಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+