ಶಾಲಾ ಮಕ್ಕಳಿಗೆ 'ಶೂ ಭಾಗ್ಯ', ಸಂಪುಟದ ಒಪ್ಪಿಗೆ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 29 : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಕ್ಕಳಿಗೆ ಶೂ ವಿತರಣೆ ಮಾಡುವ 'ಶೂ ಭಾಗ್ಯ' ಯೋಜನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಯೋಜನೆಗೆ 120 ಕೋಟಿ ರೂ. ಬಿಡುಗಡೆ ಮಾಡಲು ಸಭೆಯಲ್ಲಿ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 'ಶೂ ಭಾಗ್ಯ' ಯೋಜನೆಗೆ ಒಪ್ಪಿಗೆ ಸಿಕ್ಕಿದೆ. ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ 2016ರ ಜೂನ್‌ನಲ್ಲಿ ಶಾಲೆಗಳು ಆರಂಭವಾಗುತ್ತಿದ್ದಂತೆ ಶೂಗಳ ವಿತರಣೆಯಾಗಲಿದೆ. [ಸಿದ್ದರಾಮಯ್ಯ ಸರಕಾರದ 10 ಜನಪ್ರಿಯ ಯೋಜನೆಗಳು]

siddaramaiah

2015-16ನೇ ಸಾಲಿನ ಬಜೆಟ್ ಮಂಡನೆ ಮಾಡಿದ, ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಶೂ ಭಾಗ್ಯ' ಯೋಜನೆಯನ್ನು ಘೋಷಣೆ ಮಾಡಿದ್ದರು. ಆದರೆ, ಈ ಶೈಕ್ಷಣಿಕ ವರ್ಷ ಯೋಜನೆ ಅನುಷ್ಠಾನಗೊಂಡಿರಲಿಲ್ಲ. [2015-16ನೇ ಬಜೆಟ್ ಮುಖ್ಯಾಂಶಗಳು]

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಒಪ್ಪಿಗೆ ಸಿಕ್ಕಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಜನೆ ಜಾರಿಯಾಗಲಿದೆ. ಶಾಲಾ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಈ ಯೋಜನೆಯ ಉಸ್ತುವಾರಿ ನೋಡಿಕೊಳ್ಳಲಿದೆ. [ಒಣಗುವ ಬೆಳೆಗಳಿಗೆ ಕಾಯಕಲ್ಪ ಕಲ್ಪಿಸಿದ ಕೃಷಿ ಭಾಗ್ಯ]

ಶೂಗಳಿಗೆ ಎಷ್ಟು ಅನುದಾನ? : ಶೂ ಭಾಗ್ಯ ಯೋಜನೆಗೆ 120 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. 1 ರಿಂದ 5ನೇ ತರಗತಿ ಮಕ್ಕಳಿಗೆ ಒಂದು ಜೊತೆ ಶೂಗೆ 225 ರೂ., 6 ರಿಂದ 8ನೇ ತರಗತಿ ಮಕ್ಕಳಿಗೆ 250 ರೂ., 9 ಮತ್ತು 10ನೇ ತರಗತಿ ಮಕ್ಕಳಿಗೆ ಒಂದು ಜೊತೆ ಶೂಗೆ 275 ರೂ. ನಿಗದಿ ಪಡಿಸಲಾಗಿದೆ.

ಒಂದು ಜೊತೆ ಶೂ, ಕಾಲು ಚೀಲ : ಶೂ ಭಾಗ್ಯ ಯೋಜನೆಯ ಅನ್ವಯ ಶಾಲಾ ಮಕ್ಕಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಲಾಗುತ್ತದೆ. ಈ ಯೋಜನೆಯ ಹಣವನ್ನು ನೇರವಾಗಿ ಎಸ್‌ಡಿಎಂಸಿಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಸ್ಥಳೀಯವಾಗಿ ಅವರು ಟೆಂಡರ್ ಕರೆದು ಮಕ್ಕಳಿಗೆ ಶೂಗಳನ್ನು ವಿತರಣೆ ಮಾಡಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Cabinet meeting chaired by Karnataka Chief Minister Siddaramaiah has decided to provide a pair of shoes and two pairs of socks by June, 2016. Children studying in government schools will get shoes and socks under shoes bhagya scheme. The school development monitoring committees will be given the responsibility of distributing shoes and socks.
Please Wait while comments are loading...