ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್; 5 ವರ್ಷ ವಯೋಮಿತಿ ಸಡಿಲಿಕೆ: ಸಚಿವ ಸಂಪುಟ ಅಸ್ತು!
ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳಿಂದ ಹಲವು ಇಲಾಖೆಯಲ್ಲಿ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಕಳೆದ ಅಧಿವೇಶನದಲ್ಲೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಶೀಘ್ರದಲ್ಲೇ ಹಂತ ಹಂತವಾಗಿ ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ರು.ಇದೀಗ ಸರ್ಕಾರ ಹುದ್ದೆ ಆಕಾಂಕ್ಷಿಗಳಿಗೆ 5 ವರ್ಷವಯೋಮಿತಿಯನ್ನ ಸಡಿಲಿಗೆ ಮಾಡುವ ಮೂಲಕ ಭರ್ಕರಿ ಶುಭ ಸುದ್ದಿ ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಣಯಗಳ ಬಗ್ಗೆ ಚರ್ಚೆ ನಡೆದಿವೆ. ಈ ವೇಳೆ ಕರ್ನಾಟಕದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳೀಗೆ 2027 ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷ ಸಡಿಲಿಕೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇನ್ನೂ ವಯೋಮಿತಿ ಸಡಿಲಿಕೆ ಮಾಡಿರುವುದರಿಂದ ಉದ್ಯೋಗದ ನಿರೀಕ್ಷೆಯಲ್ಲಿರುವ ಲಕ್ಷಾಂತರ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಇಲ್ಲಿಯವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇದ್ದರೆ, SC, ST ಅಭ್ಯರ್ಥಿಗಳಿಗೆ 38 ವರ್ಷ ನಿಗದಿಪಡಿಸಲಾಗಿತ್ತು. ಆದರೀಗ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಆಗಲಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಈ ನಿಯಮ ಅನ್ವಯವಾಗಲಿದೆ.
ರಾಜ್ಯದಲ್ಲಿ ಹಲವು ಕಾರಣಗಳಿಂದಾಗಿ ಒಳ ಮೀಸಲಾತಿಯನ್ನ ಎರಡು ವರ್ಷಗಳಿಂದ ನೇಮಕಾತಿ ವಿಳಂಬವಾಗಿತ್ತು. ಹೀಗಾಗಿ ಉದ್ಯೋಗಾಕಾಂಕ್ಷಿಗಳು ತೀವ್ರ ಹೋರಾಟವನ್ನ ನಡೆಸಿ ವಯೋಮಿತಿಯನ್ನು ಐದು ವರ್ಷಗಳ ಕಾಲ ಸಡಿಲಿಕೆ ಮಾಡುವಂತೆ ರಾಜ್ಯ ಸರ್ಕಾರವನ್ನ ಒತ್ತಾಯಿಸಿದ್ದರು. ಕಳೆದ ಸೆಪ್ಟೆಂಬರ್ 6 ರಂದು ಎರಡು ವರ್ಷ ಒಳ ಮೀಸಲಾತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು, ಇದಕ್ಕೂ ತೀವ್ರ ವಿರೋಧಗಳು ಕೇಳಿ ಬಂದಿದ್ವು, ಇದೀಗ ಸಿವಿಲ್ ಸೇವೆಗಳಿಗೆ ನೇರ ನೇಮಕಾತಿ ಹಾಗೂ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಐದು ವರ್ಷ ಸಡಿಲಿಕೆ ಮಾಡಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವನ್ನ ತೆಗೆದುಕೊಳ್ಳಲಾಗಿದೆ.
ಇನ್ನೂ ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ. 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಸೌಕರ್ಯ ಒಳಗೊಂಡಂತೆ ನಿರ್ಮಿಸಲು 100 ಕೋಟಿ ಮೊತ್ತದಲ್ಲಿ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ದಲಿತ, ಹಿಂದುಳಿದ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ. ಇನ್ನೂ ರಾಜ್ಯದ 08 ಜಿಲ್ಲೆಗಳಲ್ಲಿ ಪೌಷ್ಠಿಕ ಆಹಾರ ಯೋಜನೆಯಡಿ ಒಟ್ಟು 50,046 ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ರೂ. 145.03 ಕೋಟಿಗಳ ಅಂದಾಜು ಮೊತ್ತದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಿ ಮುಂದಿನ 12 ತಿಂಗಳವರೆಗೆ ವಿತರಿಸಲು ಸಂಪುಟ ಅನುಮೋದನೆ ನೀಡಿದೆ.












Click it and Unblock the Notifications