ವಿಜಯನಗರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅಸ್ತು; ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ
ಮಾರ್ಗಸೂಚಿ ದರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆಗೆ 82 ಎಕರೆ ಜಮೀನು ಮಂಜೂರು ಮಾಡಲಾಗುವುದು.
ಬೆಂಗಳೂರು, ಮಾರ್ಚ್ 09: ಬುಧವಾರ ಮಾರ್ಚ್ 8 ರಂದು ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ಒಂದು ಹೊಸ ಜಿಲ್ಲೆ ವಿಜಯನಗರದಲ್ಲಿ 454 ಕೋಟಿ ರೂಪಾಯಿ ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದು.
ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ 454 ಕೋಟಿ ರೂಪಾಯಿ ವೆಚ್ಚದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಲಾಗುತ್ತದೆ. ಮಾರ್ಗಸೂಚಿ ದರದಲ್ಲಿ ಕಾರ್ಖಾನೆಗೆ 82 ಎಕರೆ ಜಮೀನು ಮಂಜೂರು ಮಾಡಲಾಗುವುದು. ಕಾರ್ಖಾನೆ ಸ್ಥಾಪನೆಯಿಂದ ಎರಡು ಸಾವಿರ ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

*ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಇಲ್ಲಿವೆ*
1. ರಾಯಚೂರು ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ 7 219 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.
2. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಜಂಬುನಾಥನಹಳ್ಳಿ ಗ್ರಾಮದ 84.86 ಎಕರೆ ಜಮೀನನ್ನು ಹಂಪಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಗೆ ಏಥೆನಾಲ್ ಕಾರ್ಖಾನೆ ಸ್ಥಾಪಿಸಲು ಮಂಜೂರು.
3. ಘಟಪ್ರಭಾ ನದಿಯ ಹರಿವಿನ ಉದ್ದಕ್ಕೂ ಪ್ರವಾಹ ನಿರ್ವಹಣೆ ಮತ್ತು ಪ್ರವಾಹದಿಂದ ಹಳ್ಳಿಗಳನ್ನು ಮತ್ತು ಗೋಕಾಕ್ ಪಟ್ಟಣವನ್ನು ರಕ್ಷಿಸುವ ಹಾಗೂ ಇತರ ಕಾಮಗಾರಿಗಳ ಒಟ್ಟು 685 ಕೋಟಿ ವೆಚ್ಚದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ.
4. ಹಾವೇರಿ ಜಿಲ್ಲೆ, ಹಾವೇರಿ ತಾಲ್ಲೂಕಿನ ದೇವಗಿರಿ ಗ್ರಾಮದ ಸ.ನಂ 140 ರಲ್ಲಿ, 10 ಎಕರೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ರಾಷ್ಟೋತ್ಥಾನ ಪರಿಷತ್ ಗೆ ಮಂಜೂರು ಮಾಡಲು ತೀರ್ಮಾನ.

5. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನಲ್ಲಿ ಕೆ 12.87 ಕೋಟಿ ವೆಚ್ಚದಲ್ಲಿ ಆಡಳಿತ ಸೌಧ ಕಟ್ಟಡ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
6. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಇತರ 37 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು # 49 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.
7. ಕರ್ನಾಟಕ ರೇಷ್ಮೆ ಸೇವೆಗಳು (ನೇಮಕಾತಿ) ನಿಯಮಗಳು, 2023ಕ್ಕೆ ಅನುಮೋದನೆ.
8. ಕಲ್ಬುರ್ಗಿ ಜಿಲ್ಲೆಯ ಕಲ್ಬುರ್ಗಿ ತಾಲ್ಲೂಕಿನ ಜಾಫರಬಾದ್ ನಲ್ಲಿ ಹೈ ಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು * 15 ಕೋಟಿ ವೆಚ್ಚದಲ್ಲಿ ನಿರ್ಮಿಸಲು, ಆಡಳಿತಾತ್ಮಕ ಅನುಮೋದನೆ
9. ಹಾವೇರಿ ಜಿಲ್ಲೆ, ರಾಣೆಬೆನ್ನೂರು ತಾಲ್ಲೂಕಿನ ಕೊನಬೇವು ಗ್ರಾಮದಲ್ಲಿ, * 15 ಕೋಟಿ ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ
10. ತುಂಗಾ ಮೇಲ್ದಂಡೆ ಯೋಜನೆಯ 3395.2 ಕೋಟಿಗಳ ಪರಿಷ್ಕೃತ ವಿವರವಾದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ.
11. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದ ಸ.ನಂ 89ರ 10 ಎಕರೆ 33 ಗುಂಟೆ ಜಮೀನನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಜನಸೇವಾ ಟ್ರಸ್ಟ್ ಗೆ ಮಂಜೂರು ಮಾಡಲು ತೀರ್ಮಾನ.
12. ಹಾರಂಗಿ ಜಲಾಶಯದ ಎಡದಂಡೆಯ ರೀಮಾಡೆಲಿಂಗ್ ಕಾಮಗಾರಿಯ ಒಟ್ಟು 49.75 ಕೋಟಿ ವೆಚ್ಚದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ.
13. ರಾಜ್ಯದ ಗಣಿಭಾದಿತ ಪ್ರದೇಶಗಳಲ್ಲಿ ಸಮಗ್ರ ಗಣಿ ಪರಿಸರ ಪುನಶ್ವೇತನ ಯೋಜನೆಯಡಿಯಲ್ಲಿ ನೇರ ಇಲಾಖೆಗಳಿಂದ ಆಡಳಿತಾತ್ಮಕ ಅನುಮೋದನೆ ಕೋರಿ ಸ್ವೀಕೃತವಾಗುವ ಪ್ರಸ್ತಾವನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಅಧಿಕಾರವನ್ನು ಕರ್ನಾಟಕ ಗಣಿ ಪರಿಸರ ಪುನಶ್ವೇತನ ನಿಗಮಕ್ಕೆ ಪ್ರತ್ಯಾಯೋಜಿಸಲು ತೀರ್ಮಾನ.
14. ರಾಜ್ಯ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಿ ದಿನಾ೦ಕ 01-03-2023 ರಂದು ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.
15. ಮಂಗಳೂರಿನ ಕುಳಾಯಿಯಲ್ಲಿರುವ ಮೀನು ಸಂಸ್ಕರಣಾ ಸ್ಥಾವರವನ್ನು 125 ಕೋಟಿ ವೆಚ್ಚದಲ್ಲಿ ಮೆರೈನ್ ಎಕ್ಸ್ ಪೋರ್ಟ್ ಆಗಿ ಉನ್ನತೀಕರಿಸಲು ಆಡಳಿತಾತ್ಮಕ ಅನುಮೋದನೆ.
16. ಗಿಣಿಗೇರಾ-ರಾಯಚೂರು, ತುಮಕೂರು-ರಾಯದುರ್ಗ, ಬಾಗಲಕೋಟೆ-ಕುಡಚಿ, ಚಿಕ್ಕಮಗಳೂರು-ಬೇಲೂರು ಮಾರ್ಗದ ರೈಲು ಯೋಜನೆಗಳ ರಾಜ್ಯದ ಪಾಲಿನ ಪರಿಷ್ಕೃತ ಅಂದಾಜು ಮೊತ್ತ 964.41 ಕೋಟಿಗೆ ಆಡಳಿತಾತ್ಮಕ ಅನುಮೋದನೆ
17. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ 14 ಗ್ರಾಮಗಳ ಸುಮಾರು 8390 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು + 567 ಕೋಟಿ ಮೊತ್ತದ ಕರಗಾಂವ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
18. ಭದ್ರಾ ಜಲಾಶಯದ ಬಿ.ಆರ್.ಪ್ರಾಜೆಕ್ಟ್ ಮೀನುಮರಿ ಉತ್ಪಾದನಾ ಕೇಂದ್ರ ಮತ್ತು ಶಿವಮೊಗ್ಗ ತಾಲ್ಲೂಕಿನ ಗಾಜನೂರು ಮೀನುಮರಿ ಉತ್ಪಾದನಾ ಕೇಂದ್ರವನ್ನು + 26.65 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಹಾಗೂ ಆಲಮಟ್ಟಿ ಜಲಾಶಯದ ಬಳಿ ಮೀನುಮರಿ ಉತ್ಪಾದನಾ ಕೇಂದ್ರವನ್ನು 13.04 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.
19. ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು, 2023ಕ್ಕೆ ಅನುಮೋದನೆ.
20. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಾಕಿ ಉಳಿಸಿಕೊಂಡಿರುವ ಮೋಟಾರು ವಾಹನ ತೆರಿಗೆ ಮೊತ್ತ ಒಟ್ಟು 166.99 ಕೋಟಿಯನ್ನು ಪಾವತಿಸದಂತೆ ವಿನಾಯಿತಿ ನೀಡಲು ತೀರ್ಮಾನ.
21. ಬೆಂಗಳೂರು ಜಲಮಂಡಳಿಯ ಶಿವ ಅಣೆಕಟ್ಟೆಯಿಂದ ಶಿವ ಸಮತೋಲನ ಜಲಾಶಯದವರೆಗಿನ 2.5 ಕಿ.ಮೀ ಉದ್ದದ ಕಚ್ಚಾ ನೀರು ಸರಬರಾಜು ತಯಾರಿಕೆ ಮತ್ತು ಜೋಡಿಸಲ್ಪಡುವ ಕಾಮಗಾರಿಯ 93.05 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.
22. ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನಲ್ಲಿ, ಒಟ್ಟುಕ್ 34.49 ಕೋಟಿ ವೆಚ್ಚದಲ್ಲಿ ಜಾನುವಾರು ಸಂವರ್ಧನಾ ಮತ್ತು ರೈತರ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಆಡಳಿತಾತ್ಮಕ ಅನುಮೋದನ
23. ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಕೆ 13.69 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಂ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
24. ಸಾಗರ ತಾಲ್ಲೂಕಿನ ಆಡಳಿತ ಸೌಧದ ಬಾಕಿ ಉಳಿದಿರುವ 03 ಮತ್ತು 04ನೇ ಅಂತಸ್ತಿನ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಒಟ್ಟು 13.65 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.
25. ರಾಜ್ಯದ ದೂರ ಸಂಪರ್ಕ ಜಾಲವಿಲ್ಲದ ಗ್ರಾಮಗಳಲ್ಲಿ ದೂರ ಸಂಪರ್ಕ ಸ್ಥಾವರಗಳನ್ನು ಸ್ಥಾಪಿಸಲು ಭಾರತ ಸರ್ಕಾರದ 4ಜಿ ಸ್ಯಾಚುರೇಶನ್ ಪ್ರಾಜೆಕ್ಟ್ ಅಡಿಯಲ್ಲಿ, ಸಂಪರ್ಕ ರಹಿತ ಗ್ರಾಮಗಳ 2000 ಚ.ಅ ಜಮೀನನ್ನು ಬಿ.ಎಸ್.ಎನ್.ಎಲ್ ಸಂಸ್ಥೆಗೆ 30 ವರ್ಷಗಳ ಅವಧಿಗೆ ಗುತ್ತಿಗೆ ನೀಡಲು ತೀರ್ಮಾನ.












Click it and Unblock the Notifications