BS Yediyurappa:ಬಿಜೆಪಿಗೆ ಬಿಗ್‌ ಶಾಕ್:‌ ಭ್ರಷ್ಟಾಚಾರ ಕೇಸಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಂಪುಟ ಅಸ್ತು

ಬೆಂಗಳೂರು, ನವೆಂಬರ್‌ 29: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಭ್ರಷ್ಟಾಚಾರ ದೂರಿನ ಬಗ್ಗೆ ಯಡಿಯೂರಪ್ಪ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ.

ಈ ಕುರಿತು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚವ ಸಂಪುಟ ಸಭೆ ನಡೆದಿದ್ದು, ಟಿ.ಜೆ.ಅಬ್ರಹಾಂ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಾಗೂ ಅವರ ಕುಟುಂಬದ ವಿರುದ್ಧ ನೀಡಲಾದ ಭ್ರಷ್ಟಾಚಾರದ ದೂರಿನಲ್ಲಿ ಗಂಭೀರವಾದ 16 ಆರೋಪಗಳನ್ನು ಮಾಡಲಾಗಿದೆ. ಆರೋಪಗಳನ್ನು ಮಾಡಿ ತನಿಖೆ ಮಾಡಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದರು. ರಾಜ್ಯಪಾಲರು ತನಿಖೆ ಮಾಡಲು ಅನುಮತಿಯನ್ನು ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿದ ಸಚಿವ ಸಂಪುಟವು ದಿ: 23-24/6/2021 ರ ನಿರ್ಣಯವನ್ನು ಹಿಂಪಡೆದು ಪುನರ್ ಪರಿಶೀಲಿಸಿ ತನಿಖೆಗೆ ಪೂರ್ವಾನುಮತಿ ನೀಡಬೇಕೆಂದು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ನಿರ್ಣಯಿಸಿದೆ.

Cabinet Decision About Prosecution Against Former CM BS Yediyurappa In Corruption Case

2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ರೂ. 145.99 ಕೋಟಿಗಳಲ್ಲಿ ಉಪಕರಣಗಳನ್ನು ಖರೀದಿಸಲು ಹಾಗೂ ರೂ. 84.88 ಕೋಟಿಗಳ ಅಂದಾಜು ಮೊತ್ತದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕ್ಷೇಮ ಕೇಂದ್ರ - ನಮ್ಮ ಕ್ಲಿನಿಕ್ ಗಳಲ್ಲಿನ ಪ್ರಯೋಗಾಲಯಗಳನ್ನು ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣಗಳನ್ನು ಖರೀದಿಸಲು ಹಾಗೂ 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ರೂ. 72.96 ಕೋಟಿಗಳ ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಅಗತ್ಯವಿರುವ ಔಷಧಿ ಮತ್ತು ರಾಸಾಯನಿಕಗಳನ್ನು PM- ABHIM ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

PM- ABHIM ಯೋಜನೆಯಡಿಯಲ್ಲಿ ಚಿಕ್ಕಬಳ್ಳಾಪುರದ CIMS , ಇಲ್ಲಿಗೆ ಅನುಮೋದನೆಯಾಗಿರುವ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಜಿಲ್ಲೆಯ ಚಿಂತಾಮಣಿ ತಾಲ್ಲೂಕಿಗೆ ಸ್ಥಳಾಂತರಿಸಿ 16.63 ಕೋಟಿ ವೆಚ್ಚಲದಲಿ ನಿರ್ಮಿಸಲು ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. PM- ABHIM ಯೋಜನೆಯಡಿಯಲ್ಲಿ 108.36 ಕೋಟಿ ರೂ ವೆಚ್ಚದಲ್ಲಿ ಒಟ್ಟು 254 ನಗರ ಆರೋಗ್ಯ ಕ್ಷೇಮಕೇಂದ್ರ - ನಮ್ಮ ಕ್ಲಿನಿಕ್ ಗಳನ್ನು ಉಪಕರಣಗಳೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ಜಿಲ್ಲೆ , ತಾಲ್ಲೂಕಿನ ಯರಮರಸ್ ಗ್ರಾಮದಲ್ಲಿ 14 ಗುಂಟೆ ಗೋಮಾಳ ಜಮೀನನ್ನು ಬಡವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯವನ್ನು ನಿರ್ಮಿಸಲು ಕರ್ನಾಟಕ ಪ್ರದೇಶ ಕುರುಬರ ಸಂಘ, ಬೆಂಗಳೂರು ಇವರಿಗೆ ಮಂಜೂರು ಮಾಡಲಾಗಿದೆ. ಕಬ್ಬು ಬೆಳೆಗಾರರ ಹಿತ ಕಾಯಲು ಎಲ್ಲಾ ಸಕ್ಕರೆ ಕಾರ್ಖಾನೆಗಳ ಬಳಿ ಡಿಜಿಟಲ್ ವೇಬ್ರಿಡ್ಜ್ ಗಳನ್ನು ಸ್ಥಾಪಿಸಲು ಮೊದಲ ಹಂತದಲ್ಲಿ ರಾಜ್ಯದ 13 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಳು ಗುರುತಿಸಿದ 15 ಸ್ಥಳಗಳಲ್ಲಿ 11.01 ಕೋಟಿ ರೂ.ಗಳಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕು ಕಪ್ಪಡಿ ಗ್ರಾಮದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣವನ್ನು 25 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಇನ್ನೂ Asian Development Bank ನ 2500 ಕೋಟಿ ಗಳ ಬಾಹ್ಯ ನಿಧಿ ಸಹಯೋಗದೊಂದಿಗೆ ಜುಲೈ 2025 ರಿಂದ ಜೂನ್ 2029 ರವರೆಗೆ ಅಸ್ತಿತ್ವದಲ್ಲಿರುವ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವ ಉಪಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ.

ಕೇಂದ್ರ ಪ್ರವಾಸೋದ್ಯಮದ 'ಸ್ವದೇಶ್ ದರ್ಶನ್ 2.0' ಯೋಜನೆಯಡಿ ಮೈಸೂರಿನಲ್ಲಿ Ecological Experience Zone ನ್ನು 18.47 ಕೋಟಿ ಮೊತ್ತದಲ್ಲಿ ಹಾಗೂ ಹಂಪಿಯಲ್ಲಿ Travellers Nook ನ್ನು 25.63 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸುವ ಸಂಬಂಧ ಟೆಂಡರ್ ಕರೆಯಲು ಕರ್ನಾಟಕ ಪ್ರವಾಸೋದ್ಯಮ ಮೂಲ ಸೌಕರ್ಯ ನಿಗಮದ ಮೂಲಕ ಕರೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೈಸೂರು ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ಕಾರ್ಯಾಚರಣೆ , ನಿರ್ವಹಣೆಗೆ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯಿಂದ ಟೆಂಡರ್ ಮೂಲಕ ಹೋಟೆಲ್ ಆಪರೇಟರ್ನ್ನು ಆಯ್ಕೆ ಮಾಡಲು ಅನುಮೋದನೆ ನೀಡಲಾಗಿದೆ. ಪಂಚತಾರಾ ಹೋಟೆಲ್ ಗಳ ಸಮರ್ಪಕ ನಿರ್ವಹಣೆಯ ಸಲುವಾಗಿ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ಕಟ್ಟಡದ ಪುನರ್ ನಿರ್ಮಾಣ,ನವೀಕರಣ,ನಿವರ್ಹಣೆ ಗಾಗಿ ಖಾಸಗಿಯವರಿಂದ ಟೆಂಡರ್ ಕರೆಯಲಾಗುವುದು. ಖಾಸಗಿ ನಿರ್ವಹಣೆಯ ಮೂಲಕ ಉತ್ತಮ ಲಾಭ ಹಾಗೂ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+