ಖಾತೆ ಹಂಚಿಕೆ ಅನುಪಾತದ ಬಗ್ಗೆ ಹೈಕಮಾಂಡ್ ನಿರ್ಣಯ: ಖರ್ಗೆ
ಬೆಂಗಳೂರು, ಮೇ 20: ಖಾತೆ ಹಂಚಿಕೆ ಅನುಪಾತ ಎಷ್ಟಿರಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆಯಲ್ಲಿ 'ಕೊಡು-ಕೊಳ್ಳುವ' ಹಂಚಿಕೆ ಇರುತ್ತದೆ ಎಂದ ಅವರು, ಆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲೆಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್, ಪ್ರಾದೇಶಿಕ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದೆ ಎಂದು ಖರ್ಗೆ ಹೇಳಿದರು.

ನಾಳೆ (ಸೋಮವಾರ) ಕುಮಾರಸ್ವಾಮಿ ಅವರು ದೆಹಲಿಗೆ ಭೇಟಿ ಮಾಡಲಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಬಳಿ ಖಾತೆ ಹಂಚಿಕೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.












Click it and Unblock the Notifications