• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ 29 ಜನರ ಸೇರ್ಪಡೆ!

|
Google Oneindia Kannada News

ಬೆಂಗಳೂರು, ಆ. 04: ಇಂದು ಮಧ್ಯಾಹ್ನ 02.15ಕ್ಕೆ ಸಚಿವ ಸಂಪುಟ ವಿಸ್ತರಣೆಗೆ ಕಾಲ ನಿಗದಿಯಾಗಿದ್ದು, ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿದೆ. ಸಚಿವ ಸಂಪುಟಕ್ಕೆ 29 ಜನರು ಸೇರ್ಪಡೆಯಾಗುತ್ತಿದ್ದು, ಸಂಪುಟಕ್ಕೆ ಸೇರುವವರ ಹೆಸರುಗಳನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

"ಈ ಬಾರಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸದಿರಲು ಹೈಕಮಾಂಡ್ ತೀರ್ಮಾನ ಮಾಡಿರುವುದರಿಂದ ಯಾರೂ ಡಿಸಿಎಂ ಇರುವುದಿಲ್ಲ ಎಂದು" ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕತೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬಸವರಾಜ ಬೊಮ್ಮಾಯಿ ವಿವರಿಸಿದರು.

ಇನ್ನು ಸಚಿವ ಸಂಪುಟ ಸೇರಲಿರುವ ಶಾಸಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿ ಮಾಹಿತಿ ನೀಡಿದರು. ಜೊತೆಗೆ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಆರು ಸಚಿವರಿಗೆ ಈ ಸಲ ಸಚಿವಸ್ಥಾನ ಸಿಕ್ಕಿಲ್ಲ. ವಿವಿಧ ಕಾರಣಗಳಿಂದ ಮಾಜಿ ಸಚಿವರಾದ ಜಗದೀಶ್ ಶೆಟ್ಟರ್, ಆರ್. ಶಂಕರ್, ಸಿ. ಪಿ. ಯೋಗೇಶ್ವರ್, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್, ಎಸ್. ಸುರೇಶ್ ಕುಮಾರ್ ಹಾಗೂ ಲಕ್ಷ್ಮಣ ಸವದಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ.

ರಾಜ್ಯ ಸರ್ಕಾರದಲ್ಲಿ ಒಟ್ಟು 34 ಶಾಸಕರು ಸಚಿವರಾಗಬಹುದು. ಉಳಿದಿರುವ 4 ಸ್ಥಾನಗಳನ್ನು ಕಾಯ್ದಿರಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ. ಮಂತ್ರಿ ಹುದ್ದೆ ಸಿಗದೇ ಅಸಮಾಧಾನ ಹೆಚ್ಚಾದಲ್ಲಿ ಅಂಥವರಿಗೆ ಮಂತ್ರಿ ಪದವಿ ಕೊಡಲು ಬಿಜೆಪಿ ತೀರ್ಮಾನ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರಲಿರುವವರು ಹೀಗಿದ್ದಾರೆ

Karnataka Cabinet Expansion: 29 new ministers to take oath. Here’s the complete list

1. ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ

2. ಬೀಳಗಿ ಶಾಸಕ ಮುರುಗೇಶ್ ನಿರಾಣಿ

3. ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ

4. ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು

5. ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್

6. ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್​

7. ಕೆ.ಆರ್​. ಪೇಟೆ ಶಾಸಕ ಡಾ. ಕೆ.ಸಿ. ನಾರಾಯಣಗೌಡ

8. ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ

9. ಆರ್.ಆರ್. ನಗರ ಶಾಸಕ ಮುನಿರತ್ನ

10. ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್​

11. ಕೆ.ಆರ್​. ಪುರ ಶಾಸಕ ಭೈರತಿ ಬಸವರಾಜು​

12. ಔರಾದ್ ಶಾಸಕ ಪ್ರಭು ಚೌಹಾಣ್​

13. ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ

14. ಗೋವಿಂದರಾಜನಗರ ಶಾಸಕ ವಿ. ಸೋಮಣ್ಣ

15. ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ

16. ಹುಕ್ಕೇರಿ ಶಾಸಕ ಉಮೇಶ್​ ಕತ್ತಿ

17. ಮಲ್ಲೇಶ್ವರ ಶಾಸಕ ಡಾ. ಅಶ್ವಥ್ ನಾರಾಯಣ್​

18. ಮುಧೋಳ ಶಾಸಕ ಗೋವಿಂದ ಕಾರಜೋಳ

19. ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ. ನಾಗರಾಜ್

20. ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್

21. ಯಲ್ಲಾಪುರ ಶಾಸಕ ಶಿವರಾಮ್​ ಹೆಬ್ಬಾರ್​

22. ಕಾರ್ಕಳ ಶಾಸಕ ವಿ. ಸುನೀಲ್​ ಕುಮಾರ್ ನಾಯಕ್​

23. ತಿಪಟೂರು ಶಾಸಕ ಬಿ.ಸಿ. ನಾಗೇಶ್​

24. ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ

25. ಸುಳ್ಯ ಶಾಸಕ ಎಸ್. ಅಂಗಾರ

26. ವಿಜಯನಗರ ಶಾಸಕ ಆನಂದ್​ ಸಿಂಗ್​

27. ನರಗುಂದ ಶಾಸಕ ಸಿ. ಸಿ. ಪಾಟೀಲ್​

28. ಪದ್ಮನಾಭನಗರ ಶಾಸಕ ಆರ್. ಅಶೋಕ್

   ಹಿಮಾಚಲ ಪ್ರದೇಶದ ಘಟನೆ ಮೈ ಜುಮ್ ಅನ್ಸತ್ತೆ ! | Oneindia Kannada

   29. ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ. ಮಾಧುಸ್ವಾಮಿ

   English summary
   Karnataka Cabinet Expansion: 29 leaders to take oath as ministers today in the first formation of the Basavaraj Bommai led Cabinet since it assumed power in July 2021.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X