ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಷಾಢ ಕಳೆಯುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ!

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 07 : ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆ ಗರಿಗೆದರಿದೆ. ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕ, ಸಮನ್ವಯ ಸಮಿತಿಗೆ ಸೇರ್ಪಡೆ ಎಂದು ಹಲವಾರು ಚಟುವಟಿಕೆಗಳು ನಡೆಯುತ್ತಿವೆ.

ಆಷಾಢದ ಬಳಿ ಸಂಪುಟ ವಿಸ್ತರಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರು ನವದೆಹಲಿ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ನಾಯಕರ ಬಳಿ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ.

ಆಷಾಢ ಮಾಸ ಕಳೆದರೂ ಶಾಸಕರಿಗೆ ಸಚಿವ ಸ್ಥಾನದ ಭಾಗ್ಯವಿಲ್ಲ!ಆಷಾಢ ಮಾಸ ಕಳೆದರೂ ಶಾಸಕರಿಗೆ ಸಚಿವ ಸ್ಥಾನದ ಭಾಗ್ಯವಿಲ್ಲ!

ಸಮನ್ವಯ ಸಮಿತಿ : ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜೆಡಿಸ್ ಅಧ್ಯಕ್ಷ ಎಚ್. ವಿಶ್ವನಾಥ್ ಅವರನ್ನು ಸಮಿತಿಗೆ ಸೇರಿಸಲು ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

Cabinet expansion after Ashada, lobbing in New Delhi

ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕೆಲವು ದಿನಗಳ ಹಿಂದೆ ಭೇಟಿಯಾಗಿದ್ದರು. 'ಆಷಾಢದ ಬಳಿಕ ಸಂಪುಟ ವಿಸ್ತರಣೆಗೆ ಅವರು ಒಪ್ಪಿಗೆ ನೀಡಿದ್ದಾರೆ. ನಿಗಮ ಮಂಡಳಿಗೂ ನೇಮಕ ಮಾಡಲಾಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದ್ದರು.

ಸಿದ್ದರಾಮಯ್ಯ ಔತಣಕೂಟದಲ್ಲಿ ಎಚ್‌ಡಿಕೆ ವಿರುದ್ಧ ಅಸಮಾಧಾನ ಸ್ಪೋಟಸಿದ್ದರಾಮಯ್ಯ ಔತಣಕೂಟದಲ್ಲಿ ಎಚ್‌ಡಿಕೆ ವಿರುದ್ಧ ಅಸಮಾಧಾನ ಸ್ಪೋಟ

ಆಷಾಢ ಕಳೆಯುತ್ತಿದ್ದಂತೆಯೇ ಸಂಪುಟ ವಿಸ್ತರಣೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಿದ್ದರಿಂದ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗ ಸಂಪುಟ ವಿಸ್ತರಣೆ ನಡೆಯುವುದು ಖಚಿತವಾಗಿದೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಒಟ್ಟು 27 ಸಚಿವರು ಎಚ್.ಡಿ.ಕುಮಾರಸ್ವಾಮಿ ಸಂಪುಟವನ್ನು ಸೇರಿದ್ದಾರೆ. ಕಾಂಗ್ರೆಸ್‌ನಿಂದ 7, ಜೆಡಿಎಸ್‌ನಿಂದ ಒಬ್ಬರು ಸಂಪುಟ ಸೇರಬಹುದಾಗಿದೆ. ಉಳಿದಂತೆ ನಿಗಮ-ಮಂಡಳಿ ಸ್ಥಾನಕ್ಕಾಗಿ ಲಾಬಿ ನಡೆಯುತ್ತಿದೆ.

English summary
Ahead of the Cabinet expansion in Karnataka MLA's lobbing in New Delhi. Former minister M.B.Patil and others reached Delhi to meet high command leaders. Cabinet expansion may expected after Ashada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X