ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ, ಹೊಸಬರಿಗೆ ಅದೃಷ್ಟ?

ಮುಂದಿನ ಅಧಿವೇಶನ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಿ ಖಾಲಿ ಇರುವ ಮಂತ್ರಿ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ

ಮೈಸೂರು, ಜೂನ್ 02: ಮುಂದಿನ ಅಧಿವೇಶನ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಿ ಖಾಲಿ ಇರುವ ಮಂತ್ರಿ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜೂನ್ 5 ರಿಂದ 16 ರ ತನಕ ವಿಧಾನಸಭೆ ಅಧಿವೇಶನ ನಡೆಯಲಿದೆ. ಇದಾದ ಬಳಿಕ ಖಾಲಿ ಇರುವ ಮೂರು ಸ್ಥಾನಗಳನ್ನು ತುಂಬುವ ನಿರೀಕ್ಷೆಯಿದೆ. ಹೊಸಬರಿಗೆ ಸಚಿವ ಸ್ಥಾನ ನೀಡುವ ಸುಳಿವು ನೀಡಿದ ಸಿದ್ದರಾಮಯ್ಯ ಅವರು, ಯಾರಿಗೆ ಅದೃಷ್ಟ ಸಿಗಲಿದೆ ಎಂಬ ಗುಟ್ಟು ಬಿಟ್ಟುಕೊಡಲಿಲ್ಲ.

Cabinet expansion after session: CM Siddaramaiah

ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ (ದಕ್ಷಿಣ ಕರ್ನಾಟಕ) ಹಾಗೂ ಎಸ್.ಆರ್. ಪಾಟೀಲ್ (ಉತ್ತರ ಕರ್ನಾಟಕ) ನಿಯೋಜಿಸಿರುವುದು ಸರಿ ಇದೆ. ಒಬ್ಬ ಕಾರ್ಯಾಧ್ಯಕ್ಷರಿಗೆ ರಾಜ್ಯಾದ್ಯಂತ ಓಡಾಡಲು ಸಾಧ್ಯವಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಇಬ್ಬರು ಕಾರ್ಯಾಧ್ಯಕ್ಷರನ್ನು ನೇಮಿಸಲಾಗಿದೆ ಎಂದು ಸಿಎಂ ಸಮರ್ಥಿಸಿಕೊಂಡರು.

ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನವೂ ಪ್ರಮುಖವಾದ ಹುದ್ದೆ. ಅದನ್ನು ಡಿ.ಕೆ.ಶಿವಕುಮಾರ್ ಅವರಿಗೆ ವಹಿಸಲಾಗಿದೆ. ಈ ವಿಷಯದಲ್ಲಿ ಅವರಿಗೆ ಅಸಮಾಧಾನವಾಗಿಲ್. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದು, ಮುಂದಿನ ಚುನಾವಣೆಯನ್ನು ಎದುರಿಸಲು ಸಿದ್ಧತೆ ನಡೆದಿದೆ, ಕಾಂಗ್ರೆಸ್ಸಿನಿಂದ ಸಿಎಂ ಅಭ್ಯರ್ಥಿಯನ್ನು ಘೋಷಿಸಿಲ್ಲ, ಇದು ಸದ್ಯಕ್ಕೆ ಪ್ರಸ್ತುತ ಈ ಬಗ್ಗೆ ಚರ್ಚೆಯೂ ನಡೆದಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+