ಮಂತ್ರಿ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆ ಘೋಷಿಸಿದ ಬೇಳೂರು ಗೋಪಾಲಕೃಷ್ಣ, ಯಶವಂತರಾಯಗೌಡ ಪಾಟೀಲ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಳಿಕ ಆಡಳಿತ ಪಕ್ಷದಲ್ಲೇ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಇಂದು ಹೈಕಮಾಂಡ್‌ ನಿಂದ ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಅಸಮಾಧಾನಗೊಂಡ ಇಬ್ಬರು ಕಾಂಗ್ರೆಸ್‌ ಶಾಸಕರುರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಸಚಿವ ಸ್ಥಾನ ಹಂಚಿಕೆ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Cabinet Expansion Belur Gopalakrishna Yashavantharayagouda Patil Announce Resignation

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ತಮಗೆ ಉದ್ದೇಶಪೂರ್ವಕವಾಗಿ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಆರೋಪಿಸಿದರು. "ನಾಳೆ (ಆಗಸ್ಟ್ 4) ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ನನಗೆ ಸಾಕಷ್ಟು ನೋವಾಗಿದೆ. ಮೂರು ವರ್ಷ ಸಚಿವರಾಗಿದ್ದವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಹಾಗೂ ಸಚಿವರ ಮಕ್ಕಳಿಗಷ್ಟೇ ಅವಕಾಶ ಸಿಗಬೇಕೇ? ಹೊಸಬರಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದ್ದರು. ಇದೇನಾ ಅವರು ಕೊಟ್ಟಿರುವ ಅವಕಾಶ? ನನ್ನೊಂದಿಗೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನೊಂದೆಡೆ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಕೂಡ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂದಿನ ರಾಜಕೀಯದಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ. ಈ ಬಾರಿ ಸಚಿವ ಸ್ಥಾನ ಸಿಗುವ ಸಂಪೂರ್ಣ ನಿರೀಕ್ಷೆ ಇತ್ತು. ಪಕ್ಷದ ವರಿಷ್ಠರು ಭರವಸೆ ಕೂಡ ನೀಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ. ಇದರಿಂದ ಮನಸ್ಸಿಗೆ ತೀವ್ರ ನೋವಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ವಂಚಿತರಾದ ಹಲವು ಶಾಸಕರಲ್ಲೂ ಅಸಮಾಧಾನ ವ್ಯಕ್ತವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವ ವರದಿಗಳು ಕೇಳಿಬರುತ್ತಿವೆ. ಅಲ್ಲದೇ ಕಾಂಗ್ರೆಸ್‌ ಹೈಕಮಾಂಡ್‌ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕೆಲವರ ಹೆಸರು ಔಟ್‌ ಆಗಿದ್ದು, ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ. ಈ ಎಲ್ಲಾ ಬೆಳವಣಿಗೆ ಕಾಂಗ್ರೆಸ್ ಸರ್ಕಾರಕ್ಕೆ ಹೊಸ ರಾಜಕೀಯ ಸವಾಲುಗಳನ್ನು ತಂದೊಡ್ಡುವ ಸಾಧ್ಯತೆ ಇದೆ.

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ರಾಜ್ಯ ಸಚಿವ ಸಂಪುಟ ಪುನಾರಚನೆ ಮತ್ತು ವಿಸ್ತರಣೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಜೋರಾಗಿದೆ. ಮಂತ್ರಿಗಿರಿ ಸಿಗಲಿದೆಯೆಂಬ ನಿರೀಕ್ಷೆಯಲ್ಲಿದ್ದು, ಕೊನೆ ಗಳಿಗೆಯಲ್ಲಿ ನಿರಾಶೆಗೊಂಡಿರುವ ಪ್ರಭಾವಿ ಶಾಸಕರು ಹಾಗೂ ನಾಯಕರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಇತ್ತ ಕೆಲ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇನ್ನೊಂದೆಡೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಮತ್ತು ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿರುವ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ಸಲ್ಲಿಸುವ ಮೂಲಕ ಹೈಕಮಾಂಡ್ ನಡೆಗೆ ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಕ್ಷೇತ್ರ ಹಾಗೂ ಬೆಂಬಲಿಗರ ಆಶಯಕ್ಕೆ ತಕ್ಕಂತೆ ತಮಗೆ ಸಂಪುಟದಲ್ಲಿ ಅವಕಾಶ ನೀಡದಿರುವುದೇ ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+