ಸಂಪುಟ ವಿಸ್ತರಣೆ : ದೆಹಲಿಗೆ ಹೊರಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂ. 08 : ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 'ದೆಹಲಿ ಭೇಟಿ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ' ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕೇಂದ್ರ ಎನ್‌ಡಿಎ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲು ರೂಪುರೇಷೆ ಸಿದ್ಧಪಡಿಸಲು ಹೈಕಮಾಂಡ್ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಯನ್ನು ಜೂ.9ರಂದು ಕರೆದಿದೆ. ಇದರಲ್ಲಿ ಭಾಗಿಯಾಗಲು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. [ಬಿಎಂಪಿ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ?]

siddaramaiah

ಈ ಸಭೆಯ ಬಳಿಕವೂ ಜೂನ್ 10ರವರೆಗೆ ಸಿದ್ದರಾಮಯ್ಯ ಅವರು ದೆಹಲಿಯಲ್ಲಿಯೇ ಇರಲಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ವಿವಿಧ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ. ಜೂನ್ 9ರಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ. [ಸಂಪುಟ ವಿಸ್ತರಣೆ : ಖಾತೆ, ವ್ಯಕ್ತಿಯೂ ಬದಲಾಗಬಹುದು!]

ಸಂಪುಟ ವಿಸ್ತರಣೆ ಯಾಗುತ್ತಾ? : ಹೈಕಮಾಂಡ್ ನಾಯಕರು ಮತ್ತು ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ ಅವರು ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸುವ ಸಾಧ್ಯತೆ ಇದೆ. 'ದೆಹಲಿ ಭೇಟಿ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇನೆ' ಎಂದು ಭಾನುವಾರ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿದ್ದಾರೆ.

ಆದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಎದುರಾಗಿರುವುದರಿಂದ ಸಚಿವ ಸಂಪುಟ ವಿಸ್ತರಣೆ ಅಥವ ಪುನಾರಚನೆ ಬಗ್ಗೆ ಸದ್ಯಕ್ಕೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ತಿಳಿದುಬಂದಿದೆ. ಆದರೆ, ಪಕ್ಷದ ನಾಯಕರ ಜೊತೆ ಈ ಕುರಿತು ಸಿದ್ದರಾಮಯ್ಯ ಅವರು ಮಾತುಕತೆ ನಡೆಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+