• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಂಪುಟ ವಿಸ್ತರಣೆ : ಎರಡು ಖಾತೆಗಳಿಗೆ ಕಾಂಗ್ರೆಸ್ ಬೇಡಿಕೆ?

|
   ಹೊಸ ಸಚಿವರ ಸೇರ್ಪಡೆ ಬಳಿಕ ಖಾತೆಗಳ ಬದಲಾವಣೆ | Oneindia Kannada

   ಬೆಂಗಳೂರು, ಜೂನ್ 13 : ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಜೂನ್ 14ರಂದು ನಡೆಯಲಿದೆ. ಒಟ್ಟು ಮೂರು ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹೊಸ ಸಚಿವರ ಸೇರ್ಪಡೆ ಬಳಿಕ ಖಾತೆಗಳ ಬದಲಾವಣೆಯೂ ನಡೆಯಲಿದೆ.

   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಮೂರು ಸಚಿವ ಸ್ಥಾನಗಳು ಖಾಲಿ ಇವೆ. ಇಬ್ಬರು ಪಕ್ಷೇತರ ಶಾಸಕರು ಸೇರಿದಂತೆ ಮೂವರು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

   ಕುಮಾರಸ್ವಾಮಿ ಸಂಪುಟ ಸೇರುವ ಶಾಸಕರ ಹೆಸರು ಇನ್ನೂ ನಿಗೂಢ!

   ಹೊಸ ಸಚಿವರು ಸೇರುತ್ತಿದ್ದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಖಾತೆಗಳನ್ನು ಹಂಚಿಕೆ ಮಾಡಲಿದ್ದಾರೆ. ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ ಎರಡು ಖಾತೆಗಳನ್ನು ಬಿಟ್ಟುಕೊಡುವಂತೆ ಜೆಡಿಎಸ್‌ ಮುಂದೆ ಬೇಡಿಕೆ ಇಟ್ಟಿದೆ.

   ಜೂನ್ 14ರ ಶುಭ ಶುಕ್ರವಾರ ಸಚಿವ ಸಂಪುಟ ವಿಸ್ತರಣೆ

   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಳಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಇಂಧನ ಖಾತೆಗಳಿವೆ ಇವುಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವಂತೆ ಬೇಡಿಕೆ ಇಡಲಾಗಿದೆ. ಆದರೆ, ಜೆಡಿಎಸ್ ಇದಕ್ಕೆ ಇನ್ನೂ ಒಪ್ಪಿಗೆ ನೀಡಿಲ್ಲ.

   ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕಿದೆ : ಎಚ್.ನಾಗೇಶ್

   ಕಾಂಗ್ರೆಸ್ ಹೊಸ ಬೇಡಿಕೆ

   ಕಾಂಗ್ರೆಸ್ ಹೊಸ ಬೇಡಿಕೆ

   ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿಯೇ ಯಾವ ಪಕ್ಷಕ್ಕೆ ಯಾವ ಖಾತೆ? ಎಂದು ಅಂತಿಮಗೊಳಿಸಲಾಗಿತ್ತು. ಆದರೆ, ಈಗ ಸಚಿವ ಸಂಪುಟ ವಿಸ್ತರಣೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದೆ.

   ಮೂರು ಖಾತೆ ಕುಮಾರಸ್ವಾಮಿ ಅವರ ಬಳಿ ಇದೆ

   ಮೂರು ಖಾತೆ ಕುಮಾರಸ್ವಾಮಿ ಅವರ ಬಳಿ ಇದೆ

   ಹಣಕಾಸು, ಇಂಧನ, ಗುಪ್ತಚರ ಸೇರಿದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಬಳಿ ಹಲವು ಖಾತೆಗಳಿವೆ. ಸಿ.ಎಸ್.ಶಿವಳ್ಳಿ ಅವರ ನಿಧನ, ಎಚ್.ಮಹೇಶ್ ಅವರ ರಾಜೀನಾಮೆ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಪೌರಾಡಳಿತ ಖಾತೆಗಳು ಅವರ ಕೈ ಸೇರಿವೆ.

   ಎರಡು ಖಾತೆಗಳನ್ನು ನೀಡಿ

   ಎರಡು ಖಾತೆಗಳನ್ನು ನೀಡಿ

   ಕಾಂಗ್ರೆಸ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಇಂಧನ ಖಾತೆಗಳನ್ನು ನೀಡುವಂತೆ ಬೇಡಿಕೆ ಇಟ್ಟಿದೆ. ಒಂದು ವೇಳೆ ರಾಮಲಿಂಗಾ ರೆಡ್ಡಿ ಅವರಂತಹ ಹಿರಿಯ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಅವರಿಗೆ ಈ ಖಾತೆಗಳನ್ನು ಹಂಚಿಕೆ ಮಾಡುವುದು ಕಾಂಗ್ರೆಸ್‌ನ ಆಲೋಚನೆಯಾಗಿದೆ.

   ಮೂರು ಸಚಿವ ಸ್ಥಾನಗಳು ಭರ್ತಿ

   ಮೂರು ಸಚಿವ ಸ್ಥಾನಗಳು ಭರ್ತಿ

   ಶುಕ್ರವಾರ ಮೂವರು ಶಾಸಕರು ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುತ್ತಿದ್ದಾರೆ. ಕಾಂಗ್ರೆಸ್ ಕೋಟಾದಿಂದ ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್.ಶಂಕರ್ ಸಂಪುಟ ಸೇರುವ ನಿರೀಕ್ಷೆ ಇದೆ. ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಶಂಕರ್ ಅವರನ್ನು ಸಚಿವರನ್ನಾಗಿ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ.

   English summary
   H.D.Kumaraswamy cabinet expansion scheduled on June 14, 2019. Karnataka Congress demand for Energy and Primary and secondary education portfolio. Both portfolio now under Chief Minister H.D.Kumaraswamy.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X