ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ, ಖಾತೆ ಹಂಚಿಕೆ : ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ!

By Gururaj
|
Google Oneindia Kannada News

ಬೆಂಗಳೂರು, ಜೂನ್ 05 : ಕರ್ನಾಟಕದ ಸಂಪುಟ ರಚನೆ ಪ್ರಕ್ರಿಯೆ ದೆಹಲಿಗೆ ಸ್ಥಳಾಂತರವಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆದಿದೆ.

ಸಂಪುಟ ರಚನೆ ಕುರಿತು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಸಭೆ ನಡೆದಲಿದ್ದಾರೆ. ಅದಕ್ಕೂ ಮೊದಲು ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಪಕ್ಷದ ನಾಯಕರು ಸಭೆ ನಡೆಸಿದರು.

ಖಾತೆ ಹಂಚಿಕೆ: ಜೆಡಿಎಸ್ ಗೆ ಯಾವ ಖಾತೆ? ಕಾಂಗ್ರೆಸಿಗೆ ಯಾವ ಖಾತೆ?ಖಾತೆ ಹಂಚಿಕೆ: ಜೆಡಿಎಸ್ ಗೆ ಯಾವ ಖಾತೆ? ಕಾಂಗ್ರೆಸಿಗೆ ಯಾವ ಖಾತೆ?

ಕೆ.ಎಚ್.ಮುನಿಯಪ್ಪ, ಆರ್.ವಿ.ದೇಶಪಾಂಡೆ, ಪ್ರಕಾಶ್ ಹುಕ್ಕೇರಿ ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಜೂನ್ 6ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಿಂದ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವವರು ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.

ಸಂಪುಟ ವಿಸ್ತರಣೆ : ಕುಮಾರಸ್ವಾಮಿ ಸಂಪುಟ ಸೇರುವ 20 ಶಾಸಕರ ಪಟ್ಟಿಸಂಪುಟ ವಿಸ್ತರಣೆ : ಕುಮಾರಸ್ವಾಮಿ ಸಂಪುಟ ಸೇರುವ 20 ಶಾಸಕರ ಪಟ್ಟಿ

ಯಾರಿಗೆ ಯಾವ ಖಾತೆ, ಯಾರು ಸಂಪುಟ ಸೇರಬೇಕು? ಎಂದು ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ 22, ಜೆಡಿಎಸ್‌ಗೆ 12 ಖಾತೆಗಳು ಹಂಚಿಕೆಯಾಗಿವೆ.

'ಯಾವುದೇ ಅಸಮಾಧಾನವಿಲ್ಲ'

'ಯಾವುದೇ ಅಸಮಾಧಾನವಿಲ್ಲ'

'ಸಂಪುಟ ರಚನೆ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ. ರಾಹುಲ್ ಗಾಂಧಿ ಅವರ ಜೊತೆ ಚರ್ಚೆ ನಡೆಸಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ' ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಮೇಶ್ವರ ಅವರು ದೆಹಲಿಯಲ್ಲಿದ್ದು, ಪಕ್ಷದ ನಾಯಕರ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

'ಹಿರಿಯ ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡುವುದಿಲ್ಲ ಎಂಬುದು ಮಾಧ್ಯಮಗಳು ಸೃಷ್ಟಿಸಿದ ಸುದ್ದಿ. ಎಲ್ಲರಿಗೂ ಆದ್ಯತೆ ನೀಡಲಾಗುತ್ತದೆ' ಎಂದು ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

17 ಸ್ಥಾನಗಳು ಭರ್ತಿ

17 ಸ್ಥಾನಗಳು ಭರ್ತಿ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ಗೆ 22ಸಚಿವ ಸ್ಥಾನಗಳು ಸಿಕ್ಕಿವೆ. ಈಗಾಗಲೇ ಉಪಮುಖ್ಯಮಂತ್ರಿಯಾಗಿ ಜಿ.ಪರಮೇಶ್ವರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಅವರು ಸಂಪುಟ ಸೇರಲಿದ್ದಾರೆ. ಉಳಿದ 21 ಸ್ಥಾನಗಳ ಪೈಕಿ 17 ಸ್ಥಾನಗಳನ್ನು ಮೊದಲ ಹಂತದಲ್ಲಿ ಭರ್ತಿ ಮಾಡಲು ನಿರ್ಧರಿಸಲಾಗಿದೆ. ರಾಹುಲ್ ಗಾಂಧಿ ಜೊತೆ ಸಭೆ ನಡೆಸಿದ ಬಳಿಕ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಹಿರಿಯ ನಾಯಕರಿಂದ ಪ್ರಯತ್ನ

ಹಿರಿಯ ನಾಯಕರಿಂದ ಪ್ರಯತ್ನ

30ಕ್ಕೂ ಅಧಿಕ ಶಾಸಕರು ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ ನಡೆಸಿದ್ದಾರೆ. ಆರ್.ವಿ.ದೇಶಪಾಂಡೆ, ಎಚ್.ಕೆ.ಪಾಟೀಲ, ಈಶ್ವರ ಖಂಡ್ರೆ, ರೋಷನ್ ಬೇಗ್, ಪರಮೇಶ್ವರ ನಾಯ್ಕ್, ರಾಘವೇಂದ್ರ ಹಿಟ್ನಾಳ್, ಶ್ರೀನಿವಾಸ ಮಾನೆ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಯಾರು ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ? ಎಂಬುದು ಇನ್ನೂ ಅಂತಿಮವಾಗಿಲ್ಲ.

ಡಿ.ಕೆ.ಶಿವಕುಮಾರ್‌ಗೆ ಅಸಮಾಧಾನವಿಲ್ಲ

ಡಿ.ಕೆ.ಶಿವಕುಮಾರ್‌ಗೆ ಅಸಮಾಧಾನವಿಲ್ಲ

'ಸಂಪುಟ ರಚನೆ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಯಾವುದೇ ಅಸಮಾಧಾನವಿಲ್ಲ. ಅವರು ಪಕ್ಷದ ಶಿಸ್ತಿನ ಸಿಪಾಯಿ. ಅವರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ' ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.ಪರಮೇಶ್ವರ ಹೇಳಿಕೆ

English summary
Karnataka Congress leaders crucial meeting held in Leader of the Congress in the Lok Sabha M. Mallikarjun Kharge residence in Delhi about Cabinet expansion. Congress to get 22 ministries post in H.D.Kumaraswamy cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X