ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ಸಂಪುಟ ಸಂಕಟ: ಗೊಂದಲದಲ್ಲಿಯೇ ಬೆಂಗಳೂರು ತಲುಪಿದ ಸಿಎಂ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಆ. 04: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದು, ಮಂತ್ರಿ ಮಂಡಲ ಸೇರುವವರ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಬೆಂಗಳೂರು ತಲುಪಿದ್ದಾರೆ. ಬೆಳಗ್ಗೆ 06.10ರ ವಿಮಾನದಲ್ಲಿ ದೆಹಲಿಯಿಂದ ಹೊರಟು ಈಗ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಬಂದು ತಲುಪಿಸಿದ್ದಾರೆ. ಅವರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕೂಡ ಬೆಂಗಳೂರಿಗೆ ಆಗಮಿಸಿದ್ದು, ಈ ಮಧ್ಯೆ ಹಲವು ಗೊಂದಲಗಳು ಬಿಜೆಪಿಯಲ್ಲಿ ಮುಂದುವರೆದಿವೆ.

ಸಂಪುಟ ವಿಸ್ತರಣೆ ಅಂತಿಮಗೊಳಿಸುವ ನಿಟ್ಟಿನಲ್ಲಿ ಕಳೆದ ಭಾನುವಾರವೇ ದೆಹಲಿಗೆ ತೆರಳಿದ್ದ ಸಿಎಂ ಬೊಮ್ಮಾಯಿ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಉಳಿದುಕೊಂಡಿದ್ದರು. ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಿರಂತರ ಚರ್ಚೆ ನಡೆಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಎರಡು ಬಾರಿ ಸುಧೀರ್ಘ ಚರ್ಚೆ ನಡೆಸಿದ್ದರು. ಮಂಗಳವಾರ ತಡ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಅಂತಿಮ ಚರ್ಚೆ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆ ಕೊಟ್ಟಿದ್ದು, ಸಿಎಂ ಬೊಮ್ಮಾಯಿ ಅವರಿಗೆ ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಕೊಟ್ಟಿದೆ.

ಹೀಗಾಗಿ ಸಚಿವ ಸಂಪುಟ ಸೇರುವವರ ಪಟ್ಟಿಯೊಂದಿದೆ ಸಿಎಂ ಬೊಮ್ಮಾಯಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಆದರೂ ಕೂಡ ರಾಜಭವನಕ್ಕೆ ಸಂಪುಟ ಸೇರುವವರ ಪಟ್ಟಿಯನ್ನು ಕಳುಹಿಸಿದ ಬಳಿಕವೇ, ಅಧಿಕೃತವಾಗಿ ಪಟ್ಟಿ ಪ್ರಕಟಿಸಲು ಸಿಎಂ ಬೊಮ್ಮಾಯಿ ಅವರಿಗೆ ಹೈಕಮಾಂಡ್ ಸೂಚಿಸಿದೆ. ಕಳೆದ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಣ ವಚನ ಸ್ವೀಕರಿಸಿದ್ದ ಬಸವರಾಜ ಬೊಮ್ಮಾಯಿ ಅವರು, 8 ದಿನಗಳ ಬಳಿಕ ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಕೊನೆಗೂ ಬಿಜೆಪಿ ಹೈಕಮಾಂಡ್ ಒಪ್ಪಿಗೆ: ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ!ಕೊನೆಗೂ ಬಿಜೆಪಿ ಹೈಕಮಾಂಡ್ ಒಪ್ಪಿಗೆ: ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ!

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದರೂ ಹಲವು ಗೊಂದಲಗಳಲ್ಲಿಯೇ ದೆಹಲಿಯಿಂದ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಬಂದಿದ್ದಾರೆ. ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕಾ? ಬೇಡವಾ? ಎಂಬುದರ ಬಗ್ಗ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ನಿಗದಿಯಾಗಿದ್ದರೂ ಗೊಂದಲಗಳು ಮುಂದುವರೆದಿವೆ.

ಇಂದು ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆಗೆ ಮುಹೂರ್ತ

ಇಂದು ಮಧ್ಯಾಹ್ನ 2ಕ್ಕೆ ಸಂಪುಟ ವಿಸ್ತರಣೆಗೆ ಮುಹೂರ್ತ

ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಈಗಾಗಲೇ ಸಂಪುಟ ಸೇರುವವರಿಗೆ ಸ್ವತಃ ಮುಖ್ಯಮಂತ್ರಿ ದೂರವಾಣಿ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ. ಈ ಬಗ್ಗೆ ಬಿಜೆಪಿಯ ಹಲವು ನಾಯಕರು ಈಗಾಗಲೇ ಸಂಪುಟ ಸೇರುವುದನ್ನು ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಿಜೆಪಿ ಸೇರಿ ಸರ್ಕಾರ ರಚನೆಗೆ ಸಹಾಯ ಮಾಡಿದ್ದವರಿಗೆ ಸಂಪುಟ ಸೇರುವ ಭಾಗ್ಯ ಸಿಕ್ಕಿದೆ.

ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕರಾದ ಆರ್. ಅಶೋಕ್, ಕೆ.ಎಸ್. ಈಶ್ವರಪ್ಪ, ಮುರುಗೇಶ್ ನಿರಾಣಿ, ಬಿ.ಸಿ. ಪಾಟೀಲ್, ಬಿ. ಶ್ರೀರಾಮುಲು ಅವರಿಗೆ ಸಿಎಂ ಬೊಮ್ಮಾಯಿ ಮಾಹಿತಿ ನೀಡಿರುವುದು ಖಚಿತವಾಗಿದೆ. ಇನ್ನು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಹೈಕಮಾಂಡ್ಈವರೆಗೂ ಏನನ್ನೂ ಹೇಳಿಲ್ಲ ಎನ್ನಲಾಗಿದೆ.

ಡಿಸಿಎಂ ಹುದ್ದೆ ಸೃಷ್ಟಿಯ ಬಗ್ಗೆ ಮುಂದುವರೆದ ಗೊಂದಲ?

ಡಿಸಿಎಂ ಹುದ್ದೆ ಸೃಷ್ಟಿಯ ಬಗ್ಗೆ ಮುಂದುವರೆದ ಗೊಂದಲ?

ಇನ್ನು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಕುರಿತು ಬಿಜೆಪಿ ಹೈಕಮಾಂಡ್ ಸಿಎಂ ಬೊಮ್ಮಾಯಿ ಅವರಿಗೆ ಖಚಿತವಾಗಿ ಏನನ್ನೂ ಹೇಳಿಲ್ಲ ಎಂಬ ಮಾಹಿತಿಯಿದೆ. ಹೀಗಾಗಿ ಸಂಪುಟ ವಿಸ್ತರಣೆ ವೇಳೆ ಡಿಸಿಎಂ ಹುದ್ದೆ ಬಗ್ಗೆ ಸ್ಪಷ್ಟನೆ ಸಿಗುವ ಸಾಧ್ಯತೆಗಳಿವೆ. ಜೊತೆಗೆ ಉಪ ಮುಖ್ಯಮಂತ್ರಿ ಹುದ್ದೆ ಸಾಂವಿಧಾನಿಕ ಹುದ್ದೆ ಅಲ್ಲ. ಹೀಗಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕವೂ ಯಾರಿಗೆ ಡಿಸಿಎಂ ಸ್ಥಾನ ಕೊಡಬೇಕು ಎಂಬುದನ್ನು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡುವ ಸಾಧ್ಯತೆಯಿದೆ. ಹೀಗಾಗಿ ಉಪ ಮುಖ್ಯಮಂತ್ರಿ ಹುದ್ದೆ ಗೊಂದಲ ಬಿಜೆಪಿಯಲ್ಲಿ ಮುಂದುವರೆದಿದೆ. ಜೊತೆಗೆ ಮತ್ತೊಂದು ಗೊಂದಲ ಕೂಡ ಸಿಎಂ ಬೊಮ್ಮಾಯಿ ಅವರನ್ನು ಕಾಡುತ್ತಿದೆ. ಅದು ಬಿವೈ ವಿಜಯೇಂದ್ರ ಕುರಿತಾದ ಸಂಗತಿ.

ಬೊಮ್ಮಾಯಿ ಸಂಪುಟ ಸೇರುತ್ತಾರಾ ಬಿ.ವೈ. ವಿಜಯೇಂದ್ರ?

ಬೊಮ್ಮಾಯಿ ಸಂಪುಟ ಸೇರುತ್ತಾರಾ ಬಿ.ವೈ. ವಿಜಯೇಂದ್ರ?

ಇನ್ನು ಮಾಜಿ ಸಿಎಂ ಯಡಿಯೂರಪ್ಪ ಅವರು ಕೂಡ ಪುತ್ರನಿಗೆ ಮಂತ್ರಿ ಪದವಿ ಕೊಡಿಸಲು ಕಸರತ್ತು ನಡೆಸಿದ್ದಾರೆ ಎಂಬ ಮಾಹಿತಿಯಿದೆ. ಆದರೆ ಈ ಬಗ್ಗೆ ಮಂಗಳವಾರ ರಾತ್ರಿ ಪ್ರತಿಕ್ರಿಯೆ ಕೊಟ್ಟಿದ ಸಿಎಂ ಬಸವರಾಜ ಬೊಮ್ಮಾಯಿ, "ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಿದ್ದಾರೆ. ಯಾವ ಹಿರಿಯರನ್ನು ಕೈಬಿಡಬೇಕು ಎನ್ನುವ ಬಗ್ಗೆೆ ಯಾವುದೇ ರೀತಿಯ ಚರ್ಚೆ ಮಾಡಿಲ್ಲ. 2023 ಚುನಾವಣೆಗೆ ಸಿದ್ದತೆ ಗಮನದಲ್ಲಿಟ್ಟುಕೊಂಡು ಹಿರಿಯರು ಹಾಗೂ ಕಿರಿಯರನ್ನು ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ. ಸಂಪುಟದಿಂದ ಕೈಬಿಡುವುದು ಹಾಗೂ ಸೇರಿಸುವ ನಿರ್ಧಾರವನ್ನು ಹೈಕಮಾಂಡ್ ಮಾಡಲಿದೆ" ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಆ ಮೂಲಕ ಸಂಪುಟ ವಿಸ್ತರಣೆಯಲ್ಲಿ ಗೊಂದಲ ಇರುವುದು ಅವರ ಮಾತಿನಿಂದಲೇ ತಿಳಿದು ಬಂದಿದೆ.

Recommended Video

ಅಮೇರಿಕಾನಾ ನಂಬೋದು ತುಂಬಾ ಕಷ್ಟ | Oneindia Kannada
ಹೈಕಮಾಂಡ್ ಪಟ್ಟಿ ಪ್ರಕಟ ಮಾಡುತ್ತಾ? ಸಿಎಂ ಮಾಡುತ್ತಾರಾ?

ಹೈಕಮಾಂಡ್ ಪಟ್ಟಿ ಪ್ರಕಟ ಮಾಡುತ್ತಾ? ಸಿಎಂ ಮಾಡುತ್ತಾರಾ?

ಇನ್ನು ಸಂಪುಟ ಸೇರುವವರ ಪಟ್ಟಿಯನ್ನು ಯಾರು ಬಿಡುಗಡೆ ಮಾಡುತ್ತಾರೆ ಎಂಬುದು ಕೂಡ ಕುತೂಹಲ ಮೂಡಿಸಿದೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸಂಪುಟ ಸೇರಿವವರ ಪಟ್ಟಿಯನ್ನು ರಾಜಭವನಕ್ಕೆ ಕಳಿಸಬೇಕು. ಹೀಗಾಗಿ ಹೈಕಮಾಂಡ್ ಪಟ್ಟಿ ಪ್ರಕಟಿಸಿದ ಬಳಿಕ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಪಟ್ಟಿ ಕಳುಹಿಸುತ್ತಾರಾ? ಅಥವಾ ಸುದ್ದಿಗೋಷ್ಠೀಯಲ್ಲಿ ಹೆಸರುಗಳನ್ನು ಪ್ರಕಟಿಸಿ ಸಿಎಂ ರಾಜಭವನಕ್ಕೆ ಪಟ್ಟಿಯನ್ನು ಕಳುಹಿಸುತ್ತಾರಾ ಎಂಬುದು ಕೂಡ ಈವರೆಗೆ ಸ್ಪಷ್ಟವಾಗಿಲ್ಲ.


ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ಎಷ್ಟು ಹಂತಗಳಲ್ಲಿ ವಿಸ್ತರಣೆ ಆಗುತ್ತದೆ ಎಂಬ ಗೊಂದಲ ಕೂಡ ಇನ್ನೂ ಮುಂದುವರೆದಿದೆ. ಹೀಗಾಗಿ ಇಂದು ಸಂಜೆಯವರೆಗೆ ಈ ಗೊಂದಲಗಳು ಮುಂದುವರೆಯುವ ಸಾಧ್ಯತೆಗಳಿವೆ.

English summary
Karnataka Cabinet Expansion Crisis: CM Basavaraj Bommai returning to Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X