ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ ವಿಳಂಬ, ಮಂತ್ರಿ ಸ್ಥಾನ ಆಕಾಂಕ್ಷಿಗಳಿಗೆ ಅಸಮಾಧಾನ

|
Google Oneindia Kannada News

Recommended Video

ಸಂಪುಟ ವಿಸ್ತರಣೆ ವಿಳಂಬ ಮಂತ್ರಿ ಸ್ಥಾನ ಆಕಾಂಕ್ಷಿಗಳಿಗೆ ಅಸಮಾಧಾನ | Oneindia Kannada

ಬೆಂಗಳೂರು, ಡಿಸೆಂಬರ್ 06: ಬೆಳಗಾವಿ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಲಾಗಿದ್ದು, ಇದರಿಂದ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಅಸಮಾಧಾನವಾಗಿದೆ.

ಹಲವು ಸಚಿವ ಸ್ಥಾನ ಆಕಾಂಕ್ಷಿಗಳು ಇಂದು ಬೆಂಗಳೂರಿಗೆ ಬಂದಿದ್ದು, ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಿ ಅಸಮಾಧಾನ ತೋಡಿಕೊಂಡಿದ್ದಾರೆ. ಹಲವು ಅತೃಪ್ತರು ಸಿದ್ದರಾಮಯ್ಯ ಅವರನ್ನು ಭೇಟಿ ಆಗಿದ್ದಾರೆ.

ಎಂಟಿಬಿ ನಾಗರಾಜು ಅವರು ಬಹಿರಂಗವಾಗಿ ಅತೃಪ್ತಿ ಹೊರಹಾಕಿದ್ದು, ಅಧಿವೇಶನದ ನಂತರವೂ ಇವರು ವಿಸ್ತರಣೆ ಮಾಡುವುದಿಲ್ಲ, ಧನುರ್ಮಾಸದಲ್ಲಿ ವಿಸ್ತರಣೆ ಮಾಡುತ್ತಾರಾ, ಜೆಡಿಎಸ್‌ನವರು ಮಾಡಲು ಬಿಡುತ್ತಾರಾ ಎಂದು ನಾಗರಾಜು ಹೇಳಿದ್ದಾರೆ.

ಅತೃಪ್ತ ಶಾಸಕ ಎಂಟಿಬಿಯಿಂದ ಕಾಂಗ್ರೆಸ್‌ ವಿರುದ್ಧ ಬ್ಲಾಕ್‌ಮೇಲ್‌ ತಂತ್ರ?ಅತೃಪ್ತ ಶಾಸಕ ಎಂಟಿಬಿಯಿಂದ ಕಾಂಗ್ರೆಸ್‌ ವಿರುದ್ಧ ಬ್ಲಾಕ್‌ಮೇಲ್‌ ತಂತ್ರ?

ಸತೀಶ್ ಮತ್ತು ರಮೇಶ್ ಜಾರಕಿಹೊಳಿ ಸಹೋದರರು ಸಹ ಸಮನ್ವಯ ಸಮಿತಿಯ ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

'ಡಿಸೆಂಬರ್ 22 ಕ್ಕೆ ವಿಸ್ತರಣೆ ಆಗಲ್ಲ'

'ಡಿಸೆಂಬರ್ 22 ಕ್ಕೆ ವಿಸ್ತರಣೆ ಆಗಲ್ಲ'

ಕಂಪ್ಲಿ ಶಾಸಕ ಗಣೇಶ್ ಅವರು ಒಂದು ಹೆಜ್ಜೆ ಮುಂದೆ ಹೋಗಿ, ಡಿಸೆಂಬರ್ 22 ಕ್ಕೆ ಸಂಪುಟ ವಿಸ್ತರಣೆ ಎಂದಿರುವುದು ಸುಳ್ಳು, ಲೋಕಸಭೆ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಮಾಡುವುದಿಲ್ಲ, ಇವರು ಹೇಳಿದಂತೆ ನಡೆಯುವುದಿಲ್ಲ ಎಂದು ಸುದ್ದಿಗಾರರ ಮುಂದೆ ಅಸಮಾಧಾನ ಹೊರಹಾಕಿದ್ದಾರೆ.

ಸಂಪುಟ ವಿಸ್ತರಣೆ ಸನಿಹ: ಕಾಂಗ್ರೆಸ್‌ಗೆ ಬಂಡಾಯದ ಭೀತಿ ಸಂಪುಟ ವಿಸ್ತರಣೆ ಸನಿಹ: ಕಾಂಗ್ರೆಸ್‌ಗೆ ಬಂಡಾಯದ ಭೀತಿ

'ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ'

'ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ'

ಸಿದ್ದರಾಮಯ್ಯ ಅವರ ಜೊತೆಗೆ 50 ಶಾಸಕರ ಬೆಂಬಲ ಇದ್ದು, ಅವರು ಯಾವುದೇ ಸಯದಲ್ಲಾದರೂ ಮುಖ್ಯಮಂತ್ರಿ ಆಗಬಹುದು ಎಂದು ಗಣೇಶ್ ಹೇಳಿದ್ದಾರೆ. ಇದು ರಾಜಕೀಯ ಸಂಚಲನ ಮೂಡಿಸಿದೆ.

ಸಿದ್ದರಾಮಯ್ಯ ಭೇಟಿ ಮಾಡಿದ ಸಚಿವ ಸ್ಥಾನ ಆಕಾಂಕ್ಷಿಗಳು, ಮತ್ತೆ ಲಾಬಿ ಶುರು ಸಿದ್ದರಾಮಯ್ಯ ಭೇಟಿ ಮಾಡಿದ ಸಚಿವ ಸ್ಥಾನ ಆಕಾಂಕ್ಷಿಗಳು, ಮತ್ತೆ ಲಾಬಿ ಶುರು

ಸಮನ್ವಯ ಸಮಿತಿಯಲ್ಲಿ ನಿರ್ಧಾರ

ಸಮನ್ವಯ ಸಮಿತಿಯಲ್ಲಿ ನಿರ್ಧಾರ

ನಿನ್ನೆ ಸಮನ್ವಯ ಸಮಿತಿ ಸಭೆ ಸೇರಿದ್ದ ಜೆಡಿಎಸ್-ಕಾಂಗ್ರೆಸ್ ನಾಯಕರು ಡಿಸೆಂಬರ್ 22 ಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದಿದ್ದಾರೆ. ಅಲ್ಲದೆ ನಿಗಮ, ಮಂಡಳಿಗಳೂ ಸಹ ಅದೇ ದಿನ ಹಂಚಿಕೆ ಮಾಡಲಾಗುತ್ತದೆ ಎಂದಿದ್ದರು.

ಕಾಂಗ್ರೆಸ್‌ಗೆ ಬಂಡಾಯದ ಭೀತಿ

ಕಾಂಗ್ರೆಸ್‌ಗೆ ಬಂಡಾಯದ ಭೀತಿ

ಕಾಂಗ್ರೆಸ್‌ನಲ್ಲಿ 6 ಸಚಿವ ಸ್ಥಾನಗಳು ಖಾಲಿ ಇದ್ದು, ಜೆಡಿಎಸ್‌ನಲ್ಲಿ ಎರಡು ಸ್ಥಾನಗಳು ಖಾಲಿ ಇವೆ. ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ಸಂಪುಟದಲ್ಲಿ ಸ್ಥಾನ ಸಿಗದವರು ಬಂಡಾಯ ಏಳುವ ಸಾಧ್ಯತೆ ಇದೆ, ಇದು ಕಾಂಗ್ರೆಸ್‌ ನಾಯಕರಲ್ಲಿ ಅಳುಕು ಮೂಡಿಸಿದೆ ಹಾಗಾಗಿ ಸಂಪುಟ ವಿಸ್ತರಣೆ ಮುಂದೂಡುತ್ತಾ ಬರಲಾಗಿದೆ.

English summary
Cabinet expansion delay aspirant congress MLAs express their unhappy. Congress MLA Ganesh said thees people did not do as they said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X