ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ : ದೇವೇಗೌಡ ಭೇಟಿಯಾದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜೂನ್ 09 : ಸಚಿವ ಸಂಪುಟ ವಿಸ್ತರಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಭಾನುವಾರ ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಎಚ್.ಡಿ.ಕುಮಾರಸ್ವಾಮಿ ಭೇಟಿಯಾದರು. ಸುಮಾರು ಒಂದು ಗಂಟೆಗಳ ಕಾಲ ಉಭಯ ನಾಯಕರು ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಬಿ.ಎಂ.ಫಾರೂಕ್ ಸೇರ್ಪಡೆ?ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಬಿ.ಎಂ.ಫಾರೂಕ್ ಸೇರ್ಪಡೆ?

ಜೂನ್ 12ರಂದು ಬೆಳಗ್ಗೆ 11.30ಕ್ಕೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಮೂರು ಸಚಿವ ಸ್ಥಾನಗಳು ಖಾಲಿ ಇವೆ. ಜೆಡಿಎಸ್‌ ಕೋಟಾದಲ್ಲಿ 2, ಕಾಂಗ್ರೆಸ್ ಕೋಟಾದಲ್ಲಿ 1 ಸ್ಥಾನ ಖಾಲಿ ಇದೆ.

ಕೈ ತಪ್ಪಿದ ಸಚಿವ ಸ್ಥಾನ: ಪಕ್ಷ ತೊರೆಯುವ ಸೂಚನೆ ನೀಡಿದ ಬಿಸಿ.ಪಾಟೀಲ್ಕೈ ತಪ್ಪಿದ ಸಚಿವ ಸ್ಥಾನ: ಪಕ್ಷ ತೊರೆಯುವ ಸೂಚನೆ ನೀಡಿದ ಬಿಸಿ.ಪಾಟೀಲ್

Cabinet expansion : HD Kumaraswamy meets Deve Gowda

ಜೆಡಿಎಸ್ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಪಕ್ಷದ ಚಿಂತನೆ. ಈ ಕುರಿತು ಕುಮಾರಸ್ವಾಮಿ ಅವರು ದೇವೇಗೌಡರ ಜೊತೆ ಚರ್ಚೆ ನಡೆಸಿದರು. ಇದಕ್ಕೆ ದೇವೇಗೌಡರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ವಿಸ್ತರಣೆ ದಿನಾಂಕ ಫಿಕ್ಸ್‌: ಯಾರಾಗಲಿದ್ದಾರೆ ಸಚಿವರು?ಸಚಿವ ಸಂಪುಟ ವಿಸ್ತರಣೆ ದಿನಾಂಕ ಫಿಕ್ಸ್‌: ಯಾರಾಗಲಿದ್ದಾರೆ ಸಚಿವರು?

ಅಲ್ಪ ಸಂಖ್ಯಾತ ಕೋಟಾದಲ್ಲಿ ಬಿ.ಎಂ.ಫಾರೂಕ್ ಅವರಿಗೆ ಸಚಿವ ಸ್ಥಾನ ನೀಡಿ ಮತ್ತೊಂದು ಸ್ಥಾನವನ್ನು ಪಕ್ಷೇತರ ಶಾಸಕರಿಗೆ ನೀಡುವುದು ಜೆಡಿಎಸ್ ಚಿಂತನೆ. ಈ ಕುರಿತು ದೇವೇಗೌಡರ ಜೊತೆ ಸುದೀರ್ಘ ಮಾತುಕತೆ ನಡೆಸಿದರು.

ಕಾಂಗ್ರೆಸ್ ಕೋಟಾದಲ್ಲಿ 1 ಸಚಿವ ಸ್ಥಾನ ಖಾಲಿ ಇದ್ದು ಯಾರು ಸಚಿವರಾಗಲಿದ್ದಾರೆ? ಎಂಬುದು ಇನ್ನೂ ನಿಗೂಢವಾಗಿದೆ. ಜೆಡಿಎಸ್ ಎರಡೂ ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವ ಬದಲು ಒಂದು ಸ್ಥಾನ ಉಳಿಸಿಕೊಳ್ಳಲು ತೀರ್ಮಾನಿಸಿದೆ.

English summary
Karnataka Chief Minister H.D.Kumaraswamy met the JD(S) supremo H.D.Deve Gowda in Padmanagar residence, Bengaluru. Ahead of the cabinet expansion leaders discussed various issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X