ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ : ಅತೃಪ್ತ ಎಂ.ಬಿ.ಪಾಟೀಲ್ ಜೊತೆ ಸಂಧಾನ!

By Gururaj
|
Google Oneindia Kannada News

ಬೆಂಗಳೂರು, ಜೂನ್ 06 : ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಅಸಮಾಧಾನಗೊಂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಹೆಸರನ್ನು ಕೈ ಬಿಡಲಾಗಿದ್ದು, ಬೆಂಬಲಿಗರ ಜೊತೆ ಸರಣಿ ಸಭೆ ನಡೆಸುತ್ತಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ ಕಾಂಗ್ರೆಸ್‌ನ 15 ಶಾಸಕರ ಪಟ್ಟಿ ರಾಜಭವನಕ್ಕೆ ರವಾನೆಯಾಗಿದೆ. ನೂತನ ಸಚಿವರು ಇಂದು ಮಧ್ಯಾಹ್ನ 2.11ಕ್ಕೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

'ಕೈ'ತಪ್ಪಿದ ಸಚಿವ ಸ್ಥಾನ: ಶಾಸಕರ ಅಸಮಾಧಾನ, ಬೆಂಬಲಿಗರ ಪ್ರತಿಭಟನೆ'ಕೈ'ತಪ್ಪಿದ ಸಚಿವ ಸ್ಥಾನ: ಶಾಸಕರ ಅಸಮಾಧಾನ, ಬೆಂಬಲಿಗರ ಪ್ರತಿಭಟನೆ

ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ಮೊದಲ ಹಂತದಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದ್ದರಿಂದ, ಅವರು ಅಸಮಾಧಾನಗೊಂಡಿದ್ದಾರೆ. ಮಾಜಿ ಸಚಿವರ ಬೆಂಬಲಿಗರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ.

 Cabinet Expansion : I will meet Siddaramaiah says MB Patil

'ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಯಾಕೆ ಕೈ ತಪ್ಪಿತು ಎಂಬುದು ಇನ್ನೂ ತಿಳಿದಿಲ್ಲ. ನಮ್ಮ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಯಾಗುತ್ತೇನೆ. ನಂತರ ಪ್ರತಿಕ್ರಿಯೆ ನೀಡುತ್ತೇನೆ' ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರ ಪರಿಚಯಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವ 8 ಜೆಡಿಎಸ್ ಶಾಸಕರ ಪರಿಚಯ

ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಎಂ.ಬಿ.ಪಾಟೀಲ್ ಅವರನ್ನು ಸಮಾಧಾನಪಡಿಸಲು ಕೃಷ್ಣ ಬೈರೇಗೌಡ ಸದಾಶಿವನಗರದ ಎಂ.ಬಿ.ಪಾಟೀಲ್ ನಿವಾಸಕ್ಕೆ ಆಗಮಿಸಿದ್ದರು. ಆಗ ಪಾಟೀಲ್ ಬೆಂಬಲಿಗರು ಅವರಿಗೆ ಮುತ್ತಿಗೆ ಹಾಕಿದರು.

ಸಂಪುಟದಲ್ಲಿ ಸ್ಥಾನ ಗಿಟ್ಟಿಸದ ಎಂಬಿ ಪಾಟೀಲ ರಾಜೀನಾಮೆ?ಸಂಪುಟದಲ್ಲಿ ಸ್ಥಾನ ಗಿಟ್ಟಿಸದ ಎಂಬಿ ಪಾಟೀಲ ರಾಜೀನಾಮೆ?

ಎಂ.ಬಿ.ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂ.ಬಿ.ಪಾಟೀಲ್ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ.

English summary
Major surprise in Karnataka Cabinet Expansion. Former minister M.B.Patil name has been dropped from the Congress list. I will meet Siddaramaiah said M.B.Patil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X