ಕ್ಲೀನ್‌ಚಿಟ್ ಪಡೆದ ಈಶ್ವರಪ್ಪ, ರಮೇಶ್ ಜಾರಕಿಹೊಳಿ ಶೀಘ್ರವೇ ಬೊಮ್ಮಾಯಿ ಸಂಪುಟಕ್ಕೆ?

ಬೆಂಗಳೂರು, ಜು.23: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಮತ್ತು ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಕ್ಲೀನ್‌ಚಿಟ್ ಪಡೆದುಕೊಂಡಿದ್ದು, ಈ ಇಬ್ಬರೂ ಸಹ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಶೀಘ್ರದಲ್ಲಿಯೇ ಸೇರ್ಪಡೆಯಾಗುವುದು ಖಚಿತವಾಗುತ್ತಿದೆ.

ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾತ್ರಿ ನವದೆಹಲಿಗೆ ತೆರಳಿದ್ದಾರೆ. ಭಾನುವಾರ (ಜು.23) ಬೆಂಗಳೂರಿಗೆ ವಾಪಸ್ಸಾಗಲಿದ್ದು, ರಾಷ್ಟ್ರಪತಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಮತ್ತೊಮ್ಮೆ ದೆಹಲಿಗೆ ಹೊರಡುತ್ತಾರೆ. ಈ ಮಧ್ಯದಲ್ಲಿಯೇ ಇಬ್ಬರು ಸಚಿವರ ಪ್ರಮಾಣವಚನವೂ ನಡೆದುಹೋಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇಬ್ಬರು ಪ್ರಮುಖ ನಾಯಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ಸರ್ಕಾರಕ್ಕೆ ಕಪ್ಪುಚುಕ್ಕೆಯಂತಾಗಿತ್ತು. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ಎರಡು ಪ್ರಬಲ ಸಮುದಾಯಗಳ ಹಿನ್ನೆಲೆ ಹೊಂದಿದ ನಾಯಕರಿಗೆ ಮತ್ತೆ ಮಣೆ ಹಾಕಿದಲ್ಲಿ ಅದು ಮುಂದಿನ ಅಧಿಕಾರಕ್ಕೆ ನೆರವಾಗುತ್ತದೆ ಎಂಬ ಲೆಕ್ಕಾಚಾರ ಇದೆ.

ಸದ್ಯ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ 5 ಸ್ಥಾನಗಳು ಖಾಲಿ ಇವೆ. ಸದ್ಯದ ಮಾಹಿತಿಯ ಪ್ರಕಾರ ಈ ಇಬ್ಬರು ನಾಯಕರನ್ನು ಮಾತ್ರ ಸಂಪುಟಕ್ಕೆ ತೆಗೆದುಕೊಳ್ಳಲಾಗುತ್ತದೆ. ಉಳಿದ ಯಾವ ಆಕಾಂಕ್ಷಿಗಳನ್ನೂ ಸಹ ಪರಿಗಣಿಸುವ ಸಾಧ್ಯತೆ ಇಲ್ಲ. ಇವರಿಗೆ ಈ ಹಿಂದೆ ನೀಡಿದ್ದ ಖಾತೆಯಲ್ಲಿಯೇ ಮುಂದುವರಿಯುವ ಅವಕಾಶ ನೀಡುವ ಮೂಲಕ ರಾಜೀನಾಮೆಗೆ ಕಾರಣವಾದವರಿಗೆ ಸ್ಪಷ್ಟ ಉತ್ತರ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿ-ರಿಪೋರ್ಟ್‌ಗಳ ಪರಿಶೀಲನೆ

ಬಿ-ರಿಪೋರ್ಟ್‌ಗಳ ಪರಿಶೀಲನೆ

ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಮಬಂಧಿಸಿದಂತೆ ಕೆ.ಎಸ್. ಈಶ್ವರಪ್ಪ ವಿರುದ್ಧ ಬಿ-ರಿಪೋರ್ಟ್ ಇತ್ತೀಚೆಗೆ ಸಲ್ಲಿಕೆಯಾಗಿದೆ. ಇನ್ನು ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಕ್ಷಮ ನ್ಯಾಯಾಲಯಕ್ಕೆ ಕಳೆದ ಫೆಬ್ರವರಿ ಆರಂಭದಲ್ಲಿಯೇ ಬಿ- ರಿಪೋರ್ಟ್ ಸಲ್ಲಿಸಿದೆ.

ಮಾಹಿತಿಗಳ ಪ್ರಕಾರ ಬಿಜೆಪಿ ಹೈಕಮಾಂಡ್ ನಾಯಕರು ಈ ಇಬ್ಬರೂ ನಾಯಕರ ವಿರುದ್ಧ ಸಲ್ಲಿಸಲಾಗಿರುವ ಬಿ-ರಿಪೋರ್ಟ್‌ಗಳ ಪ್ರತಿಯನ್ನು ದೆಹಲಿಗೆ ತರಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಮತ್ತೆ ಸಂಪುಟ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ. ವಿಳಂಬ ಇಲ್ಲದೆ ಕೆಲವೇ ದಿನಗಳಲ್ಲಿ ಇಬ್ಬರು ನಾಯಕರು ಸಚಿವರಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಚುನಾವಣಾ ಅಸ್ತ್ರವಾಗದಿರಲು ತಂತ್ರ

ಚುನಾವಣಾ ಅಸ್ತ್ರವಾಗದಿರಲು ತಂತ್ರ

ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ ಮತ್ತ ಪರಿಶಿಷ್ಟ ಪಂಗಡ ವಾಲ್ಮೀಕಿ ಸಮುದಾಯಕ್ಕೆ ಸೇರಿದ ರಮೇಶ್ ಜಾರಕಿಹೊಳಿ ರಾಜೀನಾಮೆಗಳು ಸರ್ಕಾರಕ್ಕೆ ಸ್ವಲ್ಪ ಮಟ್ಟಿನ ಹಿನ್ನಡೆ ಆಗಿದ್ದವು. ಅದರಲ್ಲೂ ಗುತ್ತಿಗೆ ನೀಡುವಲ್ಲಿ ಲಂಚ ಪಡೆದ ಆರೋಪ ಸರ್ಕಾರವನ್ನು ಮುಜುಗರಕ್ಕೆ ಈಡುಮಾಡಿತ್ತು. ಇದು ಮುಂದಿನ ಚುನಾವಣೆಯ ಆಸ್ತ್ರವೂ ಆಗಬಹುದು. ಈ ಹಿನ್ನೆಲೆಯಲ್ಲಿ ಈ ಇಬ್ಬರು ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡರೆ ಒಂದಷ್ಟು ಚುನಾವಣಾ ನಷ್ಟ ತಪ್ಪಿಸಬಹುದು ಎಂಬ ಲೆಕ್ಕಾಚಾರವೂ ಬಿಜೆಪಿಗೆ ಇದೆ ಎನ್ನಲಾಗಿದೆ.

ಕಾಂಗ್ರೆಸ್ ನಾಯಕರಿಗೆ ಉತ್ತರ ಕೊಡಬೇಕು

ಕಾಂಗ್ರೆಸ್ ನಾಯಕರಿಗೆ ಉತ್ತರ ಕೊಡಬೇಕು

ಕಾಂಗ್ರೆಸ್‌ನ ಇಬ್ಬರು ನಾಯಕರಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಗಲೇ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ರಾಜ್ಯ ಸುತ್ತಿತ್ತಿದ್ದಾರೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಬಿಜೆಪಿಯಲ್ಲಿ ನಿರಂತರ ಠಕ್ಕರ್ ಕೊಡುವುದಕ್ಕೆ ಈಶ್ವರಪ್ಪ ಇರಲೇಬೇಕಾಗುತ್ತದೆ. ಇನ್ನು ಡಿಕೆ ಶಿವಕುಮಾರ್ ಜೊತೆ ರಾಜಕೀಯ ವೈರತ್ವ ಹೊಂದಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನದಲ್ಲಿ ಇದ್ದರೆ, ಡಿಕೆಶಿಯವರನ್ನು ಕಟ್ಟಿಹಾಕುವುದಕ್ಕೆ ತಂತ್ರಗಳನ್ನು ಎಣೆಯುತ್ತಾರೆ ಎಂಬ ಲೆಕ್ಕಾಚಾರ ಇದೆ.

ಸೋಮವಾರವೇ ಸಂಪುಟ ಸೇರ್ಪಡೆ?

ಸೋಮವಾರವೇ ಸಂಪುಟ ಸೇರ್ಪಡೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಜು.28ಕ್ಕೆ ವರ್ಷ ತುಂಬುತ್ತದೆ. ದೊಡ್ಡಬಳ್ಳಾಪುರದಲ್ಲಿ ದೊಡ್ಡ ಮಟ್ಟದ ಸಮಾವೇಶ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕೆ ಮುನ್ನವೇ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಸಂಪುಟಕ್ಕೆ ಸೇರ್ಪಡೆಗೊಳ್ಳುತ್ತಾರೆ. ಸೋಮವಾರ ಅಂದರೆ ಜು. 25ರಂದು ಸಚಿವರ ಪ್ರಮಾಣ ವಚನವೂ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+