ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದು ರಾತ್ರಿ ಪಟ್ಟಿ ಬಿಡುಗಡೆ, ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಿಗದಿ?

|
Google Oneindia Kannada News

ಬೆಂಗಳೂರು, ಆ. 03: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈಗಾಗಲೇ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದ್ದಾರೆ. ಅದರಲ್ಲೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ನಿನ್ನೆ ರಾತ್ರಿ ಮಹತ್ವದ ಚರ್ಚೆಯನ್ನು ಮಾಡಿದ್ದರು. ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೂ ನಡ್ಡಾ ಜೊತೆಗಿನ ಚರ್ಚೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ಇಂದು ರಾತ್ರಿ ಸಂಪುಟ ಸೇರುವವರ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದರು.

ಹೀಗಾಗಿ ಇವತ್ತು ಲೋಕಸಭಾ ಕಲಾಪ ಮುಗಿದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ವಿಜೆಪಿ ವರಿಷ್ಠರು ಅಂತಿಮ ತೀರ್ಮಾನ ತೆಗದುಕೊಳ್ಳಲಿದ್ದಾರೆ ಎಂಬ ಮಾಹಿತಿಯಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಒಂದು ವಾರವಾಗುತ್ತ ಬಂದಿದೆ. ಸಂಪುಟ ವಿಸ್ತರಣೆ ಈಗಾಗಲೇ ತಡವಾಗಿದೆ.

ಹೀಗಾಗಿ ಇಂದು ರಾತ್ರಿಯೊಳಗೆ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲಿ ಯಾರು ಸೇರಬೇಕು ಎಂಬುದು ತೀರ್ಮಾನವಾಗಲಿದೆ ಎಂಬ ಮಾಹಿತಿ ದೆಹಲಿ ಬಿಜೆಪಿ ವಲಯದಿಂದ ಬಂದಿದೆ. ಜೊತೆಗೆ ಆಗಸ್ಟ್‌ 4 ರಂದು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂಬ ಮಾಹಿತಿಯಿತ್ತು. ಆದರೆ ನೂತನ ಸಚಿವರ ಪಟ್ಟಿ ಬಿಡುಗಡೆಯಾದಲ್ಲಿ ಬೇಗನೆ ಪ್ರಮಾಣ ವಚನ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಬಂದಿದ್ದು, ಎರಡು ಹಂತಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ತೀರ್ಮಾನ ಮಾಡಿದೆ ಎನ್ನಲಾಗಿದೆ.

ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ?

ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ?

ಇಂದು ರಾತ್ರಿ ಬಿಜೆಪಿ ಹೈಕಮಾಂಡ್ ರಾಜ್ಯ ಸಚಿವ ಸಂಪುಟದ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಿದೆ. ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಯಾರು ಇರಬೇಕು ಎಂಬುದು ಅಂತಿಮವಾಗಲಿದೆ. ಇಂದು ರಾತ್ರಿಯೇ ನೂತನ ಸಚಿವರ ಪಟ್ಟಿಯನ್ನು ಹೈಕಮಾಂಡ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಡಲಿದೆ. ಇಂದು ರಾತ್ರಿ ಪಟ್ಟಿ ಪ್ರಕಟವಾದಲ್ಲಿ ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ಮಾಡಿ ಮುಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀರ್ಮಾನ ಮಾಡಿದ್ದಾರೆ ಎನ್ನಲಾಗುತ್ತಿದೆ. ಅದಕ್ಕೆ ಕಾರಣವೂ ಇದೆ.

ಹೈಕಮಾಂಡ್ ಬಿಡುಗಡೆ ಮಾಡುವ ಪಟ್ಟಿಯಲ್ಲಿ ಹೆಸರು ಇಲ್ಲದವರು ಅಸಮಾಧಾನಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಹೈಕಮಾಂಡ್ ಪಟ್ಟಿ ಕೊಟ್ಟ ಕೂಡಲೇ ಮೊದಲ ಹಂತದ ಮಂತ್ರಿ ಮಂಡಲ ವಿಸ್ತರಣೆ ಆಗಲಿದೆ ಎನ್ನಲಾಗಿದೆ.

ಎರಡು ಹಂತಗಳಲ್ಲಿ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆ

ಎರಡು ಹಂತಗಳಲ್ಲಿ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆ

ಎರಡು ಹಂತಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ವರಿಷ್ಠರು ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಪ್ರಕಟವಾಗುವ ಮೊದಲ ಪಟ್ಟಿಯಲ್ಲಿ ನಾಳೆ ಮಂತ್ರಿಯಾಗುವ 24-25 ಜನರ ಹೆಸರುಗಳನ್ನು ಪ್ರಕಟಿಸಲು ತೀರ್ಮಾನ ಮಾಡಲಾಗಿದೆ. ಹೀಗಾಗಿ ಮೊದಲ ಹಂತದ ಸಂಪುಟ ವಿಸ್ತರಣೆ ಬಳಿಕ ಉಂಟಾಗುವ ಬೆಳವಣಿಗೆಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಇನ್ನುಳಿಯುವ 8-9 ಮಂತ್ರಿ ಸ್ಥಾನಗಳನ್ನು ಭರ್ತಿ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ ಎನ್ನಲಾಗಿದೆ.

ಈ ಮೊದಲು ಒಂದೇ ಹಂತದಲ್ಲಿ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿತ್ತು. ಆದರೆ ಹಾಗೆ ಮಾಡಿದಲ್ಲಿ ಗೊಂದಲಗಳಾಗುವ ಸಾಧ್ಯತೆಗಳಿದ್ದು, ಎರಡು ಹಂತಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಸಂಸತ್ ಕಲಾಪದ ಬಳಿಕ ನಡೆಯಲಿದೆ ಮಹತ್ವದ ಸಭೆ

ಸಂಸತ್ ಕಲಾಪದ ಬಳಿಕ ನಡೆಯಲಿದೆ ಮಹತ್ವದ ಸಭೆ

ಇಂದು ಸಂಜೆ ಸಂಸತ್ ಕಲಾಪ ನಾಳೆಗೆ ಮುಂದೂಡಿದ ಬಳಿಕ ಬಿಜೆಪಿ ರಾಷ್ಟ್ರೀಯ ವರಿಷ್ಠರು ಸಭೆ ಸೇರಲಿದ್ದಾರೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಭೆ ಸೇರಿ ಕರ್ನಾಟಕದ ಸಂಪುಟವನ್ನು ಅಂತಿಮಗೊಳಿಸಲಿದ್ದಾರೆ ಎಂಬ ಮಾಹಿತಿಯಿದೆ.

ಸಂಪುಟ ರಚನೆ ಹಿನ್ನೆಲೆಯಲ್ಲಿ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ನಿನ್ನೆ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾಗ ಎರಡ್ಮೂರು ವಿಂಗಡಣೆಗಳ ಪಟ್ಟಿಯನ್ನು ಕೊಟ್ಟಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಟ್ಟಿರುವ ಮಾಹಿತಿ ಆಧರಿಸಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಸಲಹೆ ಮೇರೆಗೆ ಸಚಿವ ಸಂಪುಟ ಸೇರುವವರ ಪಟ್ಟಿ ಅಂತಿಮವಾಗಲಿದೆ ಎಂದು ತಿಳಿದು ಬಂದಿದೆ.

Recommended Video

ದೆಹಲಿಯಲ್ಲೇ ಬೀಡುಬಿಟ್ಟಿರುವ ಬಸವರಾಜ್ ಬೊಮ್ಮಾಯಿ! | Oneindia Kannada
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಬಿ.ವೈ. ವಿಜಯೇಂದ್ರ?

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಬಿ.ವೈ. ವಿಜಯೇಂದ್ರ?

ಇನ್ನು ಮತ್ತೊಂದು ಮಹತ್ವದ ಬೆಳವಣಿಗೆ ಬಿಜೆಪಿಯಲ್ಲಿ ಆಗುತ್ತಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿ ಮುಖ್ಯಮಂತ್ರಿ ಹುದ್ದೆ ತ್ಯಾಗ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಿಎಂ ಬೊಮ್ಮಾಯಿ ಸಂಪುಟ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಯಲ್ಲಿದ್ದಾರೆ. ಹೀಗಾಗಿ ಈ ಮಾಹಿತಿಗೆ ಹೆಚ್ಚಿನ ಮಹತ್ವ ಬಂದಿದೆ.

ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಬಿ.ವೈ. ವಿಜಯೇಂದ್ರ, ಸಚಿವ ಸಂಪುಟ ಸೇರ್ಪಡೆ ಕುರಿತು ಪ್ರಶ್ನೆಗೆ ನೇರವಾಗಿ ಉತ್ತರಿಸಿಲ್ಲ. ಬದಲಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕುರಿತು ಭಾರತೀಯ ಜನತಾ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ವಿಜಯೇಂದ್ರ ಅವರು ಸಿಎಂ ಬೊಮ್ಮಾಯಿ ಸಂಪುಟದ ಸದಸ್ಯರಾಗುತ್ತಾರಾ? ಎಂಬ ಚರ್ಚೆಗೆ ಇಂದು ರಾತ್ರಿ ಉತ್ತರ ಸಿಗಲಿದೆ.

English summary
Karnataka Cabinet Expansion: If the BJP High Command releases the new ministers list today, there will be an oath taking ceremony on aug 4 otherwise it is on August 4. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X