ಸಂಪುಟ ವಿಸ್ತರಣೆ : ಡಿ.20ರ ಸಂಜೆ 4 ಗಂಟೆಗೆ ಮಹತ್ವದ ಸಭೆ

ಬೆಂಗಳೂರು, ಡಿಸೆಂಬರ್ 19 : ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಸಭೆ ನಡೆಸಲಿದ್ದಾರೆ.

ಡಿಸೆಂಬರ್ 20ರ ಸಂಜೆ 4 ಗಂಟೆಗೆ ರಾಹುಲ್ ಗಾಂಧಿ ಅವರ ಜೊತೆ ಸಭೆ ನಿಗದಿಯಾಗಿದೆ. ಕೆಪಿಸಿಸಿ ಅಧ್ಯ್ಕಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್‌ ಪಕ್ಷಕ್ಕೆ ಸಿಗಲಿವೆ. ಸಂಪುಟ ಸೇರುವ 6 ಶಾಸಕರ ಪಟ್ಟಿಯನ್ನು ಹಿಡಿದು ನಾಯಕರು ದೆಹಲಿಗೆ ತೆರಳಲಿದ್ದಾರೆ.

Cabinet Expansion : Meeting with Rahul Gandhi on Dec 20

ಸಂಪುಟ ಪುನಾರಚನೆಯಾಗಬೇಕು ಎಂಬ ಬೇಡಿಕೆಯೂ ಇದೆ. ಆದ್ದರಿಂದ, ಯಾರನ್ನು ಸಂಪುಟದಿಂದ ಕೈಬಿಡಲಾಗುತ್ತದೆ? ಎಂದು ದೆಹಲಿಯಲ್ಲಿಯೇ ತೀರ್ಮಾನವಾಗಲಿದೆ. ಡಿಸೆಂಬರ್ 22ರಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+